ETV Bharat / state

ಉಡುಪಿ; ಪ್ರಿಯಕರನ ಜೊತೆಗಿನ ಮಗಳ ಖಾಸಗಿ ವಿಡಿಯೋ ಹರಿಬಿಟ್ಟ ತಂದೆ: ದೂರು ನೀಡಿದ ತಾಯಿ - Daughter private video viral - DAUGHTER PRIVATE VIDEO VIRAL

ತಂದೆಯೇ ತನ್ನ ಮಗಳ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಆರೋಪ ಉಡುಪಿ ಜಿಲ್ಲೆಯಲ್ಲಿ ಕೇಳಿಬಂದಿದೆ. ಈ ಕುರಿತು ಉಡುಪಿಯ ಸೆನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Daughter private video viral  social media
ಉಡುಪಿಯ ಸೆನ್ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Jul 13, 2024, 2:49 PM IST

ಉಡುಪಿ: ಪಡುಬಿದ್ರಿಯಲ್ಲಿ ವ್ಯಕ್ತಿಯೋರ್ವ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್​ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ವಿವರ: ಆರೋಪಿಯ ಪುತ್ರಿಯು ತೀರ್ಥಹಳ್ಳಿಯ ತಮ್ಮ ಸಂಬಂಧಿ ಆಗಿರುವ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಅಂತೆಯೇ ತನ್ನ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಆರೋಪಿ ತಂದೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್​ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್​ಗೆ ವರ್ಗಾಯಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್​ಗಳಿಗೆ ಕಳುಹಿಸಿದ್ದಾನೆ ಎಂದು ದೂರಲಾಗಿದೆ.

ಇದಕ್ಕೆ ಆರೋಪಿಯ ಪತ್ನಿ ಅಂದರೆ ಯುವತಿಯ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ತನ್ನ ಪತ್ನಿ ಮತ್ತು ಪುತ್ರಿಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ಕುರಿತು ಪತ್ನಿಯು ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಇದಾದ ನಂತರ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಗೆ ತೆರಳಿದ್ದಾಳೆ. ಆದರೂ ಬಿಡದೆ ಅಲ್ಲಿಗೂ ಹೋಗಿ ಆರೋಪಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ತುಮಕೂರು: ಸಾಲ ತೀರಿಸಲಾಗದೇ ಸಂಬಂಧಿಕರ ಮಗಳನ್ನೇ ಜೀತಕ್ಕಿಟ್ಟ ದಂಪತಿ - Bondage Labour

ETV Bharat Logo

Copyright © 2025 Ushodaya Enterprises Pvt. Ltd., All Rights Reserved.