ETV Bharat / state

ಹಾವೇರಿ: ತನ್ನೊಂದಿಗೆ ನಿಶ್ಚಿತಾರ್ಥವಾಗಿದ್ದ ಸೊಸೆ ಮದುವೆಗೆ ನಿರಾಕರಣೆ; ಕನ್ಯೆಯನ್ನು ಕೊಂದಾಕಿದ ಮಾವ - woman kill in Haveri

ತನ್ನೊಂದಿಗೆ ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವ ಕೊಂದು ಹಾಕಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

father in law  killed his daughter in law
ತನ್ನೊಂದಿಗೆ ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಕೊಂದು ಹಾಕಿದ ಮಾವ
author img

By ETV Bharat Karnataka Team

Published : Mar 19, 2024, 12:48 PM IST

ಹಾವೇರಿ: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವ ಕೊಲೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ಯುವತಿಯನ್ನು 21 ವರ್ಷದ ದೀಪಾ ಗೊಂದಿ ಎಂದು ಗುರುತಿಸಲಾಗಿದೆ. 35 ವರ್ಷದ ಮಾಲತೇಶ ಬಾರ್ಕಿ ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ: ಆರೋಪಿ ಮಾಲತೇಶ್ ತನ್ನ ಸೊಸೆ ದೀಪಾಳೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ನಿಶ್ಚಿತಾರ್ಥದ ನಂತರ ಮಾವನೊಂದಿಗೆ ಮದುವೆಯಾಗಲು ದೀಪಾ ನಿರಾಕರಿಸಿದ್ದರಿಂದ ಈ ಕೊಲೆಗೆ ಕಾರಣ ಎನ್ನಲಾಗಿದೆ.

ಏಪ್ರೀಲ್ 22ರಂದು ಮಾಲತೇಶ್ ಜೊತೆ ದೀಪಾ ಮದುವೆ ಫಿಕ್ಸ್ ಆಗಿತ್ತು‌. ಈ ಮದುವೆಗೆ ನಿರಾಕರಿಸಿದ್ದಕ್ಕೆ ಆರೋಪಿ ಮಾಲತೇಶ ದೀಪಾಳನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮಾಲತೇಶನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ‌. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ: ಗಡ್ಚಿರೋಲಿ ಎನ್​ಕೌಂಟರ್​: ನಾಲ್ವರು ನಕ್ಸಲರ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.