ETV Bharat / state

ಡೆಂಗ್ಯೂ ಟೆಸ್ಟಿಂಗ್: ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಆಸ್ಪತ್ರೆಗಳಿಗೆ ಕಡಿವಾಣ: 600 ರೂ. ದರ ನಿಗದಿಪಡಿಸಿ ಸರ್ಕಾರದ ಆದೇಶ - Dengue testing rate - DENGUE TESTING RATE

ಆರೋಗ್ಯ ಇಲಾಖೆ ಡೆಂಗ್ಯೂ ಟೆಸ್ಟಿಂಗ್​ಗೆ ದರ ನಿಗದಿಪಡಿಸಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗ್ಯೂ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ ಎಂದು ಆದೇಶಿಸಿದೆ.

Department of Health
ಆರೋಗ್ಯ ಇಲಾಖೆ (ETV Bharat)
author img

By ETV Bharat Karnataka Team

Published : Jul 3, 2024, 10:41 PM IST

ಬೆಂಗಳೂರು : ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ, ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್​ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

dengue testing rate
ಡೆಂಗ್ಯೂ ಟೆಸ್ಟಿಂಗ್​ಗೆ ದರ ನಿಗದಿ (ETV Bharat)

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್​ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್​ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್​ಗಳಿಗೆ ತಲಾ 300 ರೂ. ಗಳನ್ನು ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗ್ಯೂ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಸಿಇಒ ಜೊತೆ ನಾಳೆ ಆರೋಗ್ಯ ಸಚಿವರ ಸಭೆ : ಡೆಂಗ್ಯೂ ಜ್ವರ ನಿಯಂತ್ರಣ ಮುಂಜಾಗ್ರತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಾಳೆ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗ್ಯೂ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.

ಇದನ್ನೂ ಓದಿ : ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ ಚಿಕಿತ್ಸೆಗೆ ದರ ನಿಗದಿ ಗೊಳಿಸಿ ಆದೇಶ ಹೊರಡಿಸುತ್ತೇವೆ: ಸಚಿವ ದಿನೇಶ್ ಗುಂಡೂರಾವ್ - Dinesh Gundurao

ETV Bharat Logo

Copyright © 2025 Ushodaya Enterprises Pvt. Ltd., All Rights Reserved.