ETV Bharat / state

ವಕೀಲರ ಸಂರಕ್ಷಣಾ ಕಾಯಿದೆ ಜಾರಿ: ಇನ್ಮುಂದೆ ವಕೀಲರಿಗೆ ಬೆದರಿಕೆ, ಕಿರುಕುಳ ಕೊಟ್ಟರೆ ಶಿಕ್ಷೆ ತಪ್ಪದು! - Advocates Protection Act - ADVOCATES PROTECTION ACT

ವಕೀಲರ ರಕ್ಷಣೆಗಾಗಿ ‘ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023’ ರಾಜ್ಯದಲ್ಲಿ ಜಾರಿಗೆ ಬಂದಿದೆ.

ವಿಧಾನಸೌಧ
ವಿಧಾನಸೌಧ (ETV Bharat)
author img

By ETV Bharat Karnataka Team

Published : Jun 12, 2024, 10:58 PM IST

ಬೆಂಗಳೂರು: ರಾಜ್ಯದ ವಕೀಲ ಸಮುದಾಯದ ರಕ್ಷಣೆಗಾಗಿ ‘ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023’ ಜಾರಿಗೆ ಬಂದಿದೆ. ರಾಜ್ಯ ಸರ್ಕಾರ ಜೂನ್ 10ರಂದು ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, ಆ ದಿನದಿಂದಲೇ ಕಾಯ್ದೆ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಅದರಂತೆ, ಇನ್ನು ಮುಂದೆ ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದನ್ನು ನಿಷೇಧಿಸಲಾಗಿದೆ. ಒಂದೊಮ್ಮೆ ಇಂತಹ ಕೃತ್ಯಗಳು ನಡೆದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗಲಿದೆ.

ಯಾವುದೇ ವ್ಯಕ್ತಿಯು ನ್ಯಾಯವಾದಿಯ ಮೇಲೆ ಹಿಂಸಾಚಾರದಂಥ ಕೃತ್ಯ ಎಸಗುವಂತಿಲ್ಲ. ಒಂದು ವೇಳೆ ಹಲ್ಲೆ, ಹಿಂಸಾಚಾರ ನಡೆಸಿದರೆ ಅಂತಹ ವ್ಯಕ್ತಿಯು 6 ತಿಂಗಳಿಂದ ಮೂರು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ಗಳವರೆಗೆ ವಿಸ್ತರಿಸಬಹುದಾದ ದಂಡ ಭರಿಸಬೇಕಾಗುತ್ತದೆ ಅಥವಾ ಜೈಲುವಾಸ ಮತ್ತು ದಂಡ ಎರಡರಿಂದಲೂ ಶಿಕ್ಷಿತನಾಗಬಹುದು ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ.

ಕಾಯ್ದೆಯ ಪ್ರಮುಖಾಂಶಗಳು:

  • ವಕೀಲರು ಬೆದರಿಕೆ, ಅಡ್ಡಿ, ಕಿರುಕುಳ ಅಥವಾ ಅನುಚಿತ ಹಸ್ತಕ್ಷೇಪ ರಹಿತವಾಗಿ ತಮ್ಮ ಎಲ್ಲಾ ವೃತ್ತಿಪರ ಕಾರ್ಯ ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗಬೇಕು.
  • ವಕೀಲರು ದೇಶ ಮತ್ತು ವಿದೇಶ ಎರಡರಲ್ಲಿಯೂ ಮುಕ್ತವಾಗಿ ಪ್ರಯಾಣಿಸಲು ಮತ್ತು ಅವರ ಕಕ್ಷಿದಾರರೊಂದಿಗೆ ಸಮಾಲೋಚಿಸಲು ಸಾಧ್ಯವಾಗಬೇಕು.
  • ವಕೀಲರು ಮಾನ್ಯ ಮಾಡಿದ ವೃತ್ತಿಪರ ಕರ್ತವ್ಯಗಳು ಮತ್ತು ನೈತಿಕತೆಗಳ ಅನುಸಾರವಾಗಿ ತೆಗೆದುಕೊಂಡ ಕ್ರಮಕ್ಕಾಗಿ ಅಭಿಯೋಜನೆ ಅಥವಾ ಆಡಳಿತಾತ್ಮಕ, ಆರ್ಥಿಕ ಅಥವಾ ಇತರೆ ನಿರ್ಬಂಧಗಳನ್ನು ಅನುಭವಿಸತಕ್ಕದ್ದಲ್ಲ ಅಥವಾ ಭಯಪಡತಕ್ಕದ್ದಲ್ಲ ಎಂಬುದನ್ನು ಸರ್ಕಾರ ಖಚಿತಪಡಿಸಬೇಕು.
  • ವಕೀಲರ ತಮ್ಮ ಕರ್ತವ್ಯ ನಿರ್ವಹಣೆ ಮಾಡುವಾಗ ಅವರ ಭದ್ರತೆಗೆ ಬೆದರಿಕೆ ಒಡ್ಡಿದಾಗ ಸಂಬಂಧಿಸಿದ ಪ್ರಾಧಿಕಾರ ಅವರನ್ನು ಸಂಪೂರ್ಣವಾಗಿ ಸಂರಕ್ಷಿಸುವುದು.
  • ನ್ಯಾಯವಾದಿಗಳು ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸುವುದಕ್ಕಾಗಿ ಹಾಗೂ ಅದಕ್ಕೆ ಸಂಬಂಧಿಸಿದ ಮತ್ತು ಪ್ರಾಸಂಗಿಕವಾದ ವಿಷಯಗಳಿಗಾಗಿ ಅವರ ಮೇಲಿನ ಹಿಂಸೆಯನ್ನು ನಿಷೇಧಿಸಿ ಅವರಿಗೆ ರಕ್ಷಣೆ ನೀಡುವುದು ಕಾಯ್ದೆಯ ಮೂಲ ಉದ್ದೇಶ.

2020ರಲ್ಲಿ ಕರ್ನಾಟಕ, ಆಂಧ್ರಪ್ರದೇಶ, ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ಕಡೆ ವಕೀಲರ ಮೇಲೆ ಹಲ್ಲೆ ನಡೆದ ಘಟನೆಗಳು ವರದಿಯಾದ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆ ರೂಪುಗೊಳ್ಳಬೇಕು ಎಂಬ ಬಲವಾದ ಕೂಗು ವಕೀಲರ ಸಮುದಾಯದಲ್ಲಿ ಎದ್ದಿತ್ತು. ಬೆಂಗಳೂರು ವಕೀಲರ ಸಂಘ ಸೇರಿದಂತೆ ವಿವಿಧ ವಕೀಲ ಸಂಘಟನೆಗಳು ಈ ಕುರಿತು ಸರ್ಕಾರಗಳ ಗಮನ ಸೆಳೆದು ಹೋರಾಟ ನಡೆಸಿದ್ದವು.

2023ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಲಾಗಿತ್ತು. ಈ ವರ್ಷ ಫೆಬ್ರವರಿಯಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧೇಯಕಕ್ಕೆ ಅನುಮೋದನೆ ದೊರಕಿತ್ತು. ಮಾರ್ಚ್ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಇದೀಗ ಜೂ.10ರಂದು ಕಾಯ್ದೆ ಜಾರಿಗೊಳಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಹೆಚ್‌ಎಸ್‌ಆರ್‌ಪಿ ನಂಬರ್ ಅಳವಡಿಸದ ವಾಹನ ಮಾಲೀಕರು ಮತ್ತೆ ನಿರಾಳ - HSRP Number Plate

ETV Bharat Logo

Copyright © 2025 Ushodaya Enterprises Pvt. Ltd., All Rights Reserved.