ETV Bharat / state

ಲೋಕಸಭಾ ಚುನಾವಣೆಯಷ್ಟೇ ರಣರೋಚಕವಾಗುತ್ತಾ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ? - by election

author img

By ETV Bharat Karnataka Team

Published : Jul 3, 2024, 12:46 PM IST

ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗದಿದ್ದರೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಾಯಕರು ಮಾತ್ರ ಜಿದ್ದಾಜಿದ್ದಿಗೆ ರೆಡಿಯಾಗುತ್ತಿದ್ದಾರೆ.

ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆ
ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆ (ETV Bharat)

ಬೆಂಗಳೂರು: ಲೋಕಸಭಾ ಚುನಾವಣೆಯಷ್ಟೇ ರಣರೋಚಕವಾಗಲಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಸೂಕ್ತ ಮತ್ತು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿವೆ.

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿವೆ. ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸಸ ಡಾ. ಸಿ.ಎನ್‌. ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್​ನಿಂದ ಕೆಪಿಸಿಸಿ ಅಧ್ಯಕ್ಷ .ಡಿ.ಕೆ. ಶಿವಕುಮಾರ್​​​​​ ಅವರು ಕಣಕ್ಕಿಳಿಯಲಿರುವ ಬಗ್ಗೆ ಚರ್ಚೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ಮೈತ್ರಿಕೂಟದಲ್ಲಿ ರಾಜಕೀಯ ಲೆಕ್ಕಾಚಾರಗಳು ತೀವ್ರಗೊಂಡಿವೆ. ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪಕ್ಷದಲ್ಲಿ ಪ್ರಾಥಮಿಕ ಹಂತದಲ್ಲಿ ಮಾತ್ರ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್‌‍ಗೆ ಠಕ್ಕರ್‌ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ರಣತಂತ್ರ ರೂಪಿಸಿವೆ. ಅಂತಿಮವಾಗಿ ಕೇಂದ್ರ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಸೂಚನೆ ನೀಡಲಾಗಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಭದ್ರಕೋಟೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ ಒಕ್ಕಲಿಗ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಡಿ. ಕೆ. ಶಿವಕುಮಾರ್‌ ಅವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಲಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ನಿಂದ ಡಿ.ಕೆ. ಶಿವಕುಮಾರ್‌ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ. ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್‌ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ಹಾಗೂ ಕಾಂಗ್ರೆಸ್‌‍ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ. ಸಿ.ಎನ್‌. ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ತಂತ್ರಗಾರಿಕೆ ಮಾಡಿವೆ. ಅನಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ.

ಒಂದು ವೇಳೆ ಅನುಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚಿಗಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಜೊತೆಗೆ ಚನ್ನಪಟ್ಟಣದಲ್ಲಿ ರಾಜೀನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌‍ ಗೆಲುವು ಸಾಧಿಸಿ, ಕ್ಷೇತ್ರದಲ್ಲಿ ಜೆಡಿಎಸ್‌‍ ಉಳಿಸಿಕೊಳ್ಳುವುದು ಹೆಚ್​ಡಿಕೆಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಚನ್ನಪಟ್ಟಣ ಕ್ಷೇತ್ರ; ಇನ್ನೊಂದೆಡೆ ಸಿ.ಪಿ. ಯೋಗೇಶ್ವರ್​ ಸಹ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಹೆಚ್.ಡಿ‌. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಜೊತೆಗೆ ಈಗಾಗಲೇ ಒಂದೆರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಈಗಾಗಲೇ ಕಾಲಿಟ್ಟಿರುವ ಡಿ. ಕೆ. ಶಿವಕುಮಾರ್​ ಅವರು, "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಎಂಬ ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ತಿಳಿಯಲು ಮುಂದಾಗಿದ್ದಾರೆ. ಇದೇ ವೇಳೆ ಅನ್ಯ ಪಕ್ಷಗಳಲ್ಲಿರುವ ಮುಖಂಡರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಕೆಲಸವನ್ನೂ ಡಿಕೆಶಿ ಅವರು ಮಾಡುತ್ತಿದ್ದಾರೆ.

ಶಿಗ್ಗಾವಿ ಕ್ಷೇತ್ರ; ಇನ್ನು, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿರುವ ಹಿನ್ನಲೆ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಪುತ್ರ ಭರತ್‌ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕುಟುಂಬದವರಿಗೆ ಟಿಕೆಟ್‌ ಕೊಟ್ಟರೆ ಬೊಮ್ಮಾಯಿ ಅವರೇ ವಿಶೇಷ ಗಮನಹರಿಸಿ ಪುತ್ರನನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಒತ್ತಡವೂ ಕೇಳಿಬಂದಿದೆ. ಇದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಎರಡೂ ಚುನಾವಣೆಗಳಲ್ಲಿ ಸೋತು ರಾಜಕೀಯ ಅತಂತ್ರಕ್ಕೆ ಸಿಲುಕಿರುವ ಬಿ.ಶ್ರೀರಾಮುಲು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯಲು ಹವಣಿಸುತ್ತಿದ್ದಾರೆ.

ಸಂಡೂರು ಕ್ಷೇತ್ರ; ಬಳ್ಳಾರಿ ಸಂಸದ ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಮುಲು ಟಿಕೆಟ್‌ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಆದರೆ ಎರಡು ಚುನಾವಣೆಗಳಲ್ಲಿ ಸೋತಿರುವ ಶ್ರೀರಾಮುಲ್​ ಬದಲಿಗೆ ತಮ್ಮ ಆಪ್ತ ಕೆ.ಎಸ್‌‍. ದಿವಾಕರ್​ ಬಾಬುಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

ಒಟ್ಟಾರೆ, ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೂ ಚುನಾವಣೆ ದಿನಾಂಕ ಘೋಷಣೆಯಾಗದಿದ್ದರೂ, ಮೂರು ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಮಾತ್ರ ನಿಗೂಢವಾಗಿದೆ.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ: ಡಿಸಿಎಂ ಡಿ ಕೆ ಶಿವಕುಮಾರ್ - DCM DK Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.