ETV Bharat / state

ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳಿಗೆ ದಂಡದ ಬಿಸಿ - E TAXI - E TAXI

ಬೆಂಗಳೂರು ನಗರದಲ್ಲಿ ಇ-ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಸಮರ ಸಾರಿದ್ದು, ನಿನ್ನೆಯಿಂದಲೇ ದಂಡದ ಎಚ್ಚರಿಕೆ ನೀಡಿದೆ.

Bengaluru  transport department
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jul 6, 2024, 9:42 AM IST

ಬೆಂಗಳೂರು: ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ವಿರುದ್ಧ ಸಾರಿಗೆ ಇಲಾಖೆಗಳು ಸಮರ ಸಾರಿವೆ. ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಗುರುವಾರ ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ನಗರದ 11 ಆರ್​ಟಿಒ ಕಚೇರಿಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಒಳಗೊಂಡಂತೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಬೈಕ್ ಟ್ಯಾಕ್ಸಿ ಸೇವೆಗಳಿಂದಾಗಿ ರಾಜ್ಯದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್‌ ಮತ್ತಿತರ ಬಾಡಿಗೆ ವಾಹನಗಳ ಚಾಲಕರು ಸಂಕಷ್ಟ ಎದುರಿಸುತ್ತಿದ್ದಾರೆ. ಬಾಡಿಗೆ ವಾಹನಗಳ ಚಾಲಕರ ವಿರೋಧದ ನಡುವೆಯೂ ಸಹ ರ‍್ಯಾಪಿಡೋ, ಓಲಾ ಮತ್ತಿತರ ಕಂಪನಿಗಳ ಬೈಕ್ ಟ್ಯಾಕ್ಸಿಗಳು ಕಾರ್ಯ ನಿರ್ವಹಿಸುತ್ತಲೇ ಇವೆ. ಈಗಾಗಲೇ 2021ರಲ್ಲಿ ಆಟೋ, ಟ್ಯಾಕ್ಸಿ ವಾಹನಗಳ ಚಾಲಕರು ಮತ್ತು ಮಾಲೀಕರ ಸಂಘಟನೆಯ ವತಿಯಿಂದ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಿತ್ತು. ಆದಾಗ್ಯೂ ಸಹ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿವೆ. ತಕ್ಷಣ ಅವುಗಳಿಗೆ ಕಡಿವಾಣ ಹಾಕುವಂತೆ ಗುರುವಾರ ಖಾಸಗಿ ಸಾರಿಗೆ ವಾಹನಗಳ ಸಂಘಟನೆಗಳ ಒಕ್ಕೂಟ ಸಾರಿಗೆ ಇಲಾಖೆಯ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇಂದಿನಿಂದ ಸಾರಿಗೆ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು, ನಿನ್ನೆಯಿಂದಲೇ (ಶುಕ್ರವಾರ) ದಂಡದ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಕೈಗಾರಿಕೆ ಇಲಾಖೆಯ ನೇಮಕಾತಿಯಲ್ಲಿ ಅಕ್ರಮ ಆರೋಪ: ಮುರುಗೇಶ್ ನಿರಾಣಿ ವಿಚಾರಣೆಗೆ ಅಸ್ತು, ಬಂಧಿಸದಂತೆ ಆದೇಶ - Murugesh Nirani

ETV Bharat Logo

Copyright © 2025 Ushodaya Enterprises Pvt. Ltd., All Rights Reserved.