ETV Bharat / state

ದೃಶ್ಯ ಮಾಧ್ಯಮಗಳು ತಪ್ಪು ವರದಿ ಮಾಡಿವೆ: ರಂಭಾಪುರಿ ಶ್ರೀ

ಇತ್ತೀಚೆಗೆ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳ ವಿರುದ್ಧ ಭಕ್ತರ ಗುಂಪೊಂದು ಪ್ರತಿಭಟನೆ ನಡೆಸಿತ್ತು. ಇದರ ಬಗ್ಗೆ ರಂಭಾಪುರಿ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

Rambhapuri Shri  visual media  ದೃಶ್ಯ ಮಾಧ್ಯಮ  ತಪ್ಪು ವರದಿ  ರಂಭಾಪುರಿ ಶ್ರೀಗಳು
ರಂಭಾಪುರಿ ಶ್ರೀಗಳು ಮತ್ತು ಎಸ್​ಪಿ ಅಮರನಾಥ ರೆಡ್ಡಿ ಹೇಳಿಕೆ
author img

By ETV Bharat Karnataka Team

Published : Feb 19, 2024, 2:12 PM IST

ರಂಭಾಪುರಿ ಶ್ರೀಗಳು ಮತ್ತು ಎಸ್​ಪಿ ಅಮರನಾಥ ರೆಡ್ಡಿ ಹೇಳಿಕೆ

ಬಾಗಲಕೋಟೆ: ಕಲಾದಗಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಉದಗಟ್ಟಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶ್ರೀಗಳು, ದೃಶ್ಯ ಮಾಧ್ಯಮಗಳು ತಪ್ಪು ವರದಿ ಮಾಡಿವೆ. ಇದರಿಂದ ನಾಡಿನ ಜನ ದಿಗ್ಭ್ರಾಂತರಾಗಿದ್ದಾರೆ. ಘಟನೆಗೂ ರಂಭಾಪುರಿ ಶ್ರೀಗಳಿಗೂ ಯಾವುದೇ ರೀತಿಯ ಸಂಬಂಧ ಇರೋದಿಲ್ಲ. ಅಂತಹ ಯಾವುದೇ ಘಟನೆಗಳು ಸಹ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಕಲಾದಗಿ ಮಠದ ವಿವಾದ ಕೋರ್ಟ್​ನಲ್ಲಿ ಇರುವುದರಿಂದ ಅದರ ಬಗ್ಗೆ ಅಥವಾ ಬೇರೆ ಯಾವುದೇ ವಿಚಾರವಾಗಿ ಮಾತನಾಡಿಲ್ಲ. ಮಾಧ್ಯಮಗಳಲ್ಲಿ ತಪ್ಪು ಪ್ರಕಟವಾಗಿದ್ದು, ಇದನ್ನು ಸರಿಪಡಿಸಿ ಜನರಿಗೆ ತಿಳಿಸುವಂತಹ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು.

ಘಟನೆ ಬಗ್ಗೆ ರಂಗಪ್ಪ ಎಂಬುವರು ನೀಡಿದ್ದ ದೂರು: ಈ ಮಧ್ಯೆ ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಮಠದ ಉತ್ತರಾಧಿಕಾರಿ ವಿವಾದ ಪ್ರಕರಣದ ಹಿನ್ನೆಲೆ ಶನಿವಾರ ರಂಭಾಪುರಿ ಜಗದ್ಗುರುಗಳ ಕಾರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ, ಮಹಿಳೆಯೊಬ್ಬರು ಅಮಾನವೀಯವಾಗಿ ನಡೆದುಕೊಂಡಿದ್ದರು. ಈ ಘಟನೆ ಸಂಬಂಧ ಕಲಾದಗಿ ಪೊಲೀಸ್ ಠಾಣೆಯಲ್ಲಿ 59 ಜನರ ಮೇಲೆ ಭಕ್ತ ರಂಗಪ್ಪ ಎಂಬುವರು ದೂರು ದಾಖಲಿಸಿದ್ದಾರೆ.

ಘಟನೆ ಬಗ್ಗೆ ಎಸ್​​​​​ಪಿ ಹೇಳಿದ್ದಿಷ್ಟು: ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ‌, ರಂಭಾಪುರಿ ಶ್ರೀಗಳು ಅಡ್ಡಪಲ್ಲಕ್ಕಿ ಮಹೋತ್ಸವ ವಿಚಾರಕ್ಕಾಗಿ ಬಾಗಲಕೋಟೆಯಿಂದ ಉದಗಟ್ಟಿಗೆ ಹೊರಟ್ಟಿದ್ದರು. ಈ ವೇಳೆ ಮಾರ್ಗ ಮಧ್ಯೆ ಕಲಾದಗಿ ಗ್ರಾಮ ಬರುತ್ತದೆ. ಈ ವೇಳೆ, ಅಲ್ಲಿನ ಮಹಿಳೆಯರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಗ್ರಾಮಸ್ಥರು ಶ್ರೀಗಳ ಕಾರು​ ಅನ್ನು ಅಡ್ಡಗಟ್ಟಿ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಸ್ಥಳದಲ್ಲಿದ್ದ ಪೊಲೀಸರು ಮುತ್ತಿಗೆ ಹಾಕಲು ಅವಕಾಶ ಕಲ್ಪಿಸಿರಲಿಲ್ಲ. ಈ ವೇಳೆ ಮಹಿಳೆಯೊಬ್ಬರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಭಕ್ತಾದಿ ರಂಗಪ್ಪ ಎಂಬುವರು ಕಲಾದಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಅಮಾನವೀಯ ಘಟನೆ ಸಂಬಂಧ ದೂರು ಬಂದ ಹಿನ್ನೆಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ರಂಗಪ್ಪ ಎಂಬುವರು 59 ಜನರ ಮೇಲೆ ದೂರು ನೀಡಿದ್ದಾರೆ. ದೂರಿನನ್ವಯ ನಾವು ಎಫ್​ಐಆರ್​ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಪಿ ಅಮರನಾಥ ರೆಡ್ಡಿ ಹೇಳಿದರು.

ಓದಿ: ಬಾಗಲಕೋಟೆ: ರಂಭಾಪುರಿ ಶ್ರೀಗಳ ವಿರುದ್ಧ ಭಕ್ತರಿಂದ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.