ETV Bharat / state

ಬೆಂಗಳೂರಿನಲ್ಲೇ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶವಿದೆ: ಸಚಿವ ಎಂ.ಬಿ. ಪಾಟೀಲ್ - second airport in Bengaluru - SECOND AIRPORT IN BENGALURU

''ಬೆಂಗಳೂರಿನಲ್ಲೇ ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ಆದರೆ, ಸ್ಥಳವನ್ನು ಅಂತಿಮಗೊಳಿಸಿಲ್ಲ'' ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

BENGALURU  MINISTER M B PATIL  SECOND AIRPORT IN BENGALURU  SECOND AIRPORT
ಸಚಿವ ಎಂ.ಬಿ. ಪಾಟೀಲ್ ಮಾತನಾಡಿದರು. (ETV Bharat)
author img

By ETV Bharat Karnataka Team

Published : Jul 16, 2024, 12:55 PM IST

Updated : Jul 16, 2024, 2:22 PM IST

ಸಚಿವ ಎಂ.ಬಿ. ಪಾಟೀಲ್ ಮಾತನಾಡಿದರು. (ETV Bharat)

ಬೆಂಗಳೂರು: ''ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳು ಎರಡು ವಿಮಾನ ನಿಲ್ದಾಣಗಳನ್ನು ಹೊಂದಿರುವಂತೆ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ಆದರೆ, ಸ್ಥಳವನ್ನು ಅಂತಿಮಗೊಳಿಸಿಲ್ಲ. ರಾಜ್ಯ ಮತ್ತು ಬೆಂಗಳೂರಿನ ಹಿತಾಸಕ್ತಿಗೆ ಪೂರಕವಾಗಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ'' ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬೆಂಗಳೂರು ಹೊರತಾಗಿ ಬೇರೆ ಕಡೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶದ ಬಗ್ಗೆ ಸಚಿವರು ಹೇಳಿದ್ದಾರೆ. ತುಮಕೂರು ಮತ್ತು ಚಿತ್ರದುರ್ಗದ ಮಧ್ಯೆ ನಿರ್ಮಾಣ ಮಾಡುವ ಯೋಜನೆ ಇದೆಯಾ ಎನ್ನುವ ಕುರಿತ ಬಿಜೆಪಿ ಸದಸ್ಯ ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ಆ ರೀತಿಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ ಮಾಡುವ ಪ್ಲಾನ್ ಇದೆ. ನಮಗೆ 2033 ರವರೆಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವಕಾಶ ಇದೆ. ಆ ನಂತರ ನಾವು ವಿಮಾನ ನಿಲ್ದಾಣ ಮಾಡಬಹುದು'' ಎಂದರು.

''ಈಗಿನಿಂದಲೇ ಪ್ರಸ್ತಾಪ ಮಾಡುತ್ತಿದ್ದೇವೆ. ಏಳೆಂಟು ಜಾಗ ಗುರುತಿಸಿದ್ದೇವೆ. ಏರ್ ಪೋರ್ಟ್ ಜಾಗ ಮೆರಿಟ್ ಮೇಲೆ ಮಾಡುತ್ತೇವೆ. ಸೂಕ್ತ ಮಾನದಂಡದ ಮೇಲೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಗುರಿ ಇದೆ. ಲಾಜಿಸ್ಟಿಕ್, ಪ್ಯಾಸೆಂಜರ್ ಕನೆಕ್ಟಿವಿಟಿ ನೋಡಿ ಬೆಂಗಳೂರಿಗೆ ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿಯೇ ಮಾಡಲಾಗುತ್ತದೆ. ರಾಜ್ಯದ ಹಿತಾಸಕ್ತಿಗೆ ಪೂರಕವಾಗಿ ಮಾಡಲಾಗುತ್ತದೆ'' ಎಂದು ತಿಳಿಸಿದರು.

''ಚಿತ್ರದುರ್ಗದಲ್ಲಿ ಜಿಲ್ಲಾ ವಿಮಾನ ನಿಲ್ದಾಣ ಮಾಡೋಣ. ಆದರೆ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಅತಿ ಅಗತ್ಯ ಮತ್ತು ಸೂಕ್ತ ಸ್ಥಳವಾಗಿದೆ. ಆದರೆ, ಚಿತ್ರದುರ್ಗಕ್ಕೆ ಕೈಗಾರಿಕೆ ಸ್ಥಾಪಿಸುವ ಪ್ರಯತ್ನ ಮಾಡುತ್ತೇವೆ'' ಎಂದು ಹೇಳಿದರು.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಸರ್ಕಾರ ಪ್ರಾಯೋಜಿತ ಕೊಲೆ: ಆರ್.ಅಶೋಕ್ ಆರೋಪ - Assembly Session

Last Updated : Jul 16, 2024, 2:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.