ETV Bharat / state

ಮಂಡ್ಯ ಕ್ಷೇತ್ರ ಜೆಡಿಎಸ್​ಗೆ ಬಿಟ್ಟುಕೊಡದಂತೆ ಹೆಚ್ಚಿದ ಒತ್ತಡ: ಸಿದ್ದರಾಮಯ್ಯಗೆ ಟಿಕೆಟ್ ನೀಡಲು ಬಿಜೆಪಿ ವರಿಷ್ಠರಿಗೆ ಆಗ್ರಹ - ಲೋಕಸಭಾ ಚುನಾವಣೆ

ಮಂಡ್ಯ ಕ್ಷೇತ್ರ ಬಿಟ್ಟುಕೊಡದಂತೆ ಒತ್ತಡ ಹೆಚ್ಚಾಗಿದೆ. ಬಿಜೆಪಿ ಸಭೆಯಲ್ಲಿ ಸಿದ್ದರಾಮಯ್ಯಗೆ ಟಿಕೆಟ್ ನೀಡಲು ವರಿಷ್ಠರಿಗೆ ಸಂಸದೆ ಸುಮಲತಾ ಆಪ್ತನೇ ಆಗ್ರಹಿಸಿದ್ದಾರೆ.

ಮಂಡ್ಯ  Mandya  JDS  ಲೋಕಸಭಾ ಚುನಾವಣೆ  Lok Sabha Elections
ಮಂಡ್ಯ ಕ್ಷೇತ್ರ ಜೆಡಿಎಸ್​ಗೆ ಬಿಟ್ಟುಕೊಡದಂತೆ ಹೆಚ್ಚಾದ ಒತ್ತಡ: ಸಿದ್ದರಾಮಯ್ಯಗೆ ಟಿಕೆಟ್ ನೀಡಲು ಬಿಜೆಪಿ ವರಿಷ್ಠರಿಗೆ ಆಗ್ರಹ
author img

By ETV Bharat Karnataka Team

Published : Feb 3, 2024, 6:50 AM IST

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಡಾ.ಸಿದ್ದರಾಮಯ್ಯ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಬೇಕೆಂದು ಮುಖಂಡರು, ಕಾರ್ಯಕರ್ತರು ಬಿಜೆಪಿ ವರಿಷ್ಠರಿಗೆ ಆಗ್ರಹಿಸಿದ್ದಾರೆ. ಜೊತೆಗೆ ಜೆಡಿಎಸ್​ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಡದಂತೆ ಒತ್ತಡ ಕೂಡ ಹೆಚ್ಚಾಗಿದ್ದು, ಸಂಸದೆ ಸುಮಲತಾ ಅಂಬರೀಶ್​ ಆಪ್ತನೇ ಒತ್ತಾಯಿಸಿದ್ದಾನೆ.

ಬಿಜೆಪಿ - ಜೆಡಿಎಸ್ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸಲು ಪ್ಲಾನ್ ಮಾಡಿದ್ದಾರೆ. ಆದರೆ ದೋಸ್ತಿಗಳಲ್ಲೇ ಮನಸ್ತಾಪ ಹೆಚ್ಚಾಗಿದೆ. ಜೆಡಿಎಸ್​ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಡದಂತೆ ಬಿಜೆಪಿ ಪಟ್ಟು ಹಿಡಿದಿದೆ. ನಿನ್ನೆ (ಶುಕ್ರವಾರ) ಮಂಡ್ಯ ನಗರದ ತಾವರೆಗೆರೆಯ ಕೃಷ್ಣ ರೈಸ್‌ಮಿಲ್ ಆವರಣದಲ್ಲಿ ಡಾ.ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸಭೆ ನಡೆಸುವ ಮೂಲಕ ಜೆಡಿಎಸ್ ​- ಬಿಜೆಪಿ ಮೈತ್ರಿಯಾದರೂ ಬಿಜೆಪಿಯಿಂದಲೇ ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

''2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ದೊರೆಯುವ ನಿರೀಕ್ಷೆಯಿತು. ಆದರೆ, ಆ ಸಂದರ್ಭದಲ್ಲಿ ರಾಜಕೀಯ ಕಾರಣಗಳಿಂದಾಗಿ ಬಿಜೆಪಿ ಪಕ್ಷವು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಘೋಷಿಸಿತ್ತು. ಇದರಿಂದ ಆಗ ಅವಕಾಶ ತಪ್ಪಿದ ಹಿನ್ನೆಲೆಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಾದರೂ ಡಾ.ಸಿದ್ದರಾಮಯ್ಯ ಅವರಿಗೆ ಪಕ್ಷವು ಟಿಕೆಟ್ ನೀಡಬೇಕು'' ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

ಬಿಜೆಪಿ ಹಿರಿಯ ನಾಯಕ ಚಂದಗಾಲು ಶಿವಣ್ಣ ಮಾತನಾಡಿ, ''ಲೋಕಸಬಾ ಚುನಾವಣೆ ಸಮೀಪಿಸುತ್ತಿದೆ. ಇಡೀ ದೇಶದಲ್ಲಿ ಬಿಜೆಪಿ ಪರ ಅಲೆ ಇದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಕೂಡ ಬಿಜೆಪಿ ಅಭ್ಯರ್ಥಿಗೆ ಪೂರಕವಾಗಿದೆ. ಜಿಲ್ಲೆಯಲ್ಲಿ ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಗಳಿದ್ದು, ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಬೇಕು'' ಎಂದು ಆಗ್ರಹಿಸಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ, ಬಿಜೆಪಿ ಮುಖಂಡ ಅಶೋಕ್‌ ಜಯರಾಂ ಮಾತನಾಡಿ, ''ಮಂಡ್ಯ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವು ಬಲಿಷ್ಠವಾಗಿದೆ. ಜೆಡಿಎಸ್​-ಬಿಜೆಪಿ ಮೈತ್ರಿಯಾದರೆ ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು. ಈ ಕ್ಷೇತ್ರದಲ್ಲಿ ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು'' ಎಂದು ಮನವಿ ಮಾಡಿದರು.

ಸುಮಲತಾ ಆಪ್ತ ಹೇಳಿದ್ದು ಹೀಗೆ: ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಸಭೆಯಲ್ಲಿ ಪಾಲ್ಗೊಳ್ಳುವ ಮಾತನಾಡಿ, ''ಸುಮಲತಾ ಬದಲಿಗೆ ಡಾ.ಸಿದ್ದರಾಮಯ್ಯಗೆ ಬಿಜೆಪಿ ಟಿಕೆಟ್ ನೀಡಬೇಕು'' ಎಂದರು. ಡಾ.ಸಿದ್ದರಾಮಣ್ಣ ತ್ಯಾಗಿ, ಎಲ್ಲ ಪಕ್ಷದಲ್ಲಿ ಅವರಿಗೆ ಸ್ನೇಹಿತರಿದ್ದಾರೆ. ನರೇಂದ್ರ ಮೋದಿ ನಾಯಕತ್ವ ಒಪ್ಪಿ ಬಿಜೆಪಿ ಸೇರಿದ್ದರು. 6 ತಿಂಗಳ ಅವಧಿಗೆ ನಡೆದ ಎಂಪಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿಜೆಪಿ ಪರವಾಗಿ ಅತಿ ಹೆಚ್ಚು ಮತ ಗಳಿಸಿದರು. ಕರ್ಣನ ರೀತಿ ಸುಮಲತಾ ಮೇಡಂ ಅವರಿಗೆ ತನ್ನ ಸ್ಥಾನ ತ್ಯಾಗ ಮಾಡಿದ್ದರು. ಸಿದ್ದರಾಮಣ್ಣನ ಕೈ ಬಲಪಡಿಸಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ತಾಳ್ಮೆ, ಜಾಣ್ಮೆಯ ನಾಯಕ ಸಿದ್ದರಾಮಯ್ಯ. ಅವರ ಪರ ನಾವೀರುತ್ತೇವೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇವೆ. ರಾಜ್ಯದ ನಾಯಕರು ಎಂಪಿ ಟಿಕೆಟ್ ಕೊಟ್ರೆ ನಮಗೆ ಸಂತೋಷ'' ಎಂದು ಅವರು ತಿಳಿಸಿದರು.

ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಮಾತು: ''ಇಂದು ನನ್ನ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ನನ್ನ ಜನ ಹಾಗೂ ಕಾರ್ಯಕರ್ತರು ನನ್ನನ್ನು ಗುರುತಿಸಿದ್ದಾರೆ. ನನಗೆ ಟಿಕೆಟ್ ಕೊಡಲು ಅವರೆಲ್ಲರೂ ಒತ್ತಾಯಿಸಿದ್ದಾರೆ. ನನಗೆ ಅಧಿಕಾರದ ಆಸೆ ಇಲ್ಲ. ಕಾರ್ಯಕರ್ತರು ತೋರಿದ ಪ್ರೀತಿಯ ಅಭಿಮಾನ ನನಗೆ ಸಂತೋಷ ತಂದಿದೆ. ಬಿಜೆಪಿ ಮಂಡ್ಯ ಜಿಲ್ಲೆಯಲ್ಲಿ ಸದೃಢವಾಗಿದೆ. ಅದ್ಭುತ ಶಕ್ತಿ ಹೊಂದಿದೆ. ಕಳೆದ ವಿಧಾನಸಭೆಯಲ್ಲಿ ಬಿಜೆಪಿ ಹೆಚ್ಚಿನ ಮತ ಪಡೆದಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ. ಲೋಕಸಭೆಯಲ್ಲಿ ನಮಗೆ ಟಿಕೆಟ್ ಕೊಟ್ರೆ ಗೆಲ್ಲುವ ವಿಶ್ವಾಸ ಇದೆ. ನಮ್ಮನ್ನು ಕಡೆಗಣಿಸುವ ಕೆಲಸ ಆಗಬಾರದು. ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿದ್ದೇವೆ'' ಎಂದು ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಮುಖಂಡರಾದ ವಿದ್ಯಾನಾಗೇಂದ್ರ, ಯಮದೂರು ಸಿದ್ದರಾಜು, ಎಚ್‌.ಪಿ. ಮಹೇಶ್‌, ಮನ್‌ಮುಲ್ ನಿರ್ದೇಶಕಿ ರೂಪಾ, ಶೀಳನೆರೆ ಅಂಬರೀಶ್, ವಸಂತ್ ಕುಮಾರ್, ಪ.ನಾ. ಸುರೇಶ್ ಭಾಗವಹಿಸಿದ್ದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಆಯ್ಕೆ ನಿರ್ಧಾರದ ಅಧಿಕಾರ ವಿಜಯೇಂದ್ರ ಹೆಗಲಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.