ETV Bharat / state

ಕೊಪ್ಪಳದಲ್ಲಿ ಅಣು ಸ್ಥಾವರ ನಿರ್ಮಾಣ ಪ್ರಸ್ತಾವನೆ ಇಲ್ಲ - ಸಚಿವ ಶಿವರಾಜ ತಂಗಡಗಿ - MINISTER SHIVARAJ TANGADAGI

ಸಚಿವ ಶಿವರಾಜ ತಂಗಡಗಿ ಅವರು ಕೊಪ್ಪಳದಲ್ಲಿ ಅಣು ಸ್ಥಾವರ ನಿರ್ಮಾಣ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

minister-shivaraj-tangadagi
ಸಚಿವ ಶಿವರಾಜ ತಂಗಡಗಿ (ETV Bharat)
author img

By ETV Bharat Karnataka Team

Published : Jan 26, 2025, 8:28 PM IST

Updated : Jan 26, 2025, 9:24 PM IST

ಕೊಪ್ಪಳ : ಕೊಪ್ಪಳದಲ್ಲಿ ಅಣು ಸ್ಥಾವರ ನಿರ್ಮಾಣ ಪ್ರಸ್ತಾವನೆ ಇಲ್ಲ. ಕೇವಲ ಸರ್ವೇ ಮಾಡಿದ ಮಾತ್ರಕ್ಕೆ ಇಲ್ಲಿ ಅಣುಸ್ಥಾವರ ನಿರ್ಮಾಣವಾಗದು. ಅದಕ್ಕೆ ಪೂರಕವಾದ ಜಾಗವನ್ನ ಹುಡುಕುವ ಪ್ರಕ್ರಿಯೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ. ರಸ್ತೆಗಳ ಅಭಿವೃದ್ಧಿಗೆ ಪ್ರತಿ ಕ್ಷೇತ್ರಕ್ಕೆ ಕೆಕೆಆರ್​ಡಿಬಿಯಿಂದ 10 ಕೋಟಿ ರೂ. ಲೋಕೋಪಯೋಗಿ ಇಲಾಖೆಯಿಂದ 25 ಕೋಟಿ ರೂ. ಅನುದಾನ ಬಂದಿದೆ. ಆದಷ್ಟು ಶೀಘ್ರವಾಗಿ ಎಲ್ಲ ರಸ್ತೆಗಳು ನಿರ್ಮಾಣವಾಗಲಿವೆ ಎಂದು ಹೇಳಿದರು.

ಸಚಿವ ಶಿವರಾಜ ತಂಗಡಗಿ ಮಾತನಾಡಿದರು (ETV Bharat)

ಎಸ್​ಎಸ್​ಎಲ್​ಸಿ ಫಲಿತಾಂಶ ಸುಧಾರಣೆಗೆ ಕ್ರಮ : ಜಿಲ್ಲೆಯಲ್ಲಿ ಕಳೆದ ವರ್ಷ ಎಸ್​ಎಸ್​ಎಲ್​ಸಿ ಫಲಿತಾಂಶ ಗಣನೀಯವಾಗಿ ಕುಸಿದಿದೆ. ಈ ವರ್ಷ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಜ.31ರಂದು ಶಿಕ್ಷಣಾಧಿಕಾರಿಗಳು, ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವಂತಾಗಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲಾ ರಂಗ ಮಂದಿರ ತಿಂಗಳೊಳಗೆ ನಿರ್ಮಾಣವಾಗಲಿದೆ. ಸಿಎಂ ಬಂದು ಉದ್ಘಾಟಿಸುತ್ತಾರೆ. ವಿಮಾನ ನಿಲ್ದಾಣಕ್ಕೆ ಜಾಗ ನೋಡಿದ್ದು, ಭೂ ಸ್ವಾಧೀನಕ್ಕೆ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಜಿಲ್ಲೆಯಿಂದ ಪ್ರಯಾಗರಾಜ್​ಗೆ ವಿಶೇಷ ರೈಲು ಬಿಡುಗಡೆಗೆ ಕೇಂದ್ರಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಓದಿ : ಹಳೆ ಬಂದರು ವ್ಯಾಪ್ತಿಯಲ್ಲಿ 11 ಫ್ಲೋಟಿಂಗ್ ಜೆಟ್ಟಿ ಕಾಮಗಾರಿ ಮಂಜೂರು: ಸಚಿವ ದಿನೇಶ್ ಗುಂಡೂರಾವ್ - DINESH GUNDU RAO

Last Updated : Jan 26, 2025, 9:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.