ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಿಲ್ಲ. ಇದು ಬಿಜೆಪಿ ನಾಯಕರು, ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ. ಎಲ್ಲಾ ಮಂತ್ರಿಗಳು, ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡ್ತಿದ್ದೇವೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯಪಾಲರು ಅಸಾಂವಿಧಾನಿಕವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತವಾದ ಅನ್ಯಾಯದ ಕ್ರಮ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಿದ್ದೇವೆ. ಮೈಸೂರಲ್ಲಿ ಸೇರಿದ ಜನ ನೋಡಿಯಾದ್ರೂ ರಾಜ್ಯಪಾಲರು ತಮ್ಮ ಕ್ರಮ ಬದಲಾಯಿಸಿಕೊಳ್ಳಬೇಕಿತ್ತು ಎಂದರು.
ಇದನ್ನೂ ಓದಿ : ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ - CM Siddaramaiah