ETV Bharat / state

ಯಾವುದೇ ಕಾರಣಕ್ಕೂ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಬದಲಾಯಿಸುವ ಪ್ರಶ್ನೆ ಇಲ್ಲ: ಬಿಎಸ್​​​​ವೈ - Lok Sabha Election 2024 - LOK SABHA ELECTION 2024

ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಹ್ಲಾದ್​ ಜೋಶಿ ಬದಲಾವಣೆ ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಗಡುವು ನೀಡಿದ್ದಾರೆ. ನಾನು ಈ ಹಿಂದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಪ್ರಹ್ಲಾದ್ ಜೋಶಿ ಅವರ ಕೈವಾಡವಿಲ್ಲ. ಈ ಬಗ್ಗೆ ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಮಾಜಿ ಸಿಎಂ ಬಿ‌ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Former CM BS Yeddyurappa spoke at the press conference.
ಮಾಜಿ ಸಿಎಂ ಬಿ‌ ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
author img

By ETV Bharat Karnataka Team

Published : Mar 27, 2024, 9:48 PM IST

Updated : Mar 27, 2024, 10:56 PM IST

ಮಾಜಿ ಸಿಎಂ ಬಿ‌ ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗಳಿಂದ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಬಿ‌ ಎಸ್ ಯಡಿಯೂರಪ್ಪ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಹ್ಲಾದ್​ ಜೋಶಿ ಬದಲಾವಣೆ ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಗಡುವು ನೀಡಿದ್ದಾರೆ. ನಾನು ಈ ಹಿಂದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಪ್ರಹ್ಲಾದ್ ಜೋಶಿ ಅವರ ಕೈವಾಡವಿಲ್ಲ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ, ಈ ಬಗ್ಗೆ ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿ ಎಲ್ಲ ಸಮುದಾಯವನ್ನು ಒಟ್ಟಿಗೆ ತಗೊಂಡು ಹೋಗುವ ನಾಯಕರು, ಅಲ್ಲದೇ ಅವರ ನಾಯಕತ್ವ ದೇಶ ನೋಡುತ್ತಿದೆ‌. ಇದೀಗ ಮಠಾಧಿಪತಿಗಳಿಗೆ ತಪ್ಪು ಗ್ರಹಿಕೆ ಆಗಿದೆ. ಅವರ ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು‌. ಈಗಾಗಲೇ ದಾವಣಗೆರೆಗೆ ಹೋಗಿ ಅಲ್ಲಿನ ಅಸಮಾಧಾನ ಪರಿಹರಿಸಿದ್ದೇನೆ. ಅದರಂತೆ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರ ವಿರುದ್ಧದ ಅಸಮಾಧಾನ ಪರಿಹರಿಸಲಾಗಿದೆ. ಪಕ್ಷದಲ್ಲಿ ಕೆಲವು ಗೊಂದಲ ಇರೋದು ನಿಜ, ಆದರೆ ಅವೆಲ್ಲವನ್ನೂ ಪರಿಹರಿಸಿಕೊಂಡು, ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಟ್ಟು ಉಳಿದೆಲ್ಲ, ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆಯಾಗಿದೆ. ಬಿಜೆಪಿ, ಜೆಡಿಎಸ್ ಪರ ವಾತಾವರಣ ರಾಜ್ಯದಲ್ಲಿದೆ. ಕಾಂಗ್ರೆಸ್ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡಿ ವಿಫಲವಾಗಿದೆ. ಕಾಂಗ್ರೆಸ್ ರೈತ ವಿರೋಧಿ, ದಲಿತ ವಿರೋಧಿ ಸರ್ಕಾರವಾಗಿದೆ ಎಂದು ಹರಿಹಾಯ್ದರು.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದಿಂಗಾಲೇಶ್ವರ ಶ್ರೀಗಳ ಹೇಳಿಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ‌ಜೋಶಿ: ದಿಂಗಾಲೇಶ್ವರ ಶ್ರೀಗಳ ಮೇಲೆ ಅಪಾರ ಅಭಿಮಾನವಿದ್ದು, ಅವರು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಹೇಳಿದರು.

ನಗರದಲ್ಲಿಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಗೂ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕ್ಷೇತ್ರದಿಂದ ಬದಲಾವಣೆ ಮಾಡಬೇಕು ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಒತ್ತಾಯಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಿಂಗಾಲೇಶ್ವರ ಶ್ರೀಗಳು ಸುಪ್ರಸಿದ್ಧ ಮಠಾಧಿಪತಿಗಳು, ಅವರ ಮೇಲೆ ಅತೀವ ಭಕ್ತಿ ಗೌರವವಿದೆ. ಅವರ ಗುರುಗಳೊಂದಿಗೆ ಕಳೆದ 30 -35 ವರ್ಷಗಳ ಸಂಬಂಧ ಹೊಂದಿದ್ದೇನೆ. ದಿಂಗಾಲೇಶ್ವರ ಶ್ರೀಗಳು ನನ್ನ ಬಗ್ಗೆ ತಪ್ಪು ತಿಳಿವಳಿಕೆ ಹೊಂದಿದ್ದಾರೆ. ಅವರ ಹೇಳಿಕೆಗಳು ನನಗೆ ಆರ್ಶೀವಾದ, ಮುಂದಿನ ದಿನಗಳಲ್ಲಿ ತಪ್ಪು ತಿಳಿವಳಿಕೆ ಸರಿಮಾಡುವ ಕೆಲಸ ಮಾಡುವೆ ಎಂದು ಹೇಳಿದರು.

ಲಿಂಗಾಯತ ಸಮುದಾಯಕ್ಕೆ ಪ್ರಹ್ಲಾದ್ ಜೋಶಿ ಅನ್ಯಾಯ ಮಾಡಿದ್ದಾರೆಂಬ ಪ್ರಶ್ನೆಗೆ ನಾನು ಯಾವುದೇ ವೈಯಕ್ತಿಕ ಹೇಳಿಕೆಗೆ ಉತ್ತರ ಕೊಡುವುದಿಲ್ಲ ನೋ ರಿಯಾಕ್ಷನ್ ಎಂದು ಹೊರ ನಡೆದರು.

ಇದನ್ನೂಓದಿ:ನಾನು ಹೊರಗಿನವನಲ್ಲ, ಬೆಳಗಾವಿ ನನ್ನ ಕರ್ಮಭೂಮಿ: ಈಟಿವಿ ಭಾರತ ಜೊತೆ ಜಗದೀಶ್​ ಶೆಟ್ಟರ್​ ಮಾತು - BJP CANDIDATE jagadish SHETTAR

Last Updated : Mar 27, 2024, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.