ETV Bharat / state

KRS​ ಸುತ್ತಲೂ ಸ್ಫೋಟ ನಡೆಸದಂತೆ ನೀಡಿದ್ದ ಆದೇಶ ಉಲ್ಲಂಘಿಸಿದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಿರ್ಬಂಧವಿಲ್ಲ: ಹೈಕೋರ್ಟ್ - HIGH COURT

ಕೆಆರ್​ಎಸ್​ ಸುತ್ತ ಸ್ಪೋಟ ನಡೆಸದಂತೆ ನೀಡಿದ್ದ ಆದೇಶ ಉಲ್ಲಂಘಿಸಿದ್ದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಿರ್ಬಂಧವಿಲ್ಲ ಎಂದು ಹೈಕೋರ್ಟ್​ ಆದೇಶಿಸಿದೆ.

HIGH COURT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jan 3, 2025, 10:58 PM IST

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ(ಕೆಆರ್​ಎಸ್​)ಜಲಾಶಯದ 20 ಕಿ. ಮೀ ವ್ಯಾಪ್ತಿಯಲ್ಲಿ ಸ್ಫೋಟ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್‌ ಕಳೆದ ವರ್ಷ ಮಾಡಿರುವ ಮಧ್ಯಂತರ ಆದೇಶ ಪಾಲಿಸದಿರುವವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಹೈಕೋರ್ಟ್‌ ಅವಕಾಶ ನೀಡಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ವೈ.ಸಿ ಮಧು ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ಈ ಆದೇಶ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ.

ಘೋಷಿತ ಜಲಾಶಯಗಳನ್ನು ರಕ್ಷಿಸುವ ಸದುದ್ದೇಶದಿಂದ ಮಧ್ಯಂತರ ಆದೇಶ ಮಾಡಲಾಗಿದೆ. ಇಂಥ ಪ್ರಕರಣಗಳಲ್ಲಿ ವಾದದ ಅರ್ಜಿ ಸಲ್ಲಿಸುವ ಹಕ್ಕಿನ (ಲೋಕಸ್ಟಾಂಡೈ) ವಿಚಾರ ಅನ್ವಯಿಸುವುದಿಲ್ಲ. ಯಾರು ಬೇಕಾದರೂ ನ್ಯಾಯಾಲಯದ ಮೆಟ್ಟಿಲೇರಬಹುದು ಎಂದು ಕೋರ್ಟ್​ ತಿಳಿಸಿದೆ. ಅಲ್ಲದೆ, ಮಂಚಮ್ಮ ದೇವಿ ಸ್ಟೋನ್‌ ಕ್ರಷರ್‌ ಮತ್ತು ಎಂ-ಸ್ಯಾಂಡ್‌ಗೆ ಆದೇಶದ ಪ್ರತಿ ಕಳುಹಿಸುವಂತೆಯೂ ನ್ಯಾಯಾಲಯವು ರಿಜಿಸ್ಟ್ರಿಗೆ ನಿರ್ದೇಶಿಸಿದೆ. ಅಲ್ಲದೇ, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದರೆ ಸರ್ಕಾರವು ಲೋಕಸ್ಟಾಂಡೈ ವಿಚಾರವನ್ನು ಎತ್ತುವಂತಿಲ್ಲ ಎಂದೂ ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಆರ್‌ಎಸ್‌ ಸುತ್ತಲು 20 ಕಿ ಮೀ ವ್ಯಾಪ್ತಿಯಲ್ಲಿ ಸ್ಫೋಟ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ. ಆದಾಗ್ಯೂ, ಸ್ಫೋಟ ಮತ್ತು ಗಣಿಗಾರಿಕೆ ನಡೆಸಲಾಗುತ್ತಿದೆ. ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು ಅಧಿಕೃತ ಪ್ರತಿವಾದಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದರು.

ಸರ್ಕಾರದ ಪರ ವಕೀಲರು, ಮೂಲ ಅರ್ಜಿಯಲ್ಲಿ ದಾವೆದಾರರಾಗಿಲ್ಲ ಎನ್ನದೇ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸುವ ಮೂಲಕ ಅರ್ಜಿದಾರರು ಹೈಕೋರ್ಟ್‌ ಆದೇಶ ಜಾರಿಗೆ ಮುಂದಾಗಬಹುದು ಎಂದು ಪೀಠಕ್ಕೆ ವಿವರಿಸಿದರು. ವಿಚಾರಣೆ ವೇಳೆ ಪೀಠ, ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲು ಅನುಮತಿಸಿ, ಅರ್ಜಿ ಇತ್ಯರ್ಥಪಡಿಸಬಹುದೇ ಎಂದಿತು. ಅದಕ್ಕೆ ಅರ್ಜಿದಾರರ ಪರ ವಕೀಲರು ಒಪ್ಪಿಕೊಂಡರು.

ಪ್ರಕರಣದ ಹಿನ್ನೆಲೆ : 2024ರ ಜನವರಿ 8ರಂದು ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಗಣಿಗಾರಿಕೆ/ಕ್ವಾರಿ ಚಟುವಟಿಕೆಗಳನ್ನು ನಿಷೇಧಿಸಿ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ.

ಅಲ್ಲದೆ, ಜಲಾಶಯ ಸುರಕ್ಷತಾ ಕಾಯಿದೆ 2021ರ ನಿಬಂಧನೆಗಳ ಅಡಿ ಶತಮಾನಕ್ಕೂ ಹಳೆಯದಾದ ಜಲಾಶಯದ ಸುರಕ್ಷತೆ ಕುರಿತು ಮೇಲಿನ ಆದೇಶ ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಆದೇಶ ಹೊರಡಿಸುವಂತೆ ಜಿಲ್ಲಾಡಳಿತ ಮತ್ತು ಗಣಿಗಾರಿಕೆ ಇಲಾಖೆಗೆ ನ್ಯಾಯಾಲಯ ನಿರ್ದೇಶಿಸಿದೆ. ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕು ಎಂದೂ ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಹಿರಿಯ ನಾಗರಿಕ ಕಾಯಿದೆಯಡಿ ಆಸ್ತಿ ವರ್ಗಾವಣೆ ಹಕ್ಕು ರದ್ದು ಕೋರಿ ಮಕ್ಕಳು ಅರ್ಜಿ ಸಲ್ಲಿಸಲಾಗದು: ಹೈಕೋರ್ಟ್ - SENIOR CITIZENS ACT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.