ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆಯುವ ಅಗತ್ಯ ಇರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಖಾಸಗಿ ಹೊಟೇಲ್ ಬಳಿ ಮಾತನಾಡಿದ ಅವರು, ನಾವೇ ಕರೆದು ವಿಚಾರಣೆ ಮಾಡ್ತಿದ್ದೇವೆ. ಅವರನ್ನು ವಶಕ್ಕೆ ಪಡೆಯುವ ಅವಶ್ಯಕತೆ ಇರಲಿಲ್ಲ. ಬಾಕಿ ವಿಚಾರವನ್ನು ತಿಳಿದುಕೊಂಡು ಮಾತನಾಡುತ್ತೇವೆ ಎಂದರು.
ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ಮಾಡುವ ಮೂಲಕ ರಾಜಕಾರಣ ಮಾಡ್ತಿದೆ. ಅದರಲ್ಲಿ ಯಾವುದೇ ಹುರಳಿಲ್ಲ. ಇದಕ್ಕೆ ಸಮಯ ಬಂದಾಗ ಉತ್ತರ ಕೊಡ್ತೀವಿ ಎಂದು ಹೇಳಿದರು.
ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿ, ಅಡ್ವೊಕೇಟ್ ಜನರಲ್ ಮತ್ತು ಲೀಗಲ್ ಟೀಂ ಜೊತೆ ಈಗಷ್ಟೇ ಮಾತನಾಡಿದ್ದೇನೆ. ಮುಂದೇನು ಮಾಡಬೇಕು ಎಂದು ಸಭೆ ಮಾಡಿದ್ದೇನೆ. ಇವತ್ತು ಸಂಜೆ 3 ಗಂಟೆಗೆ ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ: ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ED ವಶಕ್ಕೆ - ED Detained B Nagendra