ETV Bharat / state

ಉಪ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ

ಉಪ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

VIJAYENDRA REACT ON STATE POLITICS
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಬಿಡೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 40-45 ದಿನಗಳಲ್ಲಿ ದೇಶದಲ್ಲಿ 10 ಕೋಟಿ ಸದಸ್ಯರನ್ನು ನೋಂದಾಯಿಸಲಾಗಿದೆ. ಕರ್ನಾಟಕದಲ್ಲಿ 65 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಇದೇ ವೇಳೆ, ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು 'ಸಂಘಟನಾ ಪರ್ವ' ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ 58 ಸಾವಿರ ಬೂತ್‍ಗಳಲ್ಲಿ ಸದಸ್ಯತ್ವ ನೋಂದಣಿಯಾಗಿದೆ. ಮುಂದಿನ ಹಂತದಲ್ಲಿ ಪಕ್ಷದ ಸಮಿತಿಗಳ ರಚನೆ ಮೊದಲಾದ ಸಂಘಟನಾ ಕಾರ್ಯ ನಡೆಯಲಿದೆ ಎಂದು ವಿವರಿಸಿದರು. ಬೇರೆ ಯಾವುದೇ ರಾಜಕೀಯ ಪಕ್ಷಗಳಲ್ಲಿ ಇಷ್ಟೊಂದು ವ್ಯವಸ್ಥಿತ, ಕ್ರಮಬದ್ಧವಾದ ಸಂಘಟನಾತ್ಮಕ ಚಿಂತನೆ ಇಲ್ಲ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ (ETV Bharat)

ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕೆಟ್ಟ ಸರ್ಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಇದರ ಪರಿಣಾಮವಾಗಿ ಆಡಳಿತ ಪಕ್ಷದ ಶಾಸಕರೇ ತಮ್ಮ ಆಡಳಿತವನ್ನು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.

ಹಣ, ಹೆಂಡ ಹಂಚಿ ಹೇಗಾದರೂ ಮಾಡಿ ಉಪ ಚುನಾವಣೆ ಗೆಲ್ಲಲು ಸೂಚಿಸಲಾಗಿದೆ. ರೈತ ವಿರೋಧಿ, ಅಭಿವೃದ್ಧಿ ವಿರೋಧಿ, ಜನವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋಧಿ ಸರ್ಕಾರ ಇದು. ಈ ದುಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ಜನಾಕ್ರೋಶ ತೀವ್ರವಾಗಿದೆ. 3 ಉಪ ಚುನಾವಣೆಗಳಲ್ಲಿ ಶಿಗ್ಗಾವಿ, ಸಂಡೂರಿನಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ. ಚನ್ನಪಟ್ಟಣದಲ್ಲಿ ಪಕ್ಷದ ಸ್ಥಾನಮಾನ ಪಡೆದಿದ್ದ ಮುಖಂಡ ಬೇರೆ ಪಕ್ಷಕ್ಕೆ ಹೋಗಿದ್ದು, ಅಲ್ಲಿನ ಜನತೆ, ಪ್ರಜ್ಞಾವಂತ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ನುಡಿದರು.

There will be a change in the state politics after the by-elections said BY Vijayendra
'ಸಂಘಟನಾ ಪರ್ವ' ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ (ETV Bharat)

ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ಮಾಜಿ ಸಿಎಂ ಸದಾನಂದ ಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಮತ್ತು ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ: ಬೈರತಿ ಸುರೇಶ್​ಗೆ ಶೋಭಾ ಕರಂದ್ಲಾಜೆ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.