ETV Bharat / state

ಕಳ್ಳತನ ತಡೆದ ಸೆಕ್ಯೂರಿಟಿ ಗಾರ್ಡ್ ಮೇಲೆ ಕಲ್ಲು ತೂರಿದ ಖದೀಮ - Stone Pelted At Security Guard

ಬೆಂಗಳೂರು ನಗರ ಪೊಲೀಸರಿಗೆ ಸಾಮಾಜಿಕ ಜಾಲತಾಣದ ಮೂಲಕ ಕಲ್ಲು ತೂರಾಟದ ವಿಡಿಯೋ ಟ್ಯಾಗ್​ ಮಾಡಿರುವ ಸೆಕ್ಯೂರಿಟಿ ಗಾರ್ಡ್,​ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Thief pelted stones at security guard who tried to stop theft in Bengaluru
ಸೆಕ್ಯೂರಿಟಿ ಗಾರ್ಡ್ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ ಘಟನೆಯ ದೃಶ್ಯ (ETV Bharat)
author img

By ETV Bharat Karnataka Team

Published : Jul 17, 2024, 12:41 PM IST

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಳ್ಳತನಕ್ಕೆ ಬಂದಿದ್ದಾಗ ತಡೆದಿದ್ದಕ್ಕೆ ಆಕ್ರೋಶಗೊಂಡ ಖದೀಮ, ಸೆಕ್ಯೂರಿಟಿ ಗಾರ್ಡ್ ಮೇಲೆ ಕಲ್ಲೆಸೆದಿರುವ ಘಟನೆ ಹೆಣ್ಣೂರು ಕ್ರಾಸ್ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ತನ್ನ ಮೇಲೆ ಕಳ್ಳ ಕಲ್ಲೆಸೆದಿರುವ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿದಿರುವ ಸೆಕ್ಯೂರಿಟಿ ಗಾರ್ಡ್​, ವಿಡಿಯೋವನ್ನು ನಗರ ಪೊಲೀಸರಿಗೆ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್​ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕಬ್ಬಿಣ ಹಾಗು ಇನ್ನಿತರ ವಸ್ತುಗಳನ್ನು ಕದಿಯಲು ಬಂದಿದ್ದ ಕಳ್ಳನನ್ನು ಕಾವಲಿಗಿದ್ದ ಸೆಕ್ಯೂರಿಟಿ ಗಾರ್ಡ್ ತಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಣ್ಣೂರು ಠಾಣೆ ಪೊಲೀಸರು, "ನಮ್ಮ‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ್ದಾನೆ.‌ ಸ್ಪಷ್ಟವಾಗಿ ಯಾವ ಪ್ರದೇಶದಲ್ಲಿ‌ ಘಟನೆ ನಡೆದಿದೆ ಎಂಬುದನ್ನು ನಮೂದಿಸಿಲ್ಲ. ಈ ಬಗ್ಗೆ ವ್ಯಕ್ತಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು, ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಳ್ಳತನ ಮಾಡಿಲ್ಲ ಎಂದು ಪ್ರತಿಪಾದಿಸಿದ್ದ ಮನೆಗೆಲಸದಾಕೆ: ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸತ್ಯ ಬಯಲು - house burglary case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.