ETV Bharat / state

ಪಾಕ್ ಪರ ಘೋಷಣೆ ಕೂಗಿದವನನ್ನು ಮೊದಲು ಒದ್ದು ಒಳಗೆ ಹಾಕಬೇಕು: ಬಿ.ವೈ.ವಿಜಯೇಂದ್ರ

ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್​, ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಘೋಷಣೆ ಕೂಗಿದವನನ್ನು ಅಲ್ಲೇ ಒದ್ದು ಒಳಗೆ ಹಾಕುತ್ತಿತ್ತು ಎಂದು ಕಿಡಿಕಾರಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
author img

By ETV Bharat Karnataka Team

Published : Feb 28, 2024, 6:05 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಶಿಕಾರಿಪುರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಘೋಷಣೆ ಕೂಗಿದವನನ್ನು ಅಲ್ಲೇ ಒದ್ದು, ಒಳಗೆ ಹಾಕ್ತಾ ಇದ್ರು. ಘೋಷಣೆ ಕೂಗಿದ ಜಾಗದಲ್ಲೇ ಅಷ್ಟೊಂದು ಕ್ಯಾಮರಾಗಳಿವೆ. ಯಾರು ಕೂಗಿದ್ದಾರೆ ಎಂದು ಟಿವಿ ಮಾಧ್ಯಮಗಳು ದೃಶ್ಯಾವಳಿಗಳ ಸಹಿತ ಸುದ್ದಿ ಬಿತ್ತರಿಸಿವೆ. ಇದರಲ್ಲಿ ತನಿಖೆ ಮಾಡುವುದು ಏನಿದೆ ಎಂದು ಪ್ರಶ್ನಿಸಿದರು.

ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹತ್ತು ಬಾರಿ ಯೋಚನೆ ಮಾಡ್ತೀರಾ? ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ ವಿಜಯೇಂದ್ರ, ಇದಕ್ಕೆ ಬಿಜೆಪಿ ಹೋರಾಟಕ್ಕೆ ಇಳಿಯಬೇಕಾ? ದೇಶದ್ರೋಹಿಗಳನ್ನು ಹಿಡಿಯಿರಿ ಅಂದ್ರೆ, ದೇಶದ್ರೋಹಿಗಳ ವಿರುದ್ಧ ದನಿ ಎತ್ತಿದವರ ವಿರುದ್ಧ ಕ್ರಮ ತೆಗೆದುಕೊಳ್ತಿರಾ ಎಂದು ಪ್ರಶ್ನಿಸಿದರು.

ದೇಶದ್ರೋಹಿಗಳ ರಕ್ಷಣೆ ಕಾಂಗ್ರೆಸ್​ನ 6ನೇ ಗ್ಯಾರಂಟಿ: 5 ಗ್ಯಾರಂಟಿಗಳ ಜೊತೆ ದೇಶದ್ರೋಹಿಗಳನ್ನು ರಕ್ಷಣೆ ಮಾಡುವ 6ನೇ ಗ್ಯಾರಂಟಿ ಸೇರಿಸಿಕೊಂಡಿದ್ದಾರೆ. ತಪ್ಪಿತಸ್ಥರನ್ನು ನಿರಪರಾಧಿ ಎಂದು ಹೇಳುತ್ತಿರುವುದು ಖಂಡನೀಯ. ಈ ಕುರಿತು ಬಿಜೆಪಿ ನಿನ್ನೆಯೇ ಹೋರಾಟ ನಡೆಸಿದೆ. ನಾಸಿರ್ ಹುಸೇನ್ ನಡವಳಿಕೆಯನ್ನು ಇಡೀ ರಾಜ್ಯದ ಜನರು ಗಮನಿಸಿದ್ದಾರೆ. ಅವರು ಆಯ್ಕೆಯಾದ ಮರುಕ್ಷಣವೇ ಈ ರೀತಿ ನಡೆದಿದೆ ಎಂದರೆ, ಮುಂದೆ ಇನ್ನೇನು ಗಂಡಾಂತರ ಕಾದಿದೆಯೋ ಗೊತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಈ ರೀತಿಯ ಘಟನೆಗಳು ನಡೆಯುತ್ತಿವೆ. ಡಿಸಿಎಂ ಅವರಿಗೆ ಕ್ಲೀನ್ ಚಿಟ್ ನೀಡುವುದು, ಗೃಹಮಂತ್ರಿಗಳು ಏನು ಆಗೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ಇದು ರಾಜ್ಯದ ಜನರು ತಲೆತಗ್ಗಿಸುವ ಕೆಲಸ ಎಂದರು.

ಪ್ರಕಾಶ್ ರೈ ಹೇಳಿಕೆಗೆ ಕಿಡಿ: ಯಾರೋ ಒಬ್ಬ ಅಯೋಗ್ಯ ಮಾತಾಡ್ತಾರೆ ಅಂತಾ ಅವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಮೋದಿಯವರನ್ನು ದೇಶದ ಎಲ್ಲಾ ವರ್ಗದ ಜನರು ಒಪ್ಪಿದ್ದಾರೆ. ದೇಶದ ಪ್ರಧಾನಿಯಾಗಿ ಮೋದಿಯವರೇ ಆಯ್ಕೆಯಾಗಬೇಕೆಂದು ಜನರು ಬಯಸಿದ್ದಾರೆ. ಖರ್ಗೆಯವರು ಕೂಡ ಅದೇ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. 400ಕ್ಕೂ ಹೆಚ್ಚು ಸೀಟು ಗೆದ್ದು ಮೋದಿ ಪ್ರಧಾನಿಯಾಗ್ತಾರೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಮೋದಿಯವರೇ ಪ್ರಧಾನಿ ಆಗುತ್ತಾರೆ. ಉಡಾಫೆಯಾಗಿ ಮಾತನಾಡುವವರಿಗೆ ದೇಶದ ಜನರೇ ಉತ್ತರಿಸುತ್ತಾರೆ ಎಂದು ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ನಾವು, ಜೆಡಿಎಸ್ ಸೇರಿ 5ನೇ ಅಭ್ಯರ್ಥಿ ಹಾಕಿದ್ದು ನಿಜ. ಅದಕ್ಕೆ ಕಾರಣಗಳು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಇದೇ ವೇಳೆ ತಿಳಿಸಿದರು.

ಮತ್ತೆ ವಿದ್ಯುತ್ ದರ ಏರಿಕೆ ವಿಚಾರ: ನುಡಿದಂತೆ ನಡೆದಿದ್ದೇವೆ ಎಂದು ಹೇಳುವ ಸರ್ಕಾರ ರೈತ ವಿರೋಧಿ, ಬಡವರ ವಿರೋಧಿಯಾಗಿದೆ. ರೈತರು ಹೊಲಕ್ಕೆ ವಿದ್ಯುತ್ ಪರಿವರ್ತಕ (Transformer) ಹಾಕಲು ಹಿಂದೆ ಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಉಚಿತ ವಿದ್ಯುತ್ ಎಂದು ಹೇಳಿ ಬಡವರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದರು.

ಸೈಕಲ್ ಶಾಪ್, ಹಿಟ್ಟಿನ ಗಿರಣಿ ಅಂಗಡಿಗಳಿಗೆ 500 ರೂ. ಬಿಲ್ ಬರುವ ಜಾಗದಲ್ಲಿ 2 ಸಾವಿರ ರೂ. ಬರ್ತಿದೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ. ಈ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ನಡೆದಿದೆ. ರಾಜ್ಯದ ಜನರ ಮುಂದೆ ಇವರ ನಿಜವಾದ ಬಣ್ಣ ಬಿಚ್ಚಿಡುತ್ತೇವೆ ಎಂದು ಹೇಳಿದರು.

ಸಂಸದ ಕಟೀಲ್ ಹೇಳಿಕೆ

ಸೋಮಶೇಖರ್, ಹೆಬ್ಬಾರ್ ವಿರುದ್ಧ ಕ್ರಮ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್ ಹಾಗೂ ಮತದಾನದಿಂದ ಹಿಂದೆ ಸರಿದ ಶಿವರಾಂ ಹೆಬ್ಬಾರ್ ವಿರುದ್ಧ ಕೇಂದ್ರದ ನಾಯಕರು ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

ಲೋಕಸಭೆ ಚುನಾವಣೆ ಕ್ಷೇತ್ರ ಹಂಚಿಕೆ ವಿಚಾರ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸೀಟು‌ ಹಂಚಿಕೆ ಕುರಿತು ಮುಂದಿನ ವಾರದಲ್ಲಿ ಜೆಡಿಎಸ್ ಜೊತೆಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಮಂಡ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದರು.

ಪಾಕಿಸ್ತಾನ ಪರ ಘೋಷಣೆ ಕೂಗಿದವನ ಬಂಧನ ಇನ್ನೂ ಆಗಿಲ್ಲ. ಘಟನೆಯನ್ನೂ ಕಾಂಗ್ರೆಸ್ ವಿರೋಧಿಸಿಲ್ಲ.‌ ಇದು ಆ ಪಕ್ಷದ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಕಿಡಿಕಾರಿದರು. ಮಂಗಳೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ಪಾಕ್ ಧ್ವಜ ಹಿಡಿದು ಘೋಷಣೆ ಕೂಗಿದವರ ಬಂಧನವಾಗಿಲ್ಲ. ಕಾಂಗ್ರೆಸ್ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಭಯೋತ್ಪಾದಕರ ಪರವಾಗಿದೆ. ರಾಷ್ಟ್ರದ ವಿರೋಧಿ ಕೃತ್ಯ ಮಾಡಿದವರನ್ನು ಬೆಂಬಲಿಸುತ್ತಿದೆ. ರಾಜ್ಯಸಭಾ ಸದಸ್ಯ ಖಂಡಿಸಬೇಕಿತ್ತು, ಅವರೂ ಮೌನವಾಗಿದ್ದಾರೆ. ಘೋಷಣೆ ಕೂಗಿದವರನ್ನು ತಕ್ಷಣ ಬಂಧಿಸಿ ಜೈಲಿಗಟ್ಟಬೇಕು. ನಾಸೀರ್ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಪಾಕ್ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬಳ್ಳಾರಿಯಲ್ಲಿ ನಾಸಿರ್ ಹುಸೇನ್ ನಾಮಫಲಕಕ್ಕೆ ಮಸಿ ಬಳಿಯಲು ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.