ETV Bharat / state

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಬೆದರಿಕೆ ಕರೆ - Cyber Crime

author img

By ETV Bharat Karnataka Team

Published : Mar 24, 2024, 8:11 AM IST

ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

Etv Bharat
Etv Bharat

ಬೆಂಗಳೂರು: ಸೈಬರ್ ಕಳ್ಳರು ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಬೆದರಿಕೆ ಹಾಕಿದ್ದಾರೆ. ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಹೈಕೋರ್ಟ್ ಭದ್ರತಾ ಪೊಲೀಸ್ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಹೈಕೋರ್ಟ್ ಭದ್ರತಾ ಅಧಿಕಾರಿಗಳಾದ ಇನ್‌ಸ್ಪೆಕ್ಟರ್ ಜಿ.ಶೋಭಾ ಮತ್ತು ಸಬ್ ಇನ್‌ಸ್ಪೆಕ್ಟರ್ ಎ.ಆರ್.ರಘುನಾಯ್ಕ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೊದಲ ಪ್ರಕರಣ: ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮಾ.15 ರಂದು ಸಂಜೆ ಕರೆ ಮಾಡಿರುವ ಅಪರಿಚಿತನೊಬ್ಬ, ಡಿ.ಒ.ಪಿ.ಟಿ ಇಲಾಖೆಯಿಂದ ಕರೆ ಮಾಡುತ್ತಿದ್ದೇನೆ. ತಾವು ಒಂದು ಸಿಮ್ ಕಾರ್ಡ್ ಹೊಂದಿದ್ದೀರಿ. ಆ ಸಿಮ್ ಕಾರ್ಡ್​​ನಿಂದ ಕಾನೂನುಬಾಹಿರವಾಗಿ ಜಾಹೀರಾತು ಹಾಗೂ ಆಕ್ಷೇಪಾರ್ಹ ಮೆಸೇಜ್ ಹಾಕುತ್ತಿದ್ದೀರಿ. ಇದರಿಂದ ನಿಮ್ಮ ಮೇಲೆ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ. ಬೇಕಾದರೆ ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ, ಅವರ ಜೊತೆ ಮಾತನಾಡಿ ನಿಮ್ಮ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿ ಕರೆಯನ್ನು ಇನ್ನೊಬ್ಬನಿಗೆ ವರ್ಗಾವಣೆ ಮಾಡಿದ್ದ. ಆ ವ್ಯಕ್ತಿ ತನ್ನನ್ನು ಪೊಲೀಸ್ ಅಂತ ಹೇಳಿಕೊಂಡು ಏರು ಧ್ವನಿಯಲ್ಲಿ ಮಾತನಾಡಿದ್ದಾನೆ. ಬಳಿಕ ನ್ಯಾಯಮೂರ್ತಿಗಳು ಕರೆ ನಿಷ್ಕ್ರಿಯಗೊಳಿಸಿದ್ದಾರೆ. ವ್ಯವಸ್ಥಿತವಾಗಿ ಸಂಚು ರೂಪಿಸಿ ಬೆದರಿಕೆ ಹಾಕಿ ಹಣ ಪಡೆದು ಮೋಸ ಮಾಡುವ ಗುಂಪು ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿ, ಭದ್ರತಾ ಅಧಿಕಾರಿಗೆ ದೂರು ನೀಡಲು ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದಾರೆ.

ಎರಡನೇ ಪ್ರಕರಣ: ಮತ್ತೋರ್ವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮಾ.15ರ ಬೆಳಗ್ಗೆ 9 ಗಂಟೆಗೆ ಕರೆ ಮಾಡಿರುವ ಅಪರಿಚಿತನೊಬ್ಬ, ಡಿ.ಒ.ಪಿ.ಟಿ ಇಲಾಖೆಯಿಂದ ಕರೆ ಮಾಡುತ್ತಿದ್ದೇನೆ. ತಾವು ಒಂದು ಸಿಮ್ ಕಾರ್ಡ್ ಹೊಂದಿದ್ದೀರಿ. ಆ ಸಿಮ್ ಕಾರ್ಡ್‌ನಿಂದ ಕಾನೂನುಬಾಹಿರವಾಗಿ ಜಾಹೀರಾತು ಹಾಗೂ ಆಕ್ಷೇಪಾರ್ಹ ಮೆಸೇಜ್ ಹಾಕುತ್ತಿದ್ದೀರಿ. ಇದರಿಂದ ನಿಮ್ಮ ಮೇಲೆ ಮುಂಬೈನ ಅಂದೇರಿ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೇಕಾದರೆ ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ, ಅವರ ಜತೆ ಮಾತನಾಡಿ ನಿಮ್ಮ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿ ಕರೆಯನ್ನು ಇನ್ನೊಬ್ಬನಿಗೆ ವರ್ಗಾಯಿಸಿದ್ದ. ಆ ವ್ಯಕ್ತಿ ತನ್ನನ್ನು ಪೊಲೀಸ್ ಅಂತ ಹೇಳಿಕೊಂಡು ಏರು ಧ್ವನಿಯಲ್ಲಿ ಮಾತನಾಡಿ, ನೀವು ದುಡ್ಡು ಕೊಟ್ಟರೆ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾನೆ. ನಂತರ ನ್ಯಾಯಮೂರ್ತಿಗಳು ಕರೆ ನಿಷ್ಕ್ರಿಯಗೊಳಿಸಿದ್ದಾರೆ. ನಂತರ ನ್ಯಾಯಮೂರ್ತಿಗಳು, ಇದೊಂದು ವ್ಯವಸ್ಥಿತವಾಗಿ ಸಂಚು ರೂಪಿಸಿಕೊಂಡು ಬೆದರಿಕೆ ಹಾಕಿ ಹಣ ಪಡೆದು ಮೋಸ ಮಾಡುವ ಗುಂಪು ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿ ಭದ್ರತಾ ಅಧಿಕಾರಿಗೆ ದೂರು ನೀಡಲು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಶಾಮನೂರು ಶಿವಶಂಕರಪ್ಪ ಕಚೇರಿಗೆ ಬಂತು ಸಿಎಂ, ಡಿಸಿಎಂಗೆ ಬೆದರಿಕೆ ಪತ್ರ: ದೂರು ದಾಖಲು - Threat Letter

ETV Bharat Logo

Copyright © 2024 Ushodaya Enterprises Pvt. Ltd., All Rights Reserved.