ETV Bharat / state

ಶಾಮನೂರು ಶಿವಶಂಕರಪ್ಪ ಕಚೇರಿಗೆ ಬಂತು ಸಿಎಂ, ಡಿಸಿಎಂಗೆ ಬೆದರಿಕೆ ಪತ್ರ: ದೂರು ದಾಖಲು - Threat Letter

author img

By ETV Bharat Karnataka Team

Published : Mar 22, 2024, 8:23 AM IST

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೆದರಿಕೆ ಪತ್ರ ಬಂದಿದೆ. ದಾವಣಗೆರೆ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Etv Bharat
Etv Bharat

ದಾವಣಗೆರೆ: ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಕಚೇರಿಗೆ ಮಾರ್ಚ್ 18ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಮನೂರು ಶಿವಶಂಕರಪ್ಪನವರ ಆಪ್ತ ಸಹಾಯಕರು ನಗರದ ಬಡಾವಣೆ ಠಾಣೆಯಲ್ಲಿ ಬೆದರಿಕೆ ಪತ್ರದ ಕುರಿತು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾ‌ರ್ ಅವರ ವಿರುದ್ಧ ಪತ್ರದ ಮೂಲಕ ವೈಯಕ್ತಿಕವಾಗಿ ಮಾನಹಾನಿ ಮಾಡಿ ಪ್ರಾಣ ಬೆದರಿಕೆ ಹಾಕಿರುವ ಕುರಿತಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ​ ವಿವರ: ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್​​ನಲ್ಲಿರುವ ಶಾಮನೂರು ಶಿವಶಂಕರಪ್ಪನವರ ನಿವಾಸದ ಕಚೇರಿಗೆ ದಿನನಿತ್ಯ ಬರುವ ಪತ್ರಗಳನ್ನು ಪರಿಶೀಲನೆ ನಡೆಸುವ ವೇಳೆ ಮಾ.18ರಂದು ಸಿಎಂ ಹಾಗೂ ಡಿಸಿಎಂ ಬಗ್ಗೆ ವೈಯಕ್ತಿಕ ಮಾನಹಾನಿ ಮಾಡುವ ಕೆಟ್ಟ ಶಬ್ದಗಳನ್ನು ಬಳಸಿ ಪ್ರಾಣ ಬೆದರಿಕೆ ಹಾಕಿರುವ ಪತ್ರ ದೊರೆತಿದೆ. ಈ ವಿಚಾರವನ್ನು ಶಾಸಕರು ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಅವರ ಗಮನಕ್ಕೆ ತಂದಿದ್ದಾರೆ. ಆ ಬಳಿಕ ಎಸ್​ಪಿ ಅವರ ಸಲಹೆಯಂತೆ ದೂರು ನೀಡಲಾಗಿದೆ. ಪತ್ರದಲ್ಲಿ ವೈಯಕ್ತಿಕ ಚಾರಿತ್ರಕ್ಕೆ ಧಕ್ಕೆ ಬರುವ ರೀತಿ ಪದಗಳನ್ನು ಬಳಸಲಾಗಿದೆ. ಅಲ್ಲದೇ ಬೆದರಿಕೆ ಸಹ ಹಾಕಲಾಗಿದೆ. ಈ ಪತ್ರ ಬರೆದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

"ಮಾ.18ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿರುವ ಅನಾಮಧೇಯ ಪತ್ರ ಕಚೇರಿಯಲ್ಲಿ ದೊರೆತಿದೆ. ಪತ್ರವನ್ನು ತಕ್ಷಣ ಶಾಸಕರಿಗೆ ತೋರಿಸಿದಾಗ, ಅವರು ಎಸ್ಪಿಯವರ ಗಮನಕ್ಕೆ ತಂದಿದ್ದಾರೆ. ಎಸ್ಪಿ ಉಮಾಪ್ರಶಾಂತ್ ದೂರು ದಾಖಲಿಸುವಂತೆ ತಿಳಿಸಿದ್ದರು. ನಾನೇ ಮಾ.19ರಂದು ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ" ಎಂದು ಶಾಸಕ ಶಾಮನೂರು ಶಿವಶಂಕರಪ್ಪನವರ ಆಪ್ತ ಸಹಾಯಕ ರವಿಕುಮಾರ್ ಎಸ್ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಹಿಂದಿರುವ “ದುಷ್ಟ ಶಕ್ತಿ’’ ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ: ಸಿಎಂ ಸಿದ್ದರಾಮಯ್ಯ - CM siddaramaiah DEMAND

ETV Bharat Logo

Copyright © 2024 Ushodaya Enterprises Pvt. Ltd., All Rights Reserved.