ETV Bharat / state

ದೆಹಲಿ ವಿವಾಹಿತೆಯ ಮೇಲೆ ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ - GANG RAPE CASE

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

three-accused-arrested-in-woman-gang-rape-case
ಬೆಂಗಳೂರು (ಸಂಗ್ರಹ ಚಿತ್ರ) (ETV Bharat)
author img

By ETV Bharat Karnataka Team

Published : Feb 21, 2025, 8:21 PM IST

Updated : Feb 21, 2025, 8:27 PM IST

ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದಡಿ ಮೂವರು ಆರೋಪಿಗಳನ್ನು ನಗರದ ಕೋರಮಂಗಲ ಠಾಣೆ ಪೊಲೀಸರು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಗಳು ಉತ್ತರ ಭಾರತದವರು: ಅತ್ಯಾಚಾರಕ್ಕೆ ಒಳಗಾದ ಮಹಿಳೆ (33 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪಶ್ಚಿಮ ಬಂಗಾಳ ಹಾಗೂ ಉತ್ತರಾಖಂಡ್ ಮೂಲದ ಅಜಿತ್, ವಿಶ್ವಾಸ್ ಹಾಗೂ ಶಿವು ಎಂಬವರನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಆಗ್ನೇಯ ವಿಭಾಗದ ಡಿಸಿಪಿ ಮಾಹಿತಿ (ETV Bharat)

ವೆಲ್‌ಕಮ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆ: ದೆಹಲಿ ಮೂಲದ ವಿವಾಹಿತ ಸಂತ್ರಸ್ತೆ ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ವೆಲ್‌ಕಮ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯನ್ನು ಭೇಟಿ ಮಾಡಲು ತಡರಾತ್ರಿ ಕೋರಮಂಗಲ ಬಳಿ ಬರುವಾಗ ನಾಲ್ವರು ಆರೋಪಿಗಳು ಪರಿಚಯಸ್ಥರಂತೆ ಮಾತನಾಡಿ, ಆಕೆಯನ್ನು ಪುಸಲಾಯಿಸಿ ಹೋಟೆಲ್​​​ವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇಂದು ನಸುಕಿನಜಾವ ಆಕೆ ಬಳಿಯಿದ್ದ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಈ ಬಗ್ಗೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಕೃತ್ಯದ ಕುರಿತು ಸಂತ್ರಸ್ತೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಮೂವರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೋಟೆಲ್‌ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಡಿಸಿಪಿ ಪ್ರತಿಕ್ರಿಯೆ: ಪ್ರಕರಣ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾತನಾಡಿ ''ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಸಂಬಂಧ ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಸ್ನೇಹಿತೆಯನ್ನು ಭೇಟಿ ಮಾಡಲು ಮಹಿಳೆಯನ್ನು ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯು ಗುಣಮುಖರಾದ ಬಳಿಕ ಹೇಳಿಕೆ ಪಡೆದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ರೌಡಿಶೀಟರ್‌ಗೆ ಪೊಲೀಸರಿಂದ ಗುಂಡೇಟು

Last Updated : Feb 21, 2025, 8:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.