ETV Bharat / state

ಬೆಂಗಳೂರು: ತನ್ನದೇ ಮಗುವಿಗೆ ಚಾಕು ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದ ವ್ಯಕ್ತಿ ಹತ್ಯೆ, ಮೂವರ ಬಂಧನ - THREE ARRESTED IN MURDER CASE

ತನ್ನದೇ ಮಗುವನ್ನು ಕೊಲೆ ಮಾಡುವುದಾಗಿ ಬೆದರಿಸಿ ಗಲಾಟೆ ಮಾಡುತ್ತಿದ್ದ ವ್ಯಕ್ತಿಯ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

murder
ಆರೋಪಿಗಳು (ETV Bharat)
author img

By ETV Bharat Karnataka Team

Published : Dec 17, 2024, 1:10 PM IST

ಬೆಂಗಳೂರು: ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಲ್ಲದೆ, ಬೈಕ್​ಗೆ ಬೆಂಕಿ ಹಚ್ಚಿ ತನ್ನ 20 ದಿನದ ಶಿಶುವನ್ನು ಕೊಲ್ಲುವುದಾಗಿ ಬೆದರಿಸಿದ್ದ ವ್ಯಕ್ತಿಯನ್ನು ಪತ್ನಿಯ ಸಹೋದರರೇ ಕೊಲೆ ಮಾಡಿದ್ದು, ಮೂವರು ಆರೋಪಿಗಳನ್ನು ನಗರದ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಲ್ಮಾನ್ ಖಾನ್ (29) ಹತ್ಯೆ ಮಾಡಿದ ಆರೋಪದಡಿ ಪತ್ನಿಯ ಸಹೋದರರಾದ ಉಮರ್, ಶೊಯೇಬ್ ಹಾಗೂ ಅನ್ವರ್ ಎಂಬವರನ್ನು ಬಂಧಿಸಲಾಗಿದೆ. ಸಿದ್ದಾಪುರದಲ್ಲಿ ವಾಸವಾಗಿದ್ದ ಸಲ್ಮಾನ್ ಖಾನ್, ಬೀರು ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಗೃಹಿಣಿಯಾಗಿದ್ದಾರೆ. ದಂಪತಿಗೆ 20 ದಿನದ ಮಗುವಿದೆ. ಕುಡಿತಕ್ಕೆ ದಾಸನಾಗಿದ್ದ ಸಲ್ಮಾನ್ ಕೆಲವು ತಿಂಗಳಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮದ್ಯಪಾನ ಮಾಡಿ ಮನೆಗೆ ಬಂದು ಹೆಂಡತಿಯೊಂದಿಗೆ ಜಗಳ ಮಾಡುತ್ತಿದ್ದ. ಹಲವು ಬಾರಿ ಬುದ್ಧಿವಾದ ಹೇಳಿದರೂ ಮಾತು ಕೇಳದೆ, ಹಳೆ ಚಾಳಿ ಮುಂದುವರೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸಿಪಿ ಮಾಹಿತಿ (ETV Bharat)

ಬೈಕ್​ಗೆ ಬೆಂಕಿ ಹಚ್ಚಿದ್ದ‌‌ ಆರೋಪಿ: ನಿನ್ನೆ ರಾತ್ರಿಯೂ ಸಹ ಮದ್ಯದ ನಶೆಯಲ್ಲಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡಿದ್ದ. ಈತನ ಕಾಟ ತಾಳಲಾರದೆ 112ಕ್ಕೆ ಕರೆ ಮಾಡಿ ಪೊಲೀಸರನ್ನು ಕರೆಯಿಸಿಕೊಳ್ಳುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದ. ಇಂದು ಬೆಳಗಿನಜಾವ ಮನೆಗೆ ಬಂದು ಪೊಲೀಸರನ್ನು ಕರೆಯಿಸುತ್ತೀರಾ ಎಂದು ಕ್ಯಾತೆ ತೆಗೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ್ದ‌‌ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

''ಇದರಿಂದ ಆತಂಕಗೊಂಡ ಪತ್ನಿಯು ತನ್ನ ಸಹೋದರರನ್ನು ಸ್ಥಳಕ್ಕೆ ಕರೆಯಿಸಿಕೊಂಡಿದ್ದಳು. ಈ ವೇಳೆ ತನ್ನ ಮಗುವಿಗೆ ಚಾಕು ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾನೆ. ಆಗ ಆರೋಪಿಗಳು ಮರದ ಕೋಲಿನಿಂದ ಆತನಿಗೆ ಹೊಡೆದು ಮಗುವನ್ನು ಕಸಿದುಕೊಂಡಿದ್ದಾರೆ. ಬಳಿಕ ಸಲ್ಮಾನ್ ಕೈಯಲ್ಲಿದ್ದ ಚಾಕು ಕಿತ್ತುಕೊಂಡು ಆತನಿಗೆ ತಿವಿದಿದ್ದಾರೆ. ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಲ್ಮಾನ್ ಮೃತಪಟ್ಟಿದ್ದಾನೆ.‌ ಮೃತನ ವಿರುದ್ಧ ಇದುವರೆಗೂ ಆರು ಪ್ರಕರಣಗಳು ದಾಖಲಾಗಿದ್ದವು'' ಎಂದು ಎಂದು ದಕ್ಷಿಣ ವಿಭಾಗದ ಡಿಸಿಪಿ ಲೊಕೇಶ್ ಜಗಲಾಸರ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿ: ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.