ETV Bharat / state

ಅ.23ರಿಂದ 25ರವರೆಗೆ ಅದ್ಧೂರಿ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ - KITTUR UTSAV

ಅ.23ರಿಂದ 25ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಕಿತ್ತೂರು ಉತ್ಸವ ನಡೆಯಲಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದ್ದಾರೆ.

ಅ.23 ರಿಂದ 25ರವರೆಗೆ ಅದ್ದೂರಿ ಕಿತ್ತೂರು ಉತ್ಸವ
ಅ.23 ರಿಂದ 25ರವರೆಗೆ ಅದ್ದೂರಿ ಕಿತ್ತೂರು ಉತ್ಸವ (ETV Bharat)
author img

By ETV Bharat Karnataka Team

Published : Oct 20, 2024, 12:42 PM IST

ಬೆಳಗಾವಿ: ಚೆನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ಮೂರು ದಿನಗಳ ಕಾಲ ಸಂಭ್ರಮದ ಉತ್ಸವ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು.

23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಿತ್ತೂರು ಉತ್ಸವ ಮಾಹಿತಿ (ETV Bharat)

ಶನಿವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಬಾಬಾಸಾಹೇಬ ಪಾಟೀಲ, "ಕಾರ್ಯಕ್ರಮ ಪಟ್ಟಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವ ಉದ್ಘಾಟಿಸಬೇಕಿತ್ತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಬೇಕಿತ್ತು. ಆದರೆ, ಕಾರಣಾಂತರದಿಂದ ಅಂದು ಅವರಿಗೆ ಬರಲಾಗುತ್ತಿಲ್ಲ. ಇಬ್ಬರೂ ನಾಯಕರು 25ರಂದು ರಾತ್ರಿ 8ಕ್ಕೆ ನಡೆಯುವ ಸಮಾರೋಪ ಸಮಾರಂಭಕ್ಕೆ ಬರಲು ಒಪ್ಪಿದ್ದಾರೆ. ಕಿತ್ತೂರು ಉತ್ಸವ ಉದ್ಘಾಟಿಸಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ಭಯದಿಂದ ಸಿಎಂ 23ರಂದು ಬರುತ್ತಿಲ್ಲ ಎಂಬುದು ಶುದ್ಧ ಸುಳ್ಳು" ಎಂದು ಹೇಳಿದರು.

"200ನೇ ಚನ್ನಮ್ಮ ವಿಜಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ. ಅನುದಾನ ಘೋಷಿಸಿದೆ. ಒಂದೆರಡು ದಿನಗಳಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ. ಕಿತ್ತೂರು ಕೋಟೆ ಆವರಣದಲ್ಲಿ ರಾಣಿ ಚನ್ನಮ್ಮ ಮುಖ್ಯ ವೇದಿಕೆ ನಿರ್ಮಿಸಲಾಗಿದ್ದು, ವೇದಿಕೆ ಮುಂಭಾಗದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ಜನರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ 'ಸರದಾರ ಗುರುಸಿದ್ದಪ್ಪ ವೇದಿಕೆ' ನಿರ್ಮಿಸಲಾಗಿದೆ. ಎರಡೂ ಕಡೆ ಮೂರು ದಿನ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ" ಎಂದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಕಡೆಗಣಿಸುತ್ತಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ, "ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದಂತೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೂ ಸರ್ಕಾರ ಆದ್ಯತೆ ಕೊಟ್ಟಿದೆ. ಈ ವರ್ಷ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 50 ಕೋಟಿ ರೂ.ಗೂ ಅಧಿಕ ಅನುದಾನವನ್ನೂ ನೀಡಿದೆ. ಈ ಹಣದಲ್ಲೇ ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳುತ್ತಿದ್ದೇವೆ. ಕಿತ್ತೂರು ಸಂಸ್ಥಾನಕ್ಕೆ ಸಂಬಂಧಿಸಿದ ಸ್ಮಾರಕಗಳು ಮತ್ತು ಚೆನ್ನಮ್ಮನ ಜನ್ಮಸ್ಥಳವಾದ ಕಾಕತಿಯನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು" ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮಾತನಾಡಿ, "ಈ ಸಲ ಕಿತ್ತೂರು ಉತ್ಸವ ವೈಭವದಿಂದ ಜರುಗಲಿದೆ. ಪ್ರತಿದಿನ 1 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು. ವಸತಿಗಾಗಿ ಹೋಟೆಲ್‌ಗಳು, ಲಾಡ್ಜ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕೆಲವು ಹಾಸ್ಟೆಲ್‌ಗಳನ್ನೂ ಬಳಸಿಕೊಳ್ಳುತ್ತಿದ್ದೇವೆ."

"ಫಲ-ಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಆರೋಗ್ಯ ಮೇಳ, ಕ್ರೀಡೆ ಮತ್ತು ದೋಣಿ ವಿಹಾರವನ್ನು ಆಯೋಜಿಸಲಾಗಿದೆ. ಜಲಸಾಹಸ ಕ್ರೀಡೆ, ಕಬಡ್ಡಿ, ವಾಲಿಬಾಲ್​, ಹಗ್ಗಜಗ್ಗಾಟ, ಕುಸ್ತಿ ಪಂದ್ಯಾವಳಿ ನಡೆಯಲಿದೆ. ಬೈಕ್​ ರ್‍ಯಾಲಿ, ಮ್ಯಾರಥಾನ್​​ ಸೇರಿ ಮಹಿಳೆಯರಿಗಾಗಿಯೇ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಉತ್ಸವ ವೀಕ್ಷಣೆಗೆ ಆಗಮಿಸುವವರಿಗೆ ಬಸ್‌ ವ್ಯವಸ್ಥೆ ಕೂಡ ಮಾಡಲಾಗಿದೆ" ಎಂದು ಹೇಳಿದರು.

ಮುಂದುವರೆದು, "ಕಿತ್ತೂರು ಉತ್ಸವ ಪ್ರಯುಕ್ತ ಬೈಲಹೊಂಗಲದಲ್ಲಿ ಯಾವ ಕಾರ್ಯಕ್ರಮ ನಡೆಸದ ಹಿನ್ನೆಲೆ ಅಲ್ಲಿನ ಜನ ಅ.21ರಂದು ಬೈಲಹೊಂಗಲ ಬಂದ್​ಗೆ ಕರೆ ನೀಡಿದ ವಿಚಾರಕ್ಕೆ ಉತ್ಸವ ಹಿನ್ನೆಲೆಯಲ್ಲಿ ಅಲ್ಲಿಯೂ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದೆವು. ಆದರೆ, ಚನ್ನಮ್ಮನ ಸಮಾಧಿ ಸ್ಥಳದಲ್ಲೇ ಕಾರ್ಯಕ್ರಮ ಮಾಡುವಂತೆ ಜನರು ತಿಳಿಸಿದರು. ಆದರೆ ಸ್ಥಳಾವಕಾಶ ಕಡಿಮೆ ಇದೆ. ಹಾಗಾಗಿ, ಅಲ್ಲಿ ಕಾರ್ಯಕ್ರಮಕ್ಕೆ ಒಪ್ಪಿರಲಿಲ್ಲ. ಈ ಸಂಬಂಧ ಶಾಸಕ ಮಹಾಂತೇಶ ಕೌಜಲಗಿ ಅವರೊಂದಿಗೆ ಚರ್ಚಿಸಿದ್ದು, ಉತ್ಸವ ಮುಗಿದ ನಂತರ ಬೈಲಹೊಂಗಲದಲ್ಲೇ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸೋಣ ಎಂದಿದ್ದಾರೆ. ಈ ವಿಷಯವನ್ನು ಜನರಿಗೆ ತಿಳಿಸಿ ಮನವೊಲಿಸುತ್ತೇವೆ" ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, "ಉತ್ಸವಕ್ಕೆ ಸೂಕ್ತ ಪೊಲೀಸ್​ ಬಂದೋಬಸ್ತ್​​ ಒದಗಿಸಲಾಗುವುದು. ವಿವಿಐಪಿ ಪಾಸ್ ವಿತರಿಸಲಾಗುತ್ತದೆ. ಮದ್ಯ ಸೇವಿಸಿ ಕೋಟೆ ಆವರಣದೊಳಗೆ ಬರುವವರನ್ನು ತಪಾಸಣೆ ಮಾಡಿ ಹೊರಕಳಿಸಲಾಗುವುದು. ವಾಹನಗಳ ನಿಲುಗಡೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತದೆ" ಎಂದರು.

ಸುದ್ದಿಗೋಷ್ಠಿಯಲ್ಲಿ ಬೈಲಹೊಂಗಲ ಎಸಿ ಪ್ರಭಾವತಿ ಫಕ್ಕೀರಪುರ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ: ಇದ್ದೂ ಇಲ್ಲದಂತಾದ ರಾಣಿ ಚೆನ್ನಮ್ಮ ಅಧ್ಯಯನ ಪೀಠ: ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.