ETV Bharat / state

ಈಜುಕೊಳದಲ್ಲಿ ಮೂವರು ಯುವತಿಯರ ಸಾವು ಪ್ರಕರಣ: ರೆಸಾರ್ಟ್ ಮಾಲೀಕ, ಮ್ಯಾನೇಜರ್ ಬಂಧನ - GIRLS DROWN IN SWIMMING POOL

ಈಜುಕೊಳದಲ್ಲಿ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರೆಸಾರ್ಟ್ ಮಾಲೀಕ ಮತ್ತು ಮ್ಯಾನೇಜರ್ ಅರೆಸ್ಟ್ ಆಗಿದ್ದಾರೆ.

ರೆಸಾರ್ಟ್ ಈಜುಕೊಳದಲ್ಲಿ ಯುವತಿಯರು ಸಾವು Mangaluru resort Girl drown in swimming pool
ಮೂವರು ಯುವತಿಯರು ಸಾವನ್ನಪ್ಪಿದ ರೆಸಾರ್ಟ್‌ ಮುಂಭಾಗದ ಈಜುಕೊಳ (ETV Bharat)
author img

By ETV Bharat Karnataka Team

Published : Nov 18, 2024, 10:05 AM IST

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌‌ನ ಮಾಲೀಕ ಮತ್ತು ಮ್ಯಾನೇಜರ್​ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್‌‌ ಮಾಲೀಕ ಮನೋಹರ್ ಮತ್ತು ಮ್ಯಾನೇಜರ್ ಭರತ್ ಬಂಧಿತರು.

ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್‌ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್.ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್(21) ಶನಿವಾರ ಬೆಳಗ್ಗೆ ರೆಸಾರ್ಟ್‌ಗೆ ಬಂದು ತಂಗಿದ್ದರು.

ಭಾನುವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿದ್ದ ಈಜುಕೊಳಕ್ಕೆ ಇಳಿದಿದ್ದರು. ಈ ವೇಳೆ ಓರ್ವ ಯುವತಿ ಈಜುಕೊಳದ ಮಧ್ಯದ ಆಳವಿದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು. ಆಕೆ ಒದ್ದಾಡುತ್ತಿರುವುದನ್ನು ಗಮನಿಸಿ ಮತ್ತಿಬ್ಬರು ರಕ್ಷಣೆಗೆ ಧಾವಿಸಿದ್ದರು. ಆದರೆ ಮೂವರಿಗೂ ಈಜು ಬಾರದ ಕಾರಣ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರೆಸಾರ್ಟ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. ಯುವತಿಯರು ಒದ್ದಾಡುತ್ತಿರುವ ಮನಕಲುಕುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ರಾತ್ರಿ ಮಂಗಳೂರಿಗೆ ಆಗಮಿಸಿದ ಯುವತಿಯ ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ್ವಯ ಪೊಲೀಸರು, ವಾಝ್ಕೋ ಬೀಚ್ ರೆಸಾರ್ಟ್‌‌ನ ಮಾಲೀಕ ಮತ್ತು ಮ್ಯಾನೇಜರನನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಯುವತಿಯರು ಮೈಸೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಕಸ್ಮಿಕವಾಗಿ ಈಜಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈಜುಕೊಳಗಳ ಹೊಂದಿರುವ ರೆಸಾರ್ಟ್‌ಗಳು ಸುರಕ್ಷತಾ ಷರತ್ತು ಅನುಸರಿಸಬೇಕಾಗುತ್ತದೆ. ಈ ಬಗ್ಗೆ ಪರಿಶೀಲಿಸಬೇಕಾಗಿದೆ ಎಂದು ಭಾನುವಾರ ಪೊಲೀಸ್ ಕಮೀಷನರ್ ಪ್ರತಿಕ್ರಿಯೆ ನೀಡಿದ್ದರು.

ರೆಸಾರ್ಟ್​ಗೆ ಬೀಗ: ಯುವತಿಯರ ಸಾವಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ರೆಸಾರ್ಟ್‌ಗೆ ಬೀಗಮುದ್ರೆ ಜಡಿದಿದ್ದಾರೆ. ಟ್ರೇಡ್ ಲೈಸನ್ಸ್ ಹಾಗೂ ಟೂರಿಸಂ ಪರವಾನಗಿಯನ್ನು ಅಮಾನತ್ತಿನಲ್ಲಿ ಇಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದರು.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿ ಬೀಚ್ ಪಕ್ಕದಲ್ಲೇ ಈ ರೆಸಾರ್ಟ್‌ ಇದೆ.

ಇದನ್ನೂ ಓದಿ: ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು, ರೆಸಾರ್ಟ್​​ಗೆ ಬೀಗಮುದ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.