ರಾಯಚೂರು: ಹನುಮಾನ ಜಯಂತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಿಂದ ನೀರು ತರಲು ತೆರಳುತ್ತಿದ್ದವರ ಮೇಲೆ ಬೊಲೆರೋ ವಾಹನ ಹರಿದು ಮೂವರು ಸಾನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರಿನ ಶಕ್ತಿನಗರ ಬಳಿ ನಡೆದಿದೆ. ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಬರುವ ಹಳೆ ಮೈಸೂರು ಪೆಟ್ರೋ ಕೆಮಿಕಲ್ಸ್ ಫ್ಯಾಕ್ಟರಿ ಹತ್ತಿರ ಈ ದುರ್ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.
ಮೃತರು ಹೆಗ್ಗಸನಹಳ್ಳಿ ಗ್ರಾಮದ ಅಯ್ಯನಗೌಡ (29), ಮಹೇಶ(24) ಮತ್ತು ಉದಯಕುಮಾರ(30) ಎಂದು ಗುರುತಿಸಲಾಗಿದೆ. ಇಂದು ಹನುಮಾನ ಜಯಂತಿ ಪ್ರಯುಕ್ತ ಗ್ರಾಮದಲ್ಲಿ ಆಂಜನೇಯ ದೇವಾಲಯದ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ 10 ಜನ ಸೇರಿ ಶಕ್ತಿನಗರ ಹತ್ತಿರ ಕೃಷ್ಣಾ ನದಿಯಿಂದ ನೀರು ತಂದು ಪೂಜೆ ಮಾಡುವುದಕ್ಕೆ ಬೆಳಗಿನ ಜಾವ ಹೊರಟಿದ್ದರು. ಈ ಸಮಯದಲ್ಲಿ ಬೊಲೆರೋ ವಾಹನ ಇವರ ಮೇಲೆ ಹರಿದಿದೆ.
ಇದನ್ನೂ ಓದಿ: ಹುಬ್ಬಳ್ಳಿ: ಬಸ್ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವು, ಒಬ್ಬನ ಸ್ಥಿತಿ ಗಂಭೀರ - Three died in Accident
ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗೆ ರಿಮ್ಸ್ಗೆ ರವಾನಿಸಲಾಗಿತ್ತು. ಆದರೆ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಓರ್ವನನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿದರೆ, ಮತ್ತೋರ್ವನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ: ಭೀಕರ ಅಪಘಾತ: ಮಹಾರಾಷ್ಟ್ರಕ್ಕೆ ಮದುವೆಗೆಂದು ತೆರಳುತ್ತಿದ್ದ ಬಾಗಲಕೋಟೆಯ ಐವರು ದುರ್ಮರಣ - Road Accident