ತುಮಕೂರು: ಗಣೇಶನ ನಿಮಜ್ಜನಕ್ಕೆ ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅಪ್ಪ - ಮಕ್ಕಳು ಜಲಸಮಾಧಿಯಾಗಿದ್ದಾರೆ. ಮೃತಪಟ್ಟವರನ್ನು ರೇವಣ್ಣ (50), ಪುತ್ರರಾದ ಶರತ್ (20) ಹಾಗೂ ದಯಾನಂದ (28) ಎಂದು ಗುರುತಿಸಲಾಗಿದೆ. ಮೃತ ದಯಾನಂದ್ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ, ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ನಿಂತಿದ್ದ ಆಟೋಗೆ ಬಸ್ ಡಿಕ್ಕಿ, ಇಬ್ಬರು ಯುವಕರು ಸಾವು - Bus Hits Auto