ETV Bharat / state

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಸ್ ಮೇಲೆ ಕಲ್ಲು ತೂರಾಟ: ಮೂವರ ಬಂಧನ - Stones Pelted On Bus

author img

By ETV Bharat Karnataka Team

Published : Aug 19, 2024, 6:18 PM IST

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಗಿ ಬಸ್​ಗೆ ಕಲ್ಲು ತೂರಿದ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಸ್ ಮೇಲೆ ಕಲ್ಲು ತೂರಾಟ
ಬಸ್ ಮೇಲೆ ಕಲ್ಲು ತೂರಾಟ (ETV Bharat)

ಮಂಗಳೂರು: ಮಹಾನಗರ ಪಾಲಿಕೆಯ ಕಚೇರಿಯ ಮುಂದೆ ನಡೆದ ಕಾಂಗ್ರೆಸ್​ ಪ್ರತಿಭಟನೆ ವೇಳೆ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ನಗರ ಪಾಲಿಕೆ ಕಚೇರಿ ಮುಂಭಾಗದ ಟ್ರಾಫಿಕ್ ಸಿಗ್ನಲ್ ಬಳಿ ಕೆಎ 19 ಸಿ 7266 ನೋಂದಣಿ ಸಂಖ್ಯೆಯ ಬಸ್ ಮೇಲೆ 10 ರಿಂದ 15 ಮಂದಿ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿದ್ದು, ಮುಂಭಾಗಕ್ಕೆ ಹಾನಿಯಾಗಿದ್ದು, ಗಾಜು ಪುಡಿಯಾಗಿದೆ.

ಈ ಘಟನೆ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ: ಬಸ್ಸಿಗೆ ಕಲ್ಲು ತೂರಾಟ, ಟಯರ್ ಸುಟ್ಟು ಆಕ್ರೋಶ - Congress Activists protest

ETV Bharat Logo

Copyright © 2024 Ushodaya Enterprises Pvt. Ltd., All Rights Reserved.