ಬೆಂಗಳೂರು: ಯಶವಂಶಪುರ-ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರತ್ ಹಳ್ಳಿ ಬಳಿ ಬುಧವಾರ ರಾತ್ರಿ ನಡೆದಿದೆ. ಆಂಧ್ರದ ಚಿತ್ತೂರಿನ ಶಶಿಕುಮಾರ್, ಲೊಕೇಶ್ ಹಾಗು ಮತ್ತೋರ್ವ ವ್ಯಕ್ತಿ ಮೃತರೆಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ರೈಲ್ವೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಮೃತಪಟ್ಟ ಯುವಕರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾರು ಅಪಫಾತ: ಕೊಳ್ಳೇಗಾಲ ಶಾಸಕ ಅದೃಷ್ಟವಶಾತ್ ಅಪಾಯದಿಂದ ಪಾರು - MLA Car tyre blast