ಪುತ್ತೂರು (ದಕ್ಷಿಣ ಕನ್ನಡ): ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ - ಮಗ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ತಮ್ಮ ಆಲ್ಟೋ ಕಾರಿನಲ್ಲಿ ಗೊಂದೋಳು ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು.
ಹಿಂತಿರುಗುವ ವೇಳೆ ಮುಂಜಾನೆ 4.15ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಣ್ಣು ನಾಯ್ಕ, ಅವರ ಪುತ್ರ ಚಿದಾನಂದ ಹಾಗೂ ನೆರೆಮನೆಯ ರಮೇಶ್ ನಾಯ್ಕ ಮೃತರು.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಉದಯ ರವಿ ಹಾಗೂ ಎಫ್.ಎಸ್.ಐ. ಎಲ್ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೈಸೂರು: ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನೇ ಕೊಲೆಗೈದು ಅಪಘಾತದ ಕಥೆ ಕಟ್ಟಿದ ಮಗ!