ETV Bharat / state

ಕಾರಿನ ಮೇಲೆ ಕಬ್ಬು ತುಂಬಿದ್ದ ಲಾರಿ ಪಲ್ಟಿ: ಮೂವರು ಸಾವು - lorry overturned on a car

ಚಾಮರಾಜನಗರದ ಗಡಿಭಾಗವಾದ ತಮಿಳುನಾಡಿನ‌ ದಿಂಬಂ ಘಾಟ್​ನಲ್ಲಿ ಅಪಘಾತ ನಡೆದು ಮೂವರು ಸಾವನ್ನಪ್ಪಿದ್ದಾರೆ.

ಕಬ್ಬು ತುಂಬಿದ್ದ ಲಾರಿ ಕಾರಿನ ಮೇಲೆ ಪಲ್ಟಿ
ಕಬ್ಬು ತುಂಬಿದ್ದ ಲಾರಿ ಕಾರಿನ ಮೇಲೆ ಪಲ್ಟಿ
author img

By ETV Bharat Karnataka Team

Published : Mar 12, 2024, 11:22 AM IST

Updated : Mar 12, 2024, 1:31 PM IST

ಕಾರಿನ ಮೇಲೆ ಕಬ್ಬು ತುಂಬಿದ್ದ ಲಾರಿ ಪಲ್ಟಿ

ಚಾಮರಾಜನಗರ: ಕಬ್ಬು ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಅಸುನೀಗಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ‌ ದಿಂಬಂ ಘಾಟ್​ನಲ್ಲಿ ನಡೆದಿದೆ.

ತಾಳವಾಡಿಯಿಂದ ಸತ್ಯಮಂಗಲಂನತ್ತ ಕಬ್ಬು ತುಂಬಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದಿಂಬಂನ 27ನೇ ತಿರುವಿನಲ್ಲಿ ಕಾರಿನ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಐವರಲ್ಲಿ ಮೂವರು ಅಸುನೀಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸತ್ಯಮಂಗಲಂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಧಿಕ ಭಾರ ಹೊಂದಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ತಮಿಳುನಾಡಿನ ಆಸನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಅಪಘಾತದಲ್ಲಿ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮದುವೆ ಮೆರವಣಿಗೆ ಮೇಲೆ ಹರಿದ ಟ್ರಕ್​: ಐವರು ಸಾವು, 11ಕ್ಕೂ ಹೆಚ್ಚು ಜನರಿಗೆ ಗಾಯ

Last Updated : Mar 12, 2024, 1:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.