ETV Bharat / state

ಹುಬ್ಬಳ್ಳಿಯಲ್ಲಿ ಲಾರಿಗೆ ಕ್ಯಾಂಟರ್ ಡಿಕ್ಕಿ: ಗಾಯಗೊಂಡ ಮೂವರನ್ನು ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಶ್ಲಾಘನೆ - Road Accident - ROAD ACCIDENT

ಲಾರಿಗೆ ಹಿಂಬದಿಯಿಂದ ಕ್ಯಾಂಟರ್​ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಲಾರಿಗೆ ಕ್ಯಾಂಟರ್ ಡಿಕ್ಕಿ: ಗಾಯಗೊಂಡ ಮೂವರನ್ನು ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಶ್ಲಾಘನೆ...

author img

By ETV Bharat Karnataka Team

Published : Mar 24, 2024, 3:12 PM IST

ಹುಬ್ಬಳ್ಳಿ: ಲಾರಿಯೊಂದಕ್ಕೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಗದಗ ರಸ್ತೆಯ ಐಟಿಸಿ ಗೋಡೌನ್ ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮೈನ್ಸ್ ತುಂಬಿದ್ದ ಲಾರಿ ಮುಂದೆ ಹೊರಟಿದ್ದ ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮವಾಗಿ ಲಾರಿ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದೆ ಬರುತ್ತಿದ್ದ ಕ್ಯಾಂಟರ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಜುಗಳು ಒಡೆದು ಜಖಂಗೊಂಡಿತ್ತು. ಮೂವರ ಅರ್ಧ ದೇಹಗಳು ಲಾರಿ ಅಡಿಯಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ರಕ್ಷಿಸಲು ಸಾರ್ವಜನಿಕರು ಹರಸಾಹಸಪಟ್ಟರು.

ಸ್ಥಳಕ್ಕೆ ಆಗಮಿಸಿದ ಪೂರ್ವ ಸಂಚಾರ ಠಾಣೆಯ ಪೊಲೀಸರು ರಸ್ತೆಯಲ್ಲಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಸಂಚಾರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: ವಾರಾಣಸಿಗೆ ಹೊರಟ ಕಾರು ತೆಲಂಗಾಣದಲ್ಲಿ ಅಪಘಾತ: ಮೈಸೂರು ಮೂಲದ ಇಬ್ಬರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.