ಮಂಡ್ಯ: ಹೊರರಾಜ್ಯಗಳಿಂದ ಪ್ರವಾಸಕ್ಕೆ ಬರುವ ಪ್ರವಾಸಿಗರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್.ಠಾಣೆಯ ಮುಖ್ಯ ಕಾನ್ಸ್ಟೇಬಲ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಮುಖ್ಯ ಕಾನ್ಸ್ಟೇಬಲ್ ಪುರುಷೋತ್ತಮ್, ಕಾನ್ಸ್ಟೇಬಲ್ಗಳಾದ ಅನಿಲ್ ಕುಮಾರ್ ಹಾಗೂ ಪ್ರಭಸ್ವಾಮಿ ಅಮಾನತಾದವರು.
ಇವರು ಕೆ.ಅರ್.ಎಸ್.ಅಣೆಕಟ್ಟೆ ಸೇರಿದಂತೆ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಬರುವ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾರ್ವಜನಿಕರು ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂವರನ್ನು ಅಮಾನತು ಮಾಡಲಾಗಿದೆ ಎಂದು ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಿ.ಟಿ.ರವಿ ಪ್ರಕರಣದಲ್ಲಿ ಕರ್ತವ್ಯ ಲೋಪ: ಖಾನಾಪುರ ಸಿಪಿಐ ಸಸ್ಪೆಂಡ್- ಗೃಹ ಸಚಿವರು ಹೇಳಿದ್ದೇನು? - C T RAVI CASE