ETV Bharat / state

ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಜನರ ಬಳಿ ಮತ ಯಾಚಿಸುವೆ: ಮೃಣಾಲ್ ಹೆಬ್ಬಾಳ್ಕರ್

author img

By ETV Bharat Karnataka Team

Published : Mar 20, 2024, 4:43 PM IST

Updated : Mar 20, 2024, 7:11 PM IST

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಕಾಂಗ್ರೆಸ್ ಸಭೆಯನ್ನು ಟಿಕೆಟ್ ಆಕಾಂಕ್ಷಿ ಮೃಣಾಲ್ ಹೆಬ್ಬಾಳ್ಕರ್ ನಡೆಸಿದರು.

Mrinal Hebbalkar spoke to media
ಮೃಣಾಲ್ ಹೆಬ್ಬಾಳ್ಕರ್ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿದರು.

ಬೆಳಗಾವಿ: ನನಗೆ ಟಿಕೆಟ್ ನೀಡಿದರೆ ಹೈಕಮಾಂಡ್​ಗೆ ತಲೆಬಾಗಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಬಳಿ ಹೋಗುತ್ತೇನೆ ಎಂದು ಬೆಳಗಾವಿ ಲೋಕಸಭೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮೊದಲ ಕಾಂಗ್ರೆಸ್ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುಮಾರು ವರ್ಷಗಳಿಂದ ಓಡಾಡುತ್ತಿದ್ದೇನೆ. ಪಕ್ಷ ಸಂಘಟನೆಗಾಗಿ ಹಳ್ಳಿ ಹಳ್ಳಿಗೆ ಭೇಟಿ ಕೊಡುತ್ತಿದ್ದೇನೆ. ಈಗ ಒಳ್ಳೆಯ ವಾತಾವರಣ ಇದೆ ಎಂದು ಮೃಣಾಲ್ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ವಿಚಾರದಲ್ಲಿ ನಮ್ಮ ಪಕ್ಷದ ನಿರ್ಧಾರ ಬರುವವರೆಗೆ ಏನೂ ಹೇಳಲ್ಲ. ಅಲ್ಲಿಯವರೆಗೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಎದುರಾಳಿ ಯಾರೇ ಆದರೂ, ನಾವು ಮಾಡಿದ ಕೆಲಸ, ಸತೀಶ್ ಜಾರಕಿಹೊಳಿ‌ ಮತ್ತು ಸರ್ಕಾರದ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗಿ ಮತಯಾಚಿಸುತ್ತೇವೆ ಎಂದು ತಿಳಿಸಿದರು.

ಇದನ್ನೂಓದಿ: ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ, ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

Last Updated : Mar 20, 2024, 7:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.