ETV Bharat / state

ಮೈಸೂರು: ಇಬ್ಬರ ಮೇಲೆ ದಾಳಿ ನಡೆಸಿದ ಹುಲಿ ಕೆಲವೇ ಗಂಟೆಗಳಲ್ಲಿ ಸೆರೆ - ಹುಲಿ ದಾಳಿ

ಇಬ್ಬರ ಮೇಲೆ ದಾಳಿ ನಡೆಸಿದ್ದ ಹುಲಿಯನ್ನು ಮೈಸೂರು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

tiger captured-
ಸೆರೆ ಹಿಡಿದಿರುವ ಹಿಉ
author img

By ETV Bharat Karnataka Team

Published : Jan 31, 2024, 9:29 AM IST

Updated : Jan 31, 2024, 3:00 PM IST

ಹುಲಿ ಸೆರೆ

ಮೈಸೂರು: ಇಬ್ಬರ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಹುಲಿಯನ್ನು ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. ನಂಜನಗೂಡು ತಾಲೂಕಿನ ನಾಗಣಪುರ ಗ್ರಾಮದಲ್ಲಿ ನಾಗೇಂದ್ರ ಎಂಬವರಿಗೆ ಸೇರಿದ ಜಮೀನಿನಲ್ಲಿ ಅವಿತಿದ್ದ ಹುಲಿ, ಮನೆಗೆ ತೆರಳುತ್ತಿದ್ದ ಸುರೇಶ್(45) ಹಾಗೂ ನಂಜುಂಡಸ್ವಾಮಿ(40) ಎಂಬವರ ಮೇಲೆ ದಾಳಿ ನಡೆಸಿತ್ತು. ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಹೆಡಿಯಾಲ ಹಾಗೂ ಓಂಕಾರ್ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದರು. ಕೆಲವೇ ಗಂಟೆಗಳಲ್ಲಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಎರಡು ವರ್ಷದ ಹೆಣ್ಣು ಹುಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಮೈಸೂರು: ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕಾರು ಡಿಕ್ಕಿ ಹೊಡೆದು ಹುಲಿ ಸಾವು, ಪ್ರಕರಣ ದಾಖಲು

Last Updated : Jan 31, 2024, 3:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.