ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ಅಂತಿಮ ಹಂತದತ್ತ ಸಾಗುತ್ತಿದ್ದು, ಟೂರ್ನಿಯ 68 ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲು ಎರಡೂ ತಂಡಗಳಿಗೆ ಇಂದಿನ ಪಂದ್ಯ ಅತಿ ಮುಖ್ಯವಾಗಿರುವುದರಿಂದ ಅಭಿಮಾನಿಗಳ ಚಿತ್ತ ಇಂದಿನ ಪಂದ್ಯದ ಮೇಲೆ ನೆಟ್ಟಿದೆ.
ಹೈವೋಲ್ಟೇಜ್ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೈದಾನದತ್ತ ಆಗಮಿಸಲಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಾಲ್ವರು ಡಿಸಿಪಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್ಗಳು, 80 ಸಬ್ ಇನ್ಸ್ಪೆಕ್ಟರ್ಗಳು, ಗೃಹರಕ್ಷಕ ದಳ, 4 ಕೆಎಸ್ಆರ್ಪಿ ತುಕಡಿಗಳು ಸೇರಿದಂತೆ 1200 ಜನ ಸಿಬ್ಬಂದಿ ಮೈದಾನದ ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಕ್ಯೂ.ಆರ್.ಟಿ, ವಾಟರ್ ಜೆಟ್, ಬಾಂಬ್ ನಿಷ್ಕ್ರಿಯ ದಳಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೈದಾನದ ಹೊರಗಡೆ ನಕಲಿ ಟಿಕೆಟ್ ಹಾವಳಿ ತಡೆಗಟ್ಟಲು ಮಫ್ತಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನೋ ಪಾರ್ಕಿಂಗ್ ಸ್ಥಳಗಳು (ಮಧ್ಯಾಹ್ನ 3ರಿಂದ ರಾತ್ರಿ 11:00 ಗಂಟೆಯವರೆಗೆ):
ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೈಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
ಕಸ್ತೂರಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ
ಸಾರ್ವಜನಿಕ ವಾಹನಗಳ ನಿಲುಗಡೆಗೆ ಸ್ಥಳಗಳು:
ಸೈಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ)