ETV Bharat / state

ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಇಂದು ಕೊನೆಯ ದಿನ: ನಾಳೆಯಿಂದ ಬೀಳುತ್ತಾ ದಂಡ? - HSRP Deadline

author img

By ETV Bharat Karnataka Team

Published : Sep 15, 2024, 10:14 AM IST

ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಗೆ ಇಂದು ಕೊನೆಯ ದಿನವಾಗಿದೆ. ಆದರೆ ರಾಜ್ಯದಲ್ಲಿ ಈವರೆಗೆ ಶೇ.26ರಷ್ಟು ವಾಹನಗಳು ಮಾತ್ರ ಈ ಪ್ಲೇಟ್ ಅಳವಡಿಸಿಕೊಂಡಿವೆ.

ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ
ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ (ETV Bharat)

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೈಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಇಂದು ಕೊನೆಯ ದಿನಾಂಕವಾಗಿದೆ. ಮೂರು ಬಾರಿಯ ಗಡುವು ವಿಸ್ತರಣೆಯ ನಂತರವೂ ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಸದ ಸವಾರರಿಗೆ ನಾಳೆಯಿಂದ ದಂಡದ ಬಿಸಿ ತಟ್ಟುತ್ತದಾ ಕಾದು ನೋಡಬೇಕಿದೆ.

ಆದಾಗ್ಯೂ ಸಹ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧ ಸೆಪ್ಟಂಬರ್ 18ರಂದು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರಲಿದ್ದು, ಮತ್ತೊಮ್ಮೆ ಗಡುವು ವಿಸ್ತರಣೆ ಅಥವಾ ದಂಡ ವಿಧಿಸುವುದರ ಕುರಿತು ಅಂದು ನಿರ್ಧಾರವಾಗಲಿದೆ. ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ.26ರಷ್ಟು ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದ್ದು, ಮೂರು ಬಾರಿ ಗಡುವು ವಿಸ್ತರಿಸಲಾಗಿದೆ. ಆದರೂ ಸಹ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುವ ವಾಹನ ಮಾಲೀಕರು 500 ರೂ ದಂಡ ಪಾವತಿಸಬೇಕಾಗುತ್ತದೆ. ಸೆಪ್ಟೆಂಬರ್ 16ರಿಂದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಎಚ್ ಸರಣಿ ನಂಬರ್​ ಪ್ಲೇಟ್ ಎಂದರೇನು, ಇದರ ಪ್ರಯೋಜನಗಳೇನು?: ಇಲ್ಲಿದೆ ಸಂಪೂರ್ಣ ಮಾಹಿತಿ - BH series number plate

2019ರ ಏಪ್ರಿಲ್‌ 1ಕ್ಕೂ ಮೊದಲು ನೋಂದಾಯಿಸಲ್ಪಟ್ಟಿರುವ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್ ತಿಂಗಳಿನಲ್ಲಿ ಕೇಂದ್ರ ಸಾರಿಗೆ ಇಲಾಖೆ ಹೊರಡಿಸಿತ್ತು. ಆರಂಭದಲ್ಲಿ ಕೆಲ ತಾಂತ್ರಿಕ ಮತ್ತಿತರ ಕಾರಣಗಳಿಂದಾಗಿ 2023ರ ನವೆಂಬರ್ 17 ರ ಗಡುವು ವಿಸ್ತರಿಸಲಾಗಿತ್ತು.

ಹೆಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌ ಎಂದರೇನು?: ಸಾಮಾನ್ಯ ನಂಬರ್ ಪ್ಲೇಟ್​​ ಗಳಿಗಿಂತಲೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಭಿನ್ನವಾಗಿರುತ್ತವೆ. ಇವು ಅಲ್ಯೂಮಿನಿಯಂ ಲೋಹದಿಂದ ತಯಾರಿಸಲ್ಪಟ್ಟ ಪ್ಲೇಟ್​ಗಳು. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರದ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರದೊಂದಿಗೆ ಉಬ್ಬಿಕೊಂಡಿರುವ ರೀತಿ ನಂಬರ್​ಗಳು ಅಚ್ಚಾಗಿರುತ್ತವೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಇಂಗ್ಲಿಷ್‌ನಲ್ಲಿ ಇಂಡಿಯಾ ಎಂಬ ಪದ ಹಲವೆಡೆ ಇರುತ್ತದೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಹೆಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ. ಇದರಿಂದಾಗಿ ಅಸಲಿ ಹಾಗೂ ನಕಲಿ ನಂಬರ್ ಪ್ಲೇಟ್​ಗಳನ್ನು ಗುರುತಿಸಲು ಸುಲಭವಾಗಿರುತ್ತದೆ. ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿರುವುದಿಲ್ಲ.

ಇದನ್ನೂ ಓದಿ: ವಾಹನಗಳಿಗೆ ಭಾರತ್​​ ಸರಣಿಯ ನಂಬರ್​ ಪ್ಲೇಟ್​: ಅನುಕೂಲವೇನು? ಅರ್ಜಿ ಸಲ್ಲಿಸುವುದು ಹೇಗೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.