ETV Bharat / state

ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು: 2024ರಲ್ಲಿ ಹೈಕೋರ್ಟ್​ನ ಪ್ರಮುಖ ತೀರ್ಪುಗಳು - HIGH COURT ORDERS IN 2024

2024ನೇ ವರ್ಷವು ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯುತ್ತಿದೆ. ಹೊಸ ಸಂವತ್ಸರದ ಆರಂಭಕ್ಕೂ ಮುನ್ನ ಈ ವರ್ಷ ಕರ್ನಾಟಕ ಹೈಕೋರ್ಟ್​ ನೀಡಿದ್ದ ಪ್ರಮುಖ ಆದೇಶಗಳ ಸಂಕ್ಷಿಪ್ತ ಹಿನ್ನೋಟ ತಿಳಿದುಕೊಳ್ಳೋಣ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Dec 23, 2024, 1:31 PM IST

ಬೆಂಗಳೂರು: 2024ನೇ ವರ್ಷ ಮುಕ್ತಾಯವಾಗುತ್ತಿದೆ. ಹೊಸ ವರ್ಷ 2025ಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಹೈಕೋರ್ಟ್ ಈ ವರ್ಷ ಹೊರಡಿಸಿದ್ದ ಮಹತ್ವದ ಆದೇಶಗಳನ್ನು ಒಮ್ಮೆ ಮೆಲುಕು ಹಾಕೋಣ.

ಹೈಕೋರ್ಟ್​ ನೀಡಿದ್ದ ಪ್ರಮುಖ ಆದೇಶಗಳು ಹೀಗಿವೆ:

HIGH COURT ORDERS IN 2024
ಹೈಕೋರ್ಟ್​ನ ಪ್ರಮುಖ ತೀರ್ಪುಗಳು (ETV Bharat)

ಮಲಗುಂಡಿ ಸ್ವಚ್ಛತೆಗೆ ತಳ ಸಮುದಾಯದವರ ಬಳಕೆ ಮಾಡಿಕೊಂಡಿರುವ ಕುರಿತಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿತ್ತು.

  • ಮೃತ ಪುತ್ರನಿಗೆ ಪಿತ್ರಾರ್ಜಿತ ಆಸ್ತಿಯ ಹಕ್ಕು ಇದೆ ಎಂದಾದರೆ ಹೆಣ್ಣು ಮಕ್ಕಳಿಗೂ ಅದು ಅನ್ವಯವಾಗುತ್ತದೆ. ಆದ್ದರಿಂದ ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.
  • ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆ ಸುತ್ತ 30 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಆದೇಶ.
  • ರಾಜ್ಯದಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್.
  • ಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಇದ್ದ ಅವಕಾಶ ರದ್ದುಗೊಳಿಸಿದ್ದಲ್ಲದೇ, ಈ ರೀತಿಯ ಮೀಸಲಾತಿ ಸಂವಿಧಾನದ ಪರಿಚ್ಛೇದ 14 ಮತ್ತು 16(2)ಕ್ಕೆ ವಿರುದ್ಧ ಎಂದು ಸಾರಿದ್ದ ಹೈಕೋರ್ಟ್.
  • ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಿದರೆ ಜನ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದ ಹೈಕೋರ್ಟ್, ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

  • ಸರ್ಕಾರ ಬದಲಾದರೆ ಅಧಿಕಾರಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ಮುಂದಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದ ಹೈಕೋರ್ಟ್.
  • ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮಹಿಳೆಯ ರಕ್ಷಣೆಗೆ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆಗೆ ತರಾಟೆ ತೆಗೆದುಕೊಂಡಿತ್ತು. ಜೊತೆಗೆ, ಮಹಿಳೆಗೆ ಎರಡು ಎಕರೆ ಜಮೀನು ಮತ್ತು ಸರ್ಕಾರದಿಂದ ಚಿಕಿತ್ಸೆ ಮತ್ತು ಪರಿಹಾರ ಒದಗಿಸುವಂತೆ ಮಹತ್ವದ ತೀರ್ಪು ಪ್ರಕಟಿಸಿತ್ತು.
  • ಆಸ್ತಿ ಮಾರಾಟ ಸೇರಿದಂತೆ ಇತರೆ ದಾಖಲೆಗಳ ನೋಂದಣಿಗೂ ಮುನ್ನ ಆ ದಾಖಲೆಗಳನ್ನು ಸಲ್ಲಿಸುವ ವ್ಯಕ್ತಿಯ ಆಧಾರ್ ನೈಜತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ.
  • ಬಿಡಿಎ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ಅಸಮಾಧಾನ. ಮಾರುವೇಷದಲ್ಲಿ ಕಚೇರಿಗೆ ಹೋಗಿ ಪರಿಶೀಲಿಸುವಂತೆ ಬಿಡಿಎ ಆಯುಕ್ತರಿಗೆ ಸಲಹೆ. ಸುಗ್ರೀವಾಜ್ಞೆ ಮೂಲಕ ಬಿಡಿಎ ಮುಚ್ಚುವುದೇ ಲೇಸು ಎಂದು ಮೌಖಿಕ ಅಭಿಪ್ರಾಯ.
  • ಕಾನೂನುಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟು ಹಂಚಿಕೆ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ ವಿಧಿಸಿದ್ದ ಹೈಕೋರ್ಟ್​.
  • ಬಾಲ್ಯ ವಿವಾಹದಿಂದಾಗುವ ಪರಿಣಾಮ ಅರಿಯದೆ ಪರಸ್ಪರ ಒಮ್ಮತದಿಂದ ಹದಿಹರೆಯದವರು ಲೈಂಗಿಕ ಸಂಭೋಗ ನಡೆಸುವುದರಿಂದ ಅದನ್ನು ಅಪರಾಧೀಕರಿಸುವುದಕ್ಕೆ ಸಾಧ್ಯವಿಲ್ಲ. ಅಪ್ರಾಪ್ತೆಯಾಗಿರುವ ಪತ್ನಿ ಮತ್ತು ಆಕೆಯ ಮಗುವಿಗೆ ಆರೋಪಿತರೇ ಜೀವನಾಧಾರವಾಗಿದ್ದ ಹಿನ್ನೆಲೆಯಲ್ಲಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ರದ್ದುಪಡಿಸಿ ಆದೇಶಿಸಿದ್ದ ಹೈಕೋರ್ಟ್.
  • ಮೃತಪಟ್ಟ ತಂದೆಯ ನೌಕರಿಯನ್ನು ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ನೀಡಲಾಗದು ಎಂದಿದ್ದ ಹೈಕೋರ್ಟ್.
  • ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಮಹತ್ವದ ಆದೇಶ ನೀಡಿದ್ದ ಹೈಕೋರ್ಟ್, ದ್ವಿಸದಸ್ಯ ಪೀಠದಿಂದ ಅನುಮತಿ, ಬಳಿಕ ಸುಪ್ರೀಂಕೋರ್ಟ್‌ನಿಂದ ಅನುಮತಿ ರದ್ದು.
  • ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾಶರಣರ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣ ಸಂಬಂಧದ ಆರೋಪವನ್ನು ಮರು ನಿಗದಿ ಮಾಡಲು ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.
  • ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸೇವೆ (ಬಡ್ತಿ, ಸೇವಾ ಹಿರಿತನ)ಗೆ ಸಂಬಂಧಿಸಿದ ನಿಯಮಗಳ ಅಡಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸುವ ಅಧಿಕಾರಗಳಿಲ್ಲ ಎಂದು ಹೈಕೋರ್ಟ್ ಆದೇಶ.
  • ಕ್ರೂರ, ಅಪಾಯಕಾರಿ ಶ್ವಾನ ತಳಿ ಸಂತಾನೋತ್ಪತ್ತಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದ್ದ ಹೈಕೋರ್ಟ್.
  • ಮೃತ ಸೈನಿಕನ ವಿಚ್ಛೇದಿತ ಪತ್ನಿಗೆ ಎಲ್ಲ ರೀತಿಯ ವಿಧವಾ ಸೌಲಭ್ಯಗಳನ್ನು ಕಲ್ಪಿಸಲು ಸೇನಾ ಪ್ರಾಧಿಕಾರಕ್ಕೆ ಸೂಚಿಸಿದ್ದ ಹೈಕೋರ್ಟ್.
  • ಹೈಕೋರ್ಟ್ ನ್ಯಾಯಪೀಠದ ಮುಂದೆ ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು.
  • ಶ್ರವಣದೋಷವುಳ್ಳ ವಕೀಲರಿಗೆ ನೆರವಾಗಲು ಅರ್ಥ ನಿರೂಪಣಾಕಾರರ ನೇಮಕ ಮಾಡಿ ಪ್ರಕರಣದ ವಿಚಾರಣೆ ನಡೆಸಿ ಇತ್ಯರ್ಥಪಡಿಸಿದ ಹೈಕೋರ್ಟ್.
  • ನ್ಯಾಯಾಲಯದ ಆದೇಶ ಪಾಲಿಸದ ಸರ್ಕಾರದ ಪ್ರಾಧಿಕಾರಗಳು ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು ಸರ್ಕಾರದ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್
  • ಸರ್ಕಾರಿ ಕೋಟಾದಡಿ ಪದವಿ ಪಡೆದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ ಎಂದು ಹೈಕೋರ್ಟ್ ಆದೇಶ.
  • ವಿದ್ಯುತ್ ಸ್ಪರ್ಶದಿಂದ ಆನೆ ಸೇರಿ ವನ್ಯಜೀವಿಗಳ ಸಾವು ಕುರಿತಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ಸರ್ಕಾರದಿಂದ ಮಾಹಿತಿ ನೀಡಲು ಸೂಚನೆ ನೀಡಿತ್ತು.
  • ವಿದೇಶಿಯರಿಗೆ ವೈದ್ಯಕೀಯ ವೀಸಾ ನೀಡುವುದಕ್ಕೂ ಮುನ್ನ ಅವರ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವಂತೆ ಪಾಸ್‌ಪೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್
  • 2020ರಲ್ಲಿ ನಟಿ ಸಂಜನಾ ಗಲ್ರಾಣಿ ಮತ್ತಿತರರ ವಿರುದ್ಧ ದಾಖಲಾಗಿದ್ದ ಮಾದಕ ದ್ರವ್ಯ ಸೇವನೆ ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದ ಹೈಕೋರ್ಟ್
  • ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಸಂತ್ರಸ್ತೆಯರನ್ನು ಅಭಿಯೋಜನೆಗೆ ಗುರಿಪಡಿಸಲಾಗದು ಎಂದು ಆದೇಶಿಸಿದ್ದ ಹೈಕೋರ್ಟ್
  • ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿ ಶ್ರೀಕಿ ಸೇರಿ ಇಬ್ಬರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ(ಕೋಕಾ) ವಿಧಿಸಿದ್ದ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್
  • ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಒಂದು ಹಕ್ಕು, ಈ ವೇಳೆ ಸಣ್ಣ ಹಾನಿಯಾಗುವುದು ಸಾಮಾನ್ಯ ಎಂದು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿರುವ ಹೈಕೋರ್ಟ್
  • ವಿದ್ಯಾರ್ಥಿಗೆ ಆತ್ಮಹತ್ಯೆ ಪ್ರಚೋದನೆ ನೀಡುವ ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಮಕ್ಕಳ ಜೀವಕ್ಕೆ ಹಾನಿಯಾಗುವ ಕೃತ್ಯಗಳಿಗೆ ಮುಂದಾಗಬಾರದು ಎಂದು ಶಿಕ್ಷಕರಿಗೆ ಸಲಹೆ ನೀಡಿದ್ದ ಹೈಕೋರ್ಟ್
  • ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ ಕುರಿತಂತೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸರ್ಕಾರದ ಪ್ರತಿಕ್ರಿಯೆ ಕೇಳಿದ್ದ ಹೈಕೋರ್ಟ್.
  • ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್
  • ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್.
  • ವಿದ್ಯಾರ್ಥಿಯೊಂದಿಗೆ ಅಸಹಜ ಫೋಟೋ ಕ್ಲಿಕ್ಕಿಸಿಕೊಂಡಿದ್ದ ಮುಖ್ಯ ಶಿಕ್ಷಕಿ ನಡೆಗೆ ಹೈಕೋರ್ಟ್ ಅಸಮಾಧಾನ.
  • ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಮಂಜೂರಾದ ಜಮೀನನ್ನು ಜಿಪಿಎ ಮಾಡಿಕೊಂಡು ಸೊಸೈಟಿಯಿಂದ ಪಡೆದ ಸಾಲಕ್ಕೆ ಜಪ್ತಿ ಮಾಡಲಾಗದು ಎಂದು ಆದೇಶಿಸಿದ್ದ ಹೈಕೋರ್ಟ್
  • ನಿವೃತ್ತಿ ನಂತರ ಸೇವಾ ಅವಧಿ ವಿಸ್ತರಣೆಗಾಗಿ ಜನ್ಮ ದಿನ ಬದಲಾವಣೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ.
  • ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಮಾಡುವುದು ಸಾಮರಸ್ಯ ಉತ್ತೇಜಿಸುವ ಸಂಕೇತವಾಗಿರಲಿದೆ ಎಂದು ಹೈಕೋರ್ಟ್ ಆದೇಶ.
  • ಅರ್ಹತೆ ಇದ್ದರೂ ವೈದ್ಯಕೀಯ ಸೀಟು ನೀಡದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಅಂತಾರಾಷ್ಟ್ರೀಯ ಚೆಸ್ ಪಟುವಿಗೆ ₹10 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ.
  • ಅಪಘಾತ ಸಂಭವಿಸಿದಾಗ ವಾಹನಕ್ಕೆ ಪರವಾನಗಿ, ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಕಂಪನಿ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶ.
  • ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಜಾರಿ ಬಳಿಕ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್​​ಪಿಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗದು ಎಂದು ತಿಳಿಸಿದ್ದ ಹೈಕೋರ್ಟ್.
  • ಅಪರಾಧದಲ್ಲಿ ಭಾಗಿಯಾಗಿರುವ ಪತಿಯೊಂದಿಗೆ ನೆಲೆಸಿರುವ ಕಾರಣ ಪತ್ನಿಯನ್ನೂ ಸಹ ಆರೋಪಿಯನ್ನಾಗಿ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ಆದೇಶ.
  • ವಾಲ್ಮೀಕಿ ನಿಗಮ ಹಗರಣವನ್ನು ಕೇಂದ್ರ ತನಿಖಾ ದಳದ (ಸಿಬಿಐ) ತನಿಖೆಗೆ ಒಪ್ಪಿಸಬೇಕು ಎಂದು ಯೂನಿಯನ್ ಬ್ಯಾಂಕ್ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.
  • ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕರ ವಿರುದ್ಧದ ದಾಖಲಾದ ಸುಳ್ಳು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್.
  • ಮದರಸಾದಲ್ಲಿ ಶಿಕ್ಷಕರಿಂದ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕುರಿತು ಪ್ರಕರಣ ದಾಖಲಿಸದ ಮದರಸಾ ಸಂಸ್ಥಾಪಕನ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ.
  • ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್.
  • ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ (ಎನ್‌ಎಸ್‌ಎಲ್​​ಯು) ಯಲ್ಲಿ ತೃತೀಯ ಲಿಂಗಿಗಳಿಗೆ ಶೇ.0.5ರಷ್ಟು ಮೀಸಲಾತಿ ನೀಡುವಂತೆ ಹೈಕೋರ್ಟ್ ಸೂಚನೆ.

ಇದನ್ನೂ ಓದಿ: ಬೇಲೇಕೇರಿ ಪ್ರಕರಣ: ಸತೀಶ್ ಸೈಲ್ ಅರ್ಜಿ ಇತ್ಯರ್ಥವಾಗುವ ತನಕ ಕಾರವಾರ ಉಪಚುನಾವಣೆಗೆ ಹೈಕೋರ್ಟ್ ನಿರ್ಬಂಧ

ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲಿದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.