ETV Bharat / state

ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್​​ ಸುತ್ತಮುತ್ತ ಬಿಗಿ ಭದ್ರತೆ, ಸಂಚಾರ ಮಾರ್ಗ ಬದಲಾವಣೆ - TRAFFIC CHANGES FOR REPUBLIC DAY

ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಬಂದೋಬಸ್ತ್​ ಹಾಗೂ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ. ಸಂಚಾರ ಬದಲಾವಣೆ ಮಾಹಿತಿ ಇಲ್ಲಿದೆ.

REPUBLIC DAY 2025  BENGALURU  MANEKSHAW PARADE GROUND  ಗಣರಾಜ್ಯೋತ್ಸವ
ಮಾಣಿಕ್ ಷಾ ಪರೇಡ್ ಗ್ರೌಂಡ್ (ETV Bharat)
author img

By ETV Bharat Karnataka Team

Published : Jan 24, 2025, 11:43 AM IST

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಕಬ್ಬನ್​ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಭಾನುವಾರ ವಿಶೇಷ ಕವಾಯತು ಹಾಗೂ ರಾಜ್ಯಪಾಲರಿಂದ ಧ್ವಜಾರೋಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಬಂದೋಬಸ್ತ್​ ಹಾಗೂ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.

ಎಲ್ಲಿಲ್ಲಿ ಸಂಚಾರ ನಿರ್ಬಂಧ: ಭಾನುವಾರ ಬೆಳಿಗ್ಗೆ 8:30ರಿಂದ 10-30ರವರೆಗೆ ಕಬ್ಬನ್​ ರಸ್ತೆಯ ಬಿ.ಆರ್​.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿ ರಸ್ತೆಯಲ್ಲಿ ಎಡತಿರುವು ಪಡೆದು ಮೈನ್‌ ಗಾರ್ಡ್ ರಸ್ತೆ- ಅಲೀ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕೆನ್ಸನ್‌ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್‌ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದು.

ಕಬ್ಬನ್‌ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ವೆಬ್‌ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್ - ಕಾವೇರಿ ಎಂಪೋರಿಯಂ - ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

ಅನಿಲ್​ ಕುಂಬ್ಳೆ ವೃತ್ತದಿಂದ ಕಬ್ಬನ್​ ರಸ್ತೆ ಕಡೆಗೆ ಬರುವ ವಾಹನಗಳು ಸೆಂಟ್ರಲ್​ ಸ್ಟ್ರೀಟ್‌ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆ-ಸಫೀನಾ ಪ್ಲಾಜಾ - ಎಡ ತಿರುವು ಪಡೆದು ಮೈನ್‌ಗಾರ್ಡ್‌ ರಸ್ತೆ - ಆಲಿ ಸರ್ಕಲ್ - ಡಿಸ್ಪೆನ್ಸರಿ ರಸ್ತೆ - ಕಾಮರಾಜ ರಸ್ತೆ ಮತ್ತು ಡಿಕೆನ್ಸನ್‌ ರಸ್ತೆ ಜಂಕ್ಷನ್ - ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ - ಕಬ್ಬನ್‌ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್‌ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಮಾಣಿಕ್​ ಷಾ ಪರೇಡ್ ಮೈದಾನಕ್ಕೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರಿಗೆ ಭದ್ರತಾ ದೃಷ್ಟಿಯಿಂದ ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮೆರಾ, ಛತ್ರಿ ಮುಂತಾದ ವಸ್ತುಗಳನ್ನು ತರದಿರಲು ಕೋರಲಾಗಿದೆ.

ವಾಹನ ನಿಲುಗಡೆ ನಿಷೇಧಿತ ರಸ್ತೆಗಳು:

  • ಸೆಂಟ್ರಲ್​ ಸ್ಟ್ರೀಟ್‌ನ, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
  • ಕಬ್ಬನ್‌ ರಸ್ತೆಯ ಸಿ.ಟಿ.ಓ ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್‌ ರಸ್ತೆ ಜಂಕ್ಷನ್‌ವರೆಗೆ
  • ಎಂ.ಜಿ. ರಸ್ತೆಯ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ

ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆಯಿರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವ, ಅಧಿವೇಶನದಲ್ಲಿ ಭಾಗಿಯಾಗಲು ಅವಕಾಶ ಕೋರಿದ ಜೈಲಲ್ಲಿರುವ ಸಂಸದ ಅಮೃತ್​ಪಾಲ್​ ಸಿಂಗ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.