ETV Bharat / state

ಬೆಂಗಳೂರಲ್ಲಿ ಪಾನಮತ್ತ ಚಾಲಕರ ವಿರುದ್ಧ ಕಾರ್ಯಾಚರಣೆ: ತಡರಾತ್ರಿ 167 ಪ್ರಕರಣ ದಾಖಲು - Drunk and Drive - DRUNK AND DRIVE

ನಗರದಾದ್ಯಂತ ಡ್ರಿಂಕ್ & ಡ್ರೈವ್ ತಪಾಸಣೆ ಆರಂಭಿಸಿರುವ ಬೆಂಗಳೂರು ಸಂಚಾರಿ ಪೊಲೀಸರು, ನಗರದ ಪ್ರಮುಖ ರಸ್ತೆ ಜಂಕ್ಷನ್​ಗಳಲ್ಲಿ ತಪಾಸಣೆ ಆರಂಭಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (IANS Photos)
author img

By ETV Bharat Karnataka Team

Published : Aug 23, 2024, 10:03 AM IST

Updated : Aug 23, 2024, 11:46 AM IST

ಬೆಂಗಳೂರು: ನಗರದಾದ್ಯಂತ ತಡರಾತ್ರಿ ಒಟ್ಟು 8,550 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿರುವ ಸಂಚಾರಿ ಪೊಲೀಸರು ಒಟ್ಟು 167 ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಾನಮತ್ತ ವಾಹನ ಚಾಲಕರಿಂದ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆನಲೆಯಲ್ಲಿ ನಗರದಾದ್ಯಂತ ಡ್ರಿಂಕ್ & ಡ್ರೈವ್ ತಪಾಸಣೆ ಆರಂಭಿಸಿರುವ ಬೆಂಗಳೂರು ಸಂಚಾರಿ ಪೊಲೀಸರು, ನಗರದ ಪ್ರಮುಖ ರಸ್ತೆ ಜಂಕ್ಷನ್​ಗಳಲ್ಲಿ ತಪಾಸಣೆ ಆರಂಭಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗುವ ಜಂಕ್ಷನ್​ಗಳಲ್ಲಿ ಪಿಎಸ್ಐಗಳ ನೇತೃತ್ವದ ತಂಡದಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಪಾನಮತ್ತರಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿರುವುದಾಗಿ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದರೆ ಕಠಿಣ ಕ್ರಮ; 72 FIR ದಾಖಲಿಸಿದ ಪೊಲೀಸರು - Drunk Driving Cases

Last Updated : Aug 23, 2024, 11:46 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.