ETV Bharat / state

ಚಾರಣಿಗರೇ ಗಮನಿಸಿ: ಒಂದೇ ವೆಬ್​ ಸೈಟ್​ನಲ್ಲಿ ರಾಜ್ಯದ ಎಲ್ಲ ಟ್ರೆಕ್ಕಿಂಗ್​ ಟಿಕೆಟ್ ಬುಕ್ಕಿಂಗ್​ - ಸಚಿವ ಈಶ್ವರ ಖಂಡ್ರೆ - Trekking Ticket Booking

author img

By ETV Bharat Karnataka Team

Published : Jul 2, 2024, 8:40 PM IST

ರಾಜ್ಯಾದ್ಯಂತ ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್​​ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಸಚಿವ ಈಶ್ವರ ಖಂಡ್ರೆ
ಸಚಿವ ಈಶ್ವರ ಖಂಡ್ರೆ (ETV bharat)

ಸಚಿವ ಈಶ್ವರ ಖಂಡ್ರೆ (ETV Bharat)

ಮಂಗಳೂರು: ರಾಜ್ಯದ ವಿವಿಧ ಚಾರಣಗಳಿಗೆ ಜುಲೈ 3ನೇ ವಾರದಲ್ಲಿ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನ ಪಡೀಲ್​​ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರ ಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾಗಿತ್ತು. ಆ ಬಳಿಕ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್​ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಸಿಲುಕುವ ಸಂಭವ ಹೆಚ್ಚಾಗಿರುತ್ತದೆ. ಅಲ್ಲದೇ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ. ಹೀಗಾಗಿ ಆಗಸ್ಟ್​ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ಮಾಹಿತಿ ನೀಡಿದರು.

ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್​​ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್​​ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಎತ್ತಿನಭುಜ ಸೇರಿದಂತೆ ಕೆಲವು ಕಡೆಗಳಲ್ಲಿ ಆನ್​​ಲೈನ್ ಟಿಕೆಟ್ ವ್ಯವಸ್ಥೆ ಇರುವುದಿಲ್ಲ. ಈ ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್​​ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಚಾರಣಿಗರ ಸಂಖ್ಯೆಗೆ ಮಿತಿ: ಕೆಲವು ಪ್ರವಾಸಿ ಸಂಸ್ಥೆಗಳು ಚಾರಣ ಪಥಗಳ ಬಗ್ಗೆ ಯುವಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು, ಇದರ ಪರಿಣಾಮವಾಗಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ಪರಿಸರ ಉಳಿಸಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದು ಅವರು ಹೇಳಿದರು. ಪ್ರತಿಯೊಂದು ಚಾರಣ ಪಥದಲ್ಲೂ ಅದರ ವಿಸ್ತಾರ, ಅಲ್ಲಿರುವ ಗೈಡ್ ಮತ್ತು ಇತರ ಮೂಲ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು. ಯಾವುದೇ ಚಾರಣಪಥದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಚಾರಣಿಗರಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಒಂದೇ ವೆಬ್ ಸೈಟ್​​ನಲ್ಲಿ ವಿವಿಧ ಚಾರಣ ಪಥಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಇರುವ ಕಾರಣ, ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರುತ್ತದೆ ಎಂದು ಅವರು ವಿವರಿಸಿದರು. ಒಂದೊಮ್ಮೆ ಹೆಚ್ಚಿನ ಸಂಖ್ಯೆಯ ಚಾರಣಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದು ದೂರು ಬಂದರೆ, ಈ ಬಗ್ಗೆ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

150 ಹೆಕ್ಟೇರಲ್ಲಿ ಕಾಂಡ್ಲಾವನ: ಅರಣ್ಯ ಇಲಾಖೆಯ ಮಂಗಳೂರು ವೃತ್ತ (ನಾಲ್ಕು ಜಿಲ್ಲೆಗಳ ವ್ಯಾಪ್ತಿ)ವನ್ನು 'ಅರಣ್ಯ ಜಮೀನು ಒತ್ತುವರಿ ಮುಕ್ತ' ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಂಗಳೂರು ವೃತ್ತದಲ್ಲಿ 150 ಹೆಕ್ಟೇರ್ ಪ್ರದೇಶದಲ್ಲಿ ಕಾಂಡ್ಲಾವನಗಳನ್ನು ನೆಡಲು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ 10 ಲಕ್ಷ ಕಾಂಡ್ಲಾ ಗಿಡಗಳನ್ನು ನೆಡಲಾಗುವುದು ಎಂದರು.

ಇದನ್ನೂ ಓದಿ: ಆಧುನಿಕ ಯುಗದಲ್ಲೂ ಈ ಗ್ರಾಮಗಳಿಗೆ ಅಡಕೆ ಮರದ ಸೇತುವೆಯೇ ಗತಿ; ಎಲ್ಲಿ ಗೊತ್ತಾ!? - Nut Tree Bridge

ರಾಜ್ಯಾದ್ಯಂತ ಈ ವರ್ಷ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಗುರಿ ಹಾಕಿಕೊಳ್ಳಲಾಗಿದೆ. ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿತ್ತು. ಈ ಎಲ್ಲ ಗಿಡಗಳ ನಿರ್ವಹಣೆ ಆಗಬೇಕಿದೆ. ಅದಕ್ಕಾಗಿ ಹೆಚ್ಚುವರಿ 100 ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಮಾನವ - ಪ್ರಾಣಿ ಸಂಘರ್ಷ ತಡೆ: ಮಾನವ-ಪ್ರಾಣಿ ಸಂಘರ್ಷದಿಂದ ಕಳೆದ ವರ್ಷ ರಾಜ್ಯದಲ್ಲಿ 64 ಸಾವು ಸಂಭವಿಸಿವೆ. ಇದನ್ನು ತಪ್ಪಿಸಲು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಏರ್ಪಡಿಸಿ, ವಿವಿಧ ದೇಶಗಳ ತಜ್ಞರ ಸಲಹೆಗಳನ್ನು ಪಡೆದು ಮಾನವ - ಪ್ರಾಣಿ ಸಂಘರ್ಷ ತಡೆಗೆ ಸ್ಪಷ್ಟ ನಿಲುವು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಕಳೆದ ವರ್ಷ ರಾಜ್ಯದ 5 ಪಟ್ಟಣಗಳನ್ನು ಏಕಬಳಕೆ ಪ್ಲಾಸ್ಟಿಕ್‌ ಮುಕ್ತ ಮಾಡುವ ಘೋಷಣೆ ಮಾಡಲಾಗಿತ್ತು. ಅದರಂತೆ ಬಹಳಷ್ಟು ಕ್ರಮ ಕೈಗೊಳ್ಳಲಾಗಿದೆ. ಆದರೂ ಪ್ಲಾಸ್ಟಿಕ್‌ ಮುಕ್ತ ಆಗಿಲ್ಲ. ಈ ಬಗ್ಗೆ ಜನಜಾಗೃತಿ ಬೇಕಿದೆ. ಸಿಬ್ಬಂದಿ ಕೊರತೆ ನೀಗಿಸಿ ಯುದ್ಧೋಪಾದಿಯಲ್ಲಿ ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ನನಗೆ ಗೊತ್ತಿಲ್ಲ. ಸದ್ಯಕ್ಕೆ ಕೆಪಿಸಿಸಿ ಹುದ್ದೆ ಖಾಲಿ ಇಲ್ಲ ಎಂದು ಸಚಿವರು ಉತ್ತರಿಸಿದರು. ಪಕ್ಷ ನನಗೆ ಅರಣ್ಯ ಹಾಗೂ ಪರಿಸರ ಇಲಾಖೆಯ ಸಚಿವನಾಗಿ ಜವಾಬ್ದಾರಿ ನೀಡಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇನೆ. ರಾಜ್ಯದಲ್ಲಿ ಹಸಿರು ಹೊದಿಕೆ ಹೆಚ್ಚು‌ಮಾಡಬೇಕು. ಅರಣ್ಯ ಇಲಾಖೆಯಲ್ಲಿ ಸುಧಾರಣೆ ತರಬೇಕು. ಪ್ರಕೃತಿ, ಪರಿಸರ, ವನ್ಯಜೀವಿಗಳ ಸಂರಕ್ಷಣೆ ಮಾಡಬೇಕು ಎಂಬ ಉದ್ದೇಶವಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ರೈತರ ಗಮನಕ್ಕೆ: ಈ ದಿನದೊಳಗೆ ನಿಮ್ಮ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಿ - Information For Farmers

ETV Bharat Logo

Copyright © 2024 Ushodaya Enterprises Pvt. Ltd., All Rights Reserved.