ETV Bharat / state

ಯಡಿಯೂರಪ್ಪ ವಿರುದ್ಧ ಸಂಜ್ಞೆ ಪರಿಗಣಿಸುವಲ್ಲಿ ವಿಚಾರಣಾ ನ್ಯಾಯಾಲಯ ವಿವೇಚನೆ ಬಳಸಿಲ್ಲ : ಹೈಕೋರ್ಟ್ - HIGH COURT

ಬಿಎಸ್​ವೈ ವಿರುದ್ಧ ಸಂಜ್ಞೆ ಪರಿಗಣಿಸುವಲ್ಲಿ ವಿಚಾರಣಾ ನ್ಯಾಯಾಲಯ ವಿವೇಚನೆ ಬಳಸಿಲ್ಲ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

High court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : 23 hours ago

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂಜ್ಞೆಯನ್ನು ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ವಿವೇಚನೆ ಬಳಸಲಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿಯ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ, ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ಅರುಣ ವೈ, ಎಂ. ರುದ್ರೇಶ ಮರಳುಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.

ವಿಚಾರಣೆ ವೇಳೆ ಯಡಿಯೂರಪ್ಪ ಪರವಾಗಿ ವಾದ ಮುಂದುವರಿಸಿದ ವಕೀಲರು, ಸತ್ಯ ಬಯಲು ಮಾಡಲು ತನಿಖೆ ನಡೆಸಲಾಗುತ್ತದೆ. ತನಿಖೆಯು ಪಕ್ಷಪಾತಿಯಾಗಿರಬಾರದು. ನ್ಯಾಯಯುತ ಮತ್ತು ಕಾನೂನಿನ ಅನ್ವಯ ನಡೆಯಬೇಕು ಎಂದರು.

ಅಲ್ಲದೆ, ಸಂಜ್ಞೆ ಪರಿಗಣಿಸುವ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯವು ತನಿಖಾಧಿಕಾರಿಯ ಅಭಿಪ್ರಾಯ ಒಪ್ಪಲಾಗದು. ಅಂತೆಯೇ ಪೊಲೀಸರು ಬಿ ವರದಿ ಸಲ್ಲಿಸಿದ ಪ್ರಕರಣಕ್ಕೂ ಇದು ಅನ್ವಯವಾಗುತ್ತದೆ. ತನಿಖಾಧಿಕಾರಿ ಸಾಕ್ಷಿ ಸಂಗ್ರಹಿಸಲಿದ್ದು, ಅವರು ಸಾಕ್ಷಿಯನ್ನು ಪ್ರತ್ಯೇಕಿಸಲಾಗದು. ಸಾಕ್ಷಿಯು ಒಪ್ಪಿತವೇ, ಇಲ್ಲವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ ಎಂದು ಪೀಠಕ್ಕೆ ಹೇಳಿದರು.

ಪ್ರಕರಣ ಸಂಬಂಧ ದೂರು ದಾಖಲಿಸುವುದಕ್ಕೂ ಮುನ್ನ ದೂರುದಾರೆ (ಸಂತ್ರಸ್ತೆಯ ತಾಯಿ; ಈಗ ಸಾವನ್ನಪ್ಪಿದ್ದಾರೆ) ಮತ್ತು ಸಂತ್ರಸ್ತೆಯು ಹಲವು ಬಾರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ ಎಂದರು.

ಈ ವೇಳೆ ಪೀಠ ವಕೀಲರನ್ನುದ್ದೇಶಿಸಿ, ನೀವು ಉಲ್ಲೇಖಿಸುತ್ತಿರುವ ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸಬೇಕು ಎಂದಾದರೆ ಸಂತ್ರಸ್ತೆಯ ಹೇಳಿಕೆಯನ್ನೂ ಪರಿಗಣಿಸಬೇಕಾಗುತ್ತದೆ. ಇಡೀ ಘಟನೆಯನ್ನು ಸಂತ್ರಸ್ತೆ ವಿವರಿಸಿದ್ದಾರೆ. ಇದು ಹೇಳಿಕೆ ವರ್ಸಸ್ ಹೇಳಿಕೆ ಆಗುವುದಿಲ್ಲವೇ?. ವಿಚಾರಣೆ ನಡೆಯುವುದು ಸೂಕ್ತವಾಗಿದೆ ಎಂದು ಹೇಳಿತು.

ಇದಕ್ಕೆ ವಕೀಲರು, ವಾದ ಮಂಡನೆಗೆ ಇನ್ನೂ ಒಂದು ತಾಸು ಕಾಲಾವಕಾಶ ಕೋರಿದ ಹಿನ್ನೆಲೆ ನ್ಯಾಯಾಲಯವು ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿತು.

ಇದನ್ನೂ ಓದಿ : ವೈವಾಹಿಕ ಸಂಬಂಧ ಕೊನೆಗಾಣಿಸುವ ಸಮ್ಮತಿಯಿಂದ ಅರ್ಜಿ ಸಲ್ಲಿಸಿ ಕೋರ್ಟ್​ಗೆ ಗೈರಾದ ಮಹಿಳೆ; ಪತಿಗೆ ವಿಚ್ಛೇದನ ಮಂಜೂರು - HIGH COURT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.