ಬೆಂಗಳೂರು : ನಗರದ ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲಕ ರಹಿತ ರೈಲಿನ ಪ್ರಾಯೋಗಿಕ ಸಂಚಾರವನ್ನು ಗುರುವಾರ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲಕ ರಹಿತ ರೈಲಿನ ಜೋಡಣೆಯು ಪೂರ್ಣಗೊಂಡಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ 37 ವಿವಿಧ ಪರೀಕ್ಷೆೆಗಳನ್ನು ನಡೆಸಲಾಗುವುದು. ಆ ಬಳಿಕ ಪರೀಕ್ಷಾರ್ಥ ಸಂಚಾರವನ್ನು ಪೂರ್ಣವಾಗಿ ಆರಂಭಿಸಲಾಗುವುದು. ವರ್ಷಾಂತ್ಯಕ್ಕೆೆ ಹಳದಿ ಮಾರ್ಗದಲ್ಲಿ ಚಾಲಕರಹಿತ ರೈಲಿನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19.5 ಕಿಮೀ ಉದ್ದದ ನಮ್ಮ ಮೆಟ್ರೋ ಹಳದಿ ಮಾರ್ಗವು ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ನಡುವೆ ಸಂಪರ್ಕ ಕಲ್ಪಿಸುತ್ತದೆ. ಪ್ರಮುಖ ಸ್ಥಳಗಳಾದ ಸಿಲ್ಕ್ ಬೋರ್ಡ್ ಜಂಕ್ಷನ್, ಎಲೆಕ್ಟ್ರಾನಿಕ್ ಸಿಟಿ ಮತ್ತು ಜಯದೇವ ಆಸ್ಪತ್ರೆೆ ಮೂಲಕ ಹಾದು ಹೋಗುತ್ತದೆ. ಸದ್ಯ ಬೊಮ್ಮಸಂದ್ರ ಮತ್ತು ಸಿಲ್ಕ್ ಬೋರ್ಡ್ ಮಧ್ಯೆೆ ಮಾತ್ರ ಹಳದಿ ಮಾರ್ಗದ ಮೆಟ್ರೋ ಟ್ರಯಲ್ ರನ್ ನಡೆಸಲಾಗುತ್ತಿದೆ. ಏಪ್ರಿಲ್ ಮಧ್ಯ ಭಾಗದಲ್ಲಿ ಸಂಪೂರ್ಣ ಮಾರ್ಗದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಚಾಲಕ ರಹಿತ ಹಳದಿ ಮೆಟ್ರೋ ಮಾರ್ಗದ ಸಂಚಾರಕ್ಕೆ ಮೊದಲು ನಡೆಯಲಿವೆ 37 ಮಾದರಿ ಪರೀಕ್ಷೆಗಳು