ETV Bharat / state

ಟ್ರಕ್​ ಟರ್ಮಿನಲ್​ ನಿಗಮದ ಹಗರಣ: ಮಾಜಿ ಎಂಎಲ್​ಸಿ ಡಿ.ಎಸ್​.ವೀರಯ್ಯಗೆ ನ್ಯಾಯಾಂಗ ಬಂಧನ - Truck Terminal Case

ಡಿ ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಯಮಿತದಲ್ಲಿನ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿಯ ಮಾಜಿ ಎಂಎಲ್​ಸಿ ಡಿ.ಎಸ್.ವೀರಯ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಮಾಜಿ ಎಂಎಲ್​ಸಿ ಡಿ.ಎಸ್​.ವೀರಯ್ಯ
ಮಾಜಿ ಎಂಎಲ್​ಸಿ ಡಿ.ಎಸ್​.ವೀರಯ್ಯ (ETV Bharat)
author img

By ETV Bharat Karnataka Team

Published : Jul 16, 2024, 7:50 PM IST

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದ ಡಿ ದೇವರಾಜ ಅರಸ್ ಟ್ರಕ್ ಟರ್ಮಿನಲ್ (ಡಿಡಿಯುಟಿಟಿಎಲ್) ನಿಯಮಿತದಲ್ಲಿನ 47 ಕೋಟಿ ಹಗರಣದಲ್ಲಿ ಆರೋಪಿಯಾಗಿರುವ ನಿಯಮಿತದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಅವರನ್ನು ಜುಲೈ 30ರವರೆಗೂ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶಿಸಲಾಗಿದೆ.

ಡಿ.ಎಸ್​.ವೀರಯ್ಯ ಅವರ ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ಮಾಹಿತಿ ಪಡೆದ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

2021-23ರ ಅವಧಿಯಲ್ಲಿ ಡಿಡಿಯುಟಿಟಿಎಲ್ ಹಣಕಾಸು ದುರ್ಬಳಕೆ ಹಗರಣ ನಡೆದಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಉಪನಿರ್ದೇಶಕ ಎಸ್ ಶಂಕರಪ್ಪ ಅವರನ್ನು ಮೊದಲಿಗೆ ಬಂಧಿಸಲಾಗಿತ್ತು. ಶಂಕರಪ್ಪ ಅವರು ಆಗ ಡಿಡಿಯುಟಿಟಿಎಲ್​ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಜತೆಗೆ, ಡಿಡಿಯುಟಿಟಿಎಲ್​ನ ಮಾಜಿ ಅಧ್ಯಕ್ಷ ವೀರಯ್ಯ ಅವರನ್ನು ಸಿಐಡಿ ಬಂಧಿಸಿತ್ತು.

ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕೆಲಸಗಳನ್ನು ಟೆಂಡರ್ ಕರೆಯದೇ ಗುತ್ತಿಗೆ ನೀಡಬಹುದು ಎನ್ನುವ ರೀತಿಯಲ್ಲಿ ನಿಯಮಿತದ ದಾಖಲೆಗಳನ್ನು ತಿರುಚಲಾಗಿದೆ ಎಂಬುದು ಆರೋಪವಾಗಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯಿದೆ ಅಡಿ ಸರ್ಕಾರದ ಯಾವುದೇ ನಿಗಮವು ಐದು ಲಕ್ಷಕ್ಕೂ ಹೆಚ್ಚು ಮೌಲ್ಯದ ಗುತ್ತಿಗೆ ಕೆಲಸವನ್ನು ಟೆಂಡರ್ ಮೂಲಕ ನಡೆಸಬೇಕು ಎಂದಿದೆ. ಇದಕ್ಕೆ ವಿರುದ್ಧವಾಗಿ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು 765 ಕಡತಗಳನ್ನು ಜಪ್ತಿ ಮಾಡಿದ್ದು, 380 ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ 450 ಪುಟಗಳ ದತ್ತಾಂಶವನ್ನು ವಿಶ್ಲೇಷಿಸಿದೆ ಎನ್ನಲಾಗಿದೆ. ವೀರಯ್ಯ ಅವರು 2008 ರಿಂದ 2018ರವರೆಗೆ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಡಿಡಿಯುಟಿಟಿಎಲ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಸಿ ಎನ್ ಶಿವಪ್ರಕಾಶ್ ಅವರು ಕಡತಗಳನ್ನು ಪರಿಶೀಲಿಸಿದಾಗ ಹಗರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ ಏಳು ಜನರ ದಾರುಣ ಸಾವು, ಮುಂದುವರಿದ ಕಾರ್ಯಾಚರಣೆ - hill collapsed

ETV Bharat Logo

Copyright © 2024 Ushodaya Enterprises Pvt. Ltd., All Rights Reserved.