ETV Bharat / state

ತುಳು ಲಿಪಿಗೆ ಮತ್ತೊಂದು ಮಾನ್ಯತೆ: ತುಳು-ತಿಗಳಾರಿ ಯೂನಿಕೋಡ್​ ಸೇರ್ಪಡೆ - Tulu Script Unicode

author img

By ETV Bharat Karnataka Team

Published : Sep 9, 2024, 1:13 PM IST

ತುಳು ಭಾಷೆಯ ಲಿಪಿ 'ತುಳು-ತಿಗಳಾರಿ' ಹೆಸರಿನಲ್ಲಿ ಯೂನಿಕೋಡ್‌ಗೆ ಸೇರ್ಪಡೆಗೊಂಡಿದೆ. ಮುಂದಿನ ದಿನಗಳಲ್ಲಿ ನ್ಯಾಚುರಲ್ ಲ್ಯಾಗ್ವೇಜ್ ಪ್ರೊಸೆಸಿಂಗ್, Text ಟು ಸ್ಪೀಚ್​, ಸ್ಪೀಚ್​ ಟು Text​ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್(AI)​ ಇವೆಲ್ಲವನ್ನೂ ಮಾಡಲು ಸಾಧ್ಯವಾಗಲಿದೆ.

ತುಳು ಲಿಪಿ
ತುಳು ವರ್ಣಮಾಲೆ (ETV Bharat)

ಮಂಗಳೂರು: ಇತ್ತೀಚೆಗೆ ಗೂಗಲ್​ ಟ್ರಾನ್ಸ್‌​ಲೇಟರ್​ನಲ್ಲಿ ತುಳು ಭಾಷೆಯನ್ನು ಸೇರ್ಪಡೆಗೊಳಿಸಿದ ನಂತರ ಇದೀಗ ತುಳು ಲಿಪಿ ಯೂನಿಕೋಡ್​​ನಲ್ಲಿ ಲಭ್ಯವಾಗುತ್ತಿದೆ. ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ಹಾಗೂ ಸಂವಿಧಾನದ 8ನೇ ಪರಿಚ್ಛೇದದಡಿ ತುಳು ಭಾಷೆ ಸೇರುವ ಅವಕಾಶವನ್ನು ಸರಕಾರ ಕಲ್ಪಿಸದಿದ್ದರೂ ತುಳು ಲಿಪಿ ಈಗ 'ಯೂನಿಕೋಡ್'ಗೆ ಸೇರ್ಪಡೆಯಾಗಿದೆ.

ಯೂನಿಕೋಡ್​ ಆವೃತ್ತಿ 16ರಲ್ಲಿ ತುಳು ಲಿಪಿ ಸೇರ್ಪಡೆಯಾಗಿದೆ. ಇದರಲ್ಲಿ ಒಟ್ಟು 80 ಅಕ್ಷರಗಳನ್ನು ಸೇರಿಸಲಾಗಿದೆ. ಯುನಿಕೋಡ್‌ನಲ್ಲಿ ತುಳು ಲಿಪಿ ಲಭ್ಯವಾಗಿರುವ ಕಾರಣ ಮುಂದಿನ ದಿನಗಳಲ್ಲಿ ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್, Text ಟು ಸ್ಪೀಚ್​, ಸ್ಪೀಚ್​ ಟು Text​ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ ಇವೆಲ್ಲವನ್ನೂ ಮಾಡಲು ಸಾಧ್ಯವಾಗಲಿದೆ.

2017ರಲ್ಲಿ ಯೂನಿಕೋಡ್​ ಅಗತ್ಯದ ಹಿನ್ನೆಲೆಯಲ್ಲಿ ತುಳು ಸಾಹಿತ್ಯ ಅಕಾಡೆಮಿಯು ತುಳು ಅಕ್ಷರಗಳನ್ನು ಅಂತಿಮಗೊಳಿಸಲು ಒಂದು ಸಮಿತಿ ರಚಿಸಿತ್ತು. ಮಾಹಿತಿ ತಂತ್ರಜ್ಞಾನ ತಜ್ಞರಾದ ಯು.ಬಿ.ಪವನಜ ತಾಂತ್ರಿಕ ಸಲಹೆ ನೀಡಿದ್ದರು. ಇದರಂತೆ ತುಳು ಅಕ್ಷರಗಳ ಪಟ್ಟಿ ಮಾಡಲಾಗಿತ್ತು. 80 ಪುಟಗಳ ಪಟ್ಟಿಯನ್ನು ಯುನಿಕೋಡ್‌ಗೆ ಕಳುಹಿಸಲಾಗಿತ್ತು. ಇದೇ ಸಂದರ್ಭ 'ತಿಗಳಾರಿ ಲಿಪಿ' ಎಂದು ಪ್ರತ್ಯೇಕ ಪ್ರಸ್ತಾವನೆ ಕೂಡ ಸಲ್ಲಿಸಲಾಗಿತ್ತು.

ಬಳಿಕ ಎರಡೂ ಕಡೆ ಹಲವು ಪತ್ರ ವ್ಯವಹಾರಗಳು ನಡೆದು ಅಂತಿಮವಾಗಿ 'ತುಳು-ತಿಗಳಾರಿ' ಹೆಸರಿನಲ್ಲಿ ಲಿಪಿಯನ್ನು ಯೂನಿಕೋಡ್‌ಗೆ ಸೇರಿಸಲಾಗಿದೆ. ಮಾಹಿತಿ ತಂತ್ರಜ್ಞಾನ ತಜ್ಞ ಯು.ಬಿ.ಪವನಜ‌ ಅವರು 2001ರಲ್ಲಿ ಯೂನಿಕೋಡ್​ ಕನ್ಸೋರ್ಶಿಯಂಗೆ ಹೋಗಿದ್ದಾಗ ಯೂನಿಕೋಡ್‌ನಲ್ಲಿ ಕನ್ನಡವನ್ನು ಸರಿಪಡಿಸಲು ಸಹಾಯ ಮಾಡಿದ್ದರು. ಆಗ ತುಳುವನ್ನು ಕೂಡ ಸೇರಿಸಬೇಕೆಂದು ಮನವಿ ಮಾಡಿದ್ದರು.

ಅದರಂತೆ, ತುಳುವಿಗೆ ಒಂದು ಜಾಗ ಕಾಯ್ದಿಟ್ಟಿದ್ದರು. ತುಳು ಯೂನಿಕೋಡ್ ಲಿಪಿ ಹೇಗಿರಬೇಕು ಎಂಬ ಕಡತ ಕಳುಹಿಸಿ ಎಂದು ಆಗ ಅವರು ಕೇಳಿಕೊಂಡಿದ್ದರು. ತುಳು ಅಕಾಡೆಮಿ ಕಳುಹಿಸಿದ ಅಕ್ಷರಗಳ ಪಟ್ಟಿಗೂ ಈಗ ತುಳು-ತಿಗಲಾರಿ ಹೆಸರಿನಲ್ಲಿ ಯುನಿಕೋಡ್‌ನವರು ಅಂತಿಮಗೊಳಿಸಿದ ಪಟ್ಟಿಗೂ ಸಣ್ಣಪುಟ್ಟ ವ್ಯತ್ಯಾಸಗಳಿವೆ. ಆದರೆ ಬಹುತೇಕ ಅಕ್ಷರಗಳು ಬಂದಿವೆ.

ಈಡೇರಿದ ಬಹು ವರ್ಷಗಳ ಕನಸು: "ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ" ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.

ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ ನೀಡಲಾಗಿತ್ತು. ನಂತರದ ದಿನಗಳಲ್ಲಿ ತಜ್ಞರು ನಿರಂತರವಾಗಿ ಈ ವಿಷಯದ ಬಗ್ಗೆ ಸತತ ಮನವಿಯನ್ನು, ಪರಿಷ್ಕರಣೆಗಳನ್ನು ಕಳುಹಿಸಿ ತುಳು ಲಿಪಿಯನ್ನು ಯೂನಿಕೋಡ್ ಅಂಗೀಕರಿಸುವಂತೆ ಮಾಡಿದ್ದಾರೆ.

ತುಳು ಲಿಪಿಯನ್ನು ಯೂನಿಕೋಡ್ ಅಂಗೀಕರಿಸುವ ನಿಟ್ಟಿನಲ್ಲಿ ತಜ್ಞರಾದ ಕೆ.ಪಿ.ರಾವ್, ಯು.ಬಿ.ಪವನಜ, ವೈಷ್ಣವಿ ಮೂರ್ತಿ, ಎಸ್.ಎ.ಕೃಷ್ಣಯ್ಯ, ರಾಧಕೃಷ್ಣ ಬೆಳ್ಳೂರು, ಭಾಸ್ಕರ್ ಶೇರಿಗಾರ್, ಎಸ್.ಆರ್.ವಿಘ್ನರಾಜ್, ಆಕಾಶ್ ರಾಜ್ ಸೇರಿದಂತೆ ಅನೇಕರು ಕೊಡುಗೆಗಳನ್ನು ನೀಡಿದ್ದಾರೆ.

ತುಳು ಲಿಪಿಗಿರುವ ಇನ್ನೊಂದು ಹೆಸರಿನ ಜೊತೆಗೆ ತುಳು-ತಿಗಳಾರಿ ಎಂಬುದಾಗಿ ಯೂನಿಕೋಡ್​ ಅಂಗೀಕರಿಸಿದೆ. ಈ ಮೂಲಕ ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ಲಭಿಸಿದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನ ಪ್ರಯತ್ನಕ್ಕೆ ಈಗ ಇನ್ನಷ್ಟು ಹೆಚ್ಚಿನ ಮಹತ್ವ ಬಂದಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ.

ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ಧ ಸಂದರ್ಭದಲ್ಲಿ 2017ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಅವರು ವಿಷಯ ಸಮನ್ವಯಕ್ಕಾಗಿ ತಜ್ಞರ ಸಮಿತಿ ರಚಿಸಿದ್ದರು. ಅಕಾಡೆಮಿ ವತಿಯಿಂದ ಸಹಕಾರ ನೀಡಲಾಗಿತ್ತು. ಅನಂತರದ ದಿನಗಳಲ್ಲಿ ತಜ್ಞರು ನಿರಂತರವಾಗಿ ಈ ವಿಷಯದ ಬಗ್ಗೆ ಸತತ ಮನವಿಯನ್ನು ಪರಿಷ್ಕರಣೆಗಳನ್ನು ಕಳುಹಿಸಿ ತುಳು ಲಿಪಿಯನ್ನು ಯುನಿಕೋಡ್ ಅಂಗೀಕರಿಸುವಂತೆ ಮಾಡಿದ್ದಾರೆ.

ತುಳು ಲಿಪಿಯನ್ನು ಯೂನಿಕೋಡ್ ಅಂಗೀಕರಿಸುವ ನಿಟ್ಟಿನಲ್ಲಿ ತಜ್ಞರಾದ ಕೆ.ಪಿ. ರಾವ್, ಯು.ಬಿ. ಪವನಜ, ವೈಷ್ಣವಿ ಮೂರ್ತಿ, ಎಸ್‌.ಎ. ಕೃಷ್ಣಯ್ಯ, ರಾಧಕೃಷ್ಣ ಬೆಳ್ಳೂರು, ಭಾಸ್ಕರ್ ಶೇರಿಗಾರ್, ಎಸ್.ಆರ್. ವಿಘ್ನರಾಜ್, ಆಕಾಶ್ ರಾಜ್ ಸಹಿತ ಅನೇಕರು ಕೊಡುಗೆ ನೀಡಿದ್ದಾರೆ. ಈ ಮೂಲಕ ಜಾಗತಿಕವಾಗಿ ತುಳು ಲಿಪಿಯಲ್ಲಿ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ಲಭಿಸಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೂಗಲ್ ಟ್ರಾನ್ಸ್​ಲೇಟ್‌​​ನಲ್ಲಿ ತುಳು ಭಾಷೆ ಸೇರ್ಪಡೆ - Google Translate

ETV Bharat Logo

Copyright © 2024 Ushodaya Enterprises Pvt. Ltd., All Rights Reserved.