ETV Bharat / state

ಗ್ಯಾರಂಟಿ ಫಲಾನುಭವಿಗಳು ಬಿಜೆಪಿಯ ಸುಳ್ಳೋತ್ಪಾದಕರಿಗೆ ಉತ್ತರ ಕೊಡಿ: ಸಿದ್ದರಾಮಯ್ಯ ಕರೆ - ಭೀಕರ ಬರಗಾಲ

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah spoke.
ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
author img

By ETV Bharat Karnataka Team

Published : Jan 29, 2024, 6:16 PM IST

ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು ಬಿಜೆಪಿ-ಆರ್​ಎಸ್​ಎಸ್​ ಸುಳ್ಳೋತ್ಪಾದಕರಿಗೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು.

ಐದು ಗ್ಯಾರಂಟಿ ಯೋಜನೆ: ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದಿದ್ದ ಸುಳ್ಳೋತ್ಪಾದಕರಿಗೆ ಈ ಕಾರ್ಯಕ್ರಮ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳು ಹೇಳುತ್ತಿರುವವರಿಗೆ ಸರಿಯಾಗಿ ಉತ್ತರ ನೀಡಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದು ದಾಖಲೆಗಳ ಸಮೇತ ವಿವರಿಸಿದರು.

ಕೇಂದ್ರ ಸರ್ಕಾರದಿಂದ ಬೆಲೆ ಏರಿಕೆ: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ. ಆದರೂ ಬಿಜೆಪಿ ಪರಿವಾರ ಸುಳ್ಳಿನ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದು ಸಿಎಂ ಆರೋಪಿಸಿದರು.

2013-18ರ ವರೆಗೆ ನಾವು ಕೊಟ್ಟ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ. ಉಳಿದ ಭರವಸೆಗಳನ್ನು ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಆದರೂ ಅವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎನ್ನುತ್ತ ಫಲಾನುಭವಿಗಳಿಗೆ ಸಿಎಂ ಲೆಕ್ಕ ನೀಡಿದರು.

ರಾಜ್ಯದ ಬಹುತೇಕ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನುಕೂಲಗಳು ತಲುಪುತ್ತಿವೆ. ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲ ಸಿಕ್ಕುತ್ತಿವೆ. ಯುವನಿಧಿಗಾಗಿ ಲಕ್ಷಾಂತರ ಯುವಕ ಯುವತಿಯರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ಡಿಸಿಎಂ ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು ಹಾಜರಿದ್ದರು.

ಇದನ್ನೂಓದಿ:ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದ ಸಿಎಂ: ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎಂದ ಹೆಚ್​ಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.