ತುಮಕೂರು: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಎತ್ತಿನ ಗಾಡಿ ಮೂಲಕ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಪ್ರಾರಂಭಿಕವಾಗಿ ನಗರದ ಟೌನ್ಹಾಲ್ ವೃತ್ತದ ಬಳಿ ಜಮಾಯಿಸಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಸಾಥ್ ನೀಡಿದರು.
ಎತ್ತಿನಗಾಡಿಯಲ್ಲಿ ಸಚಿವ ಪರಮೇಶ್ವರ್ ಹಾಗೂ ಕೆ ಎನ್ ರಾಜಣ್ಣ ಹಾಗೂ ಅಭ್ಯರ್ಥಿ ಮುದ್ದಹನುಮೇಗೌಡ ಮೊದಲಿಗೆ ಸ್ವಲ್ಪ ದೂರ ಸಾಗಿದರು. ನಂತರ ಬಿಜಿಎಸ್ ಸರ್ಕಲ್ನಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಯಿತು. ನಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಆಗಿರುವ ಶುಭಾ ಕಲ್ಯಾಣ್ಗೆ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ನಾಮಪತ್ರ ಸಲ್ಲಿಕೆ ವೇಳೆ ಸಚಿವರಾದ ಜಿ. ಪರಮೇಶ್ವರ್, ಕೆ ಎನ್ ರಾಜಣ್ಣ, ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಜರಿದ್ದರು.
ಮೆರವಣಿಗೆಯಲ್ಲಿ ಕಲಾತಂಡಗಳು ಗಮನ ಸೆಳೆದವು. ಡೊಳ್ಳುಕುಣಿತ, ಗಾರುಡಿ ಗೊಂಬೆ ಕುಣಿತ, ನಾಸಿಕ್ ಡೋಲ್, ವೀರಗಾಸೆ ನೃತ್ಯ ಪ್ರದರ್ಶನಗಳು ನಡೆದವು. ಡೊಳ್ಳು ಕುಣಿತ ತಂಡವು ಪಿರಮಿಡ್ ರಚಿಸುವುದರೊಂದಿಗೆ ಕಾಂಗ್ರೆಸ್ ಬಾವುಟಗಳು ರಾರಾಜಿಸಿದವು.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ಜೆಡಿಎಸ್ ರಾಜ್ಯಾಧ್ಯಕ್ಷರು ಬಂದ್ರೂ ಪ್ರೀತಂಗೌಡ ಗೈರು - Prajwal Revanna