ETV Bharat / state

ಸರ್ಕಾರದ ನಿರ್ಲಕ್ಷ್ಯದಿಂದ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿದೆ, ಮುಂಜಾಗ್ರತಾ ಕ್ರಮ ವಹಿಸಿಲ್ಲ : ಬಸವರಾಜ ಬೊಮ್ಮಾಯಿ - Crust gate chain cut - CRUST GATE CHAIN CUT

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ ಚೈನ್ ಕಟ್ ಆಗಿರುವ ಬಗ್ಗೆ ಮಾತನಾಡಿದ್ದಾರೆ. ಸರಿಯಾದ ನಿರ್ವಹಣೆ ಮಾಡದೆ ಈ ಸಮಸ್ಯೆ ಆಗಿದೆ ಎಂದು ಹೇಳಿದ್ದಾರೆ.

Former CM Basavaraja Bommai
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : Aug 11, 2024, 3:05 PM IST

Updated : Aug 11, 2024, 4:53 PM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ETV Bharat)

ಬೆಂಗಳೂರು : ಸರ್ಕಾರದ ನಿರ್ಲಕ್ಷ್ಯತನದಿಂದಲೇ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್​​ನ ಚೈನ್ ಲಿಂಕ್ ಕಡಿತವಾಗಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಡ್ಯಾಂನಲ್ಲೇ ಇಂಜಿನಿಯರ್​​ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತಗೋಬೇಕಿತ್ತು. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು. ನೋಡೋಣ ಗೊತ್ತಾಗುತ್ತದೆ ಏನಾಗಿದೆ ಅಂತ. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ ಎಂದು ಟೀಕಿಸಿದರು.

ತುಂಗಭದ್ರಾ ಡ್ಯಾಂ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಆಗಿರುವಂಥದ್ದು. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದೆ. ಹೂಳು ತುಂಬಿದ್ದಾಗ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಸಮಾನಾಂತರವಾದ ಡ್ಯಾಂ ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್​ಮೆಂಟ್ ಕಮಿಟಿ ಇರುತ್ತದೆ. ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆಗಳನ್ನು ಕೊಟ್ಟಿರುತ್ತಾರೆ. ಅವರು ರಾಜ್ಯಕ್ಕೆ ಸಲಹೆ ಕೊಡ್ತಾರೆ, ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನ್ಸುತ್ತೆ ಎಂದು ಆರೋಪಿಸಿದರು.

ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರ್ತಿರಲಿಲ್ಲ. ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು ಎಂದು ಸಲಹೆ ನೀಡಿದರು.

ಮೊದಲೇ ನೊಂದಿರುವ ಜನಕ್ಕೆ ಜಲಬಾಧೆ ಆವರಿಸದಿರಲಿ: ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಡ್ಯಾಮ್​ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು, ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ. ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ ಎಂದಿದ್ದಾರೆ.

ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ತುಂಗಭದ್ರಾ ಡ್ಯಾಂ ಗೇಟ್ ಚೈನ್ ಲಿಂಕ್ ಕಟ್: 2 ಲಕ್ಷ ಕ್ಯೂಸೆಕ್​ ನೀರು ಹರಿಬಿಡುವ ಸಾಧ್ಯತೆ - Tungabhadra Dam

Last Updated : Aug 11, 2024, 4:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.