ETV Bharat / state

ತೆರಿಗೆ ವಿಚಾರದಲ್ಲಿ ಸೂಕ್ತ ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವನೆ: ತುಷಾರ್ ಗಿರಿನಾಥ್

ಬಿಬಿಎಂಪಿ ವತಿಯಿಂದ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತೆರಿಗೆ ವಿಚಾರವಾಗಿ ಪ್ರತಿಕ್ರಿಯಿಸಿದರು.

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
author img

By ETV Bharat Karnataka Team

Published : Jan 26, 2024, 3:16 PM IST

ತುಷಾರ್ ಗಿರಿನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ತೆರಿಗೆ ಕಟ್ಟುವ ವಿಚಾರದಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬಿಬಿಎಂಪಿ ವತಿಯಿಂದ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದರು.

ತೆರಿಗೆ ವಿಚಾರದಲ್ಲಿ ಎರಡು ರೀತಿಯ ನಿರ್ದೇಶನವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ. ಮೊದಲನೆಯದು ಪೆನಾಲ್ಟಿ ಹಾಕುವ ವಿಚಾರ, ಎರಡನೇಯದು ಬಡ್ಡಿ ಹಾಕುವುದು. ಈ ಹಿನ್ನೆಲೆಯಲ್ಲಿ ಕಾನೂನಿಗೆ ಸೂಕ್ತ ತಿದ್ದುಪಡಿ ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಬಿಬಿಎಂಪಿ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ

ಮುಂದುವರೆದು ಮಾತನಾಡಿ, 74 ವರ್ಷದ ಗಣರಾಜ್ಯೋತ್ಸವವನ್ನು ಮುಗಿಸಿ 75ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಸಂವಿಧಾನದಲ್ಲಿರುವ ತತ್ವಗಳನ್ನು ನಮ್ಮ ಜೀವನದಲ್ಲಿ ಕೆಲಸ ಕಾರ್ಯಗಳಲ್ಲಿ ಅಳವಡಿಸಿಕೊಂಡು ಒಳ್ಳೆಯ ನಾಗರಿಕರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಆಡಳಿತಗಾರ ರಾಕೇಶ್ ಸಿಂಗ್, ವಿಶೇಷ ಆಯುಕ್ತರಾದ ಮುನೀಶ್ ಮೌನ್ಸಿಲ್, ಡಾ.ಹರೀಶ್ ಕುಮಾ‌ರ್, ಶಿವಾನಂದ್ ಕಲ್ಕೆರೆ, ಪ್ರೀತಿ ಗೆಲ್ಲೋಟ್, ಪೂರ್ವ ವಲಯ ಆಯುಕ್ತೆ ಸ್ನೇಹಲ್‌, ಉಪ ಆಯುಕ್ತ ಮಂಜುನಾಥ ಸ್ವಾಮಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ, ಬದ್ಧತೆ ಮೆರೆದಿದೆ: ರಾಜ್ಯಪಾಲ ಗೆಹ್ಲೋಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.