ಮಂಡ್ಯ: ಐಸ್ ಕ್ರೀಮ್ ಸೇವಿಸಿದ ಬಳಿಕ ಅಸ್ವಸ್ಥಗೊಂಡು, ಒಂದೂವರೆ ವರ್ಷದ ಅವಳಿ ಮಕ್ಕಳಿಬ್ಬರು ಸಾವನ್ನಪ್ಪಿದ್ದು, ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಬೆಟ್ಟಹಳ್ಳಿ ಗ್ರಾಮದ ಅವಳಿ ಮಕ್ಕಳಾದ ಪೂಜಾ ಮತ್ತು ಪ್ರಸನ್ನ ಮೃತಪಟ್ಟವರು. ಬುಧವಾರ ತಾಯಿ ಮತ್ತು ಮಕ್ಕಳು ಗ್ರಾಮದಲ್ಲಿ ಮಾರಾಟಕ್ಕೆ ಬಂದವರಿಂದ ಐಸ್ ಕ್ರೀಮ್ ಖರೀದಿಸಿ ಸೇವಿಸಿದ್ದರು. ಆ ಬಳಿಕ ಮೂವರೂ ಅನಾರೋಗ್ಯದಿಂದ ಬಳಲಿದ್ದಾರೆ. ಬಳಿಕ ಮನೆಯಲ್ಲಿಯೇ ಮಕ್ಕಳು ಸಾವನ್ನಪ್ಪಿದ್ದರೆ, ಅಸ್ವಸ್ಥಗೊಂಡ ತಾಯಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತ ಮಕ್ಕಳ ಶವಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮಕ್ಕಳ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿವೆ. ಈ ಬಗ್ಗೆ ಅರಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಐಸ್ ಕ್ರೀಮ್ ಮಾರಾಟ ಮಾಡಲು ಬಂದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಡಬ: ಎದೆಹಾಲು ಉಣಿಸುವ ವೇಳೆ ಮಗು ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ - Mother Suicide