ETV Bharat / state

ಬ್ಯಾಂಕ್ ಗ್ರಾಹಕರ ಸೋಗಿನಲ್ಲಿ ಹಣ ದೋಚುತ್ತಿದ್ದ ಇಬ್ಬರು ಆರೋಪಿಗಳ ಬಂಧನ - ROBBERY CASE

ಗ್ರಾಹಕರ ಸೋಗಿನಲ್ಲಿ ಬ್ಯಾಂಕ್​ನಲ್ಲಿ ಹೊಂಚು ಹಾಕಿ ಹಣ ದೋಚುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ROBBERY CASE
ಬಂಧಿತ ಆರೋಪಿಗಳು (ETV Bharat)
author img

By ETV Bharat Karnataka Team

Published : Feb 4, 2025, 3:31 PM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರನ್ನು ಹಿಂಬಾಲಿಸಿಕೊಂಡು ಬಂದು ಹಣ ದೋಚುತ್ತಿದ್ದ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್​​ನ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ದೇವನಹಳ್ಳಿಯ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶದ ಕೆ. ಹರಿಕೃಷ್ಣ ಮತ್ತು ತಮಿಳುನಾಡಿನ ಕೆ. ಸುಧಾಕರ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಜ. 4ರಂದು ಗ್ರಾಹಕರೊಬ್ಬರ ಹಣ ದೋಚಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್​ನಿಂದ ಹಣ ಡ್ರಾ ಮಾಡಲು ಹೋಗಿದ್ದ ಮಹೇಶ್ ಬಾಬು ಎಂಬುವರನ್ನು ಹಿಂಬಾಲಿಸಿಕೊಂಡು ಹೋಗಿದ್ದ ಬಂಧಿತರು, ವಿಜಯಪುರದ ಬುಲ್ಲಹಳ್ಳಿ ರಸ್ತೆಯಲ್ಲಿ ದರೋಡೆ ಮಾಡಿ 1.5 ಲಕ್ಷ ಹಣ ದೋಚಿ ಪರಾರಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಓಜಿಕುಪ್ಪಂ ಗ್ಯಾಂಗ್​ನ ಹರಿಕೃಷ್ಣ ಮತ್ತು ಸುಧಾಕರ್​ನನ್ನು ಬಂಧಿಸಿ, 50 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಸಿನಿಮೀಯ ರೀತಿ ದರೋಡೆ : ಮೂವರು ಖದೀಮರ ಬಂಧನ - ROBBERY IN YADGIRI

ETV Bharat Logo

Copyright © 2025 Ushodaya Enterprises Pvt. Ltd., All Rights Reserved.