ETV Bharat / state

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರು ಆರೋಪಿಗಳು ಅಂದರ್​ - Sexual assault on minor girl - SEXUAL ASSAULT ON MINOR GIRL

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ.

Sexual assault  Bengaluru  Kadugodi Police  POCSO Act
ಸಾಂದರ್ಭಿಕ ಚಿತ್ರ
author img

By ETV Bharat Karnataka Team

Published : Apr 29, 2024, 6:57 AM IST

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಚಾಕೋಲೆಟ್, ಬೊಂಬೆ ಕೊಡಿಸುವ ಆಮೀಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಚಿನ್ ಮತ್ತು ಶೇಖರ್ ಬಂಧಿತ ಆರೋಪಿಗಳು. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗಳ ವಿರುದ್ಧ ಏಪ್ರಿಲ್ 24ರಂದು ಕಾಡುಗೋಡಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆ ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಆರೋಪಿಗಳು ಕೂಡ ಸಮೀಪದಲ್ಲಿಯೇ ವಾಸವಿದ್ದರು. ಸಂತ್ರಸ್ತೆೆಯ ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ಹೋಗಿದ್ದಾಗ, ಆರೋಪಿಗಳು ಆಕೆಗೆ ಚಾಕೋಲೆಟ್ ಮತ್ತು ಬೊಂಬೆ ಕೊಡಿಸುತ್ತೇನೆ ಎಂದು ಹೇಳಿ ಆಕೆಯನ್ನು ತಮ್ಮ ಮನೆಗೆ ಕರೆದೊಯ್ದಿದ್ದರು.

ಮನೆಯಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದನ್ನು ಗಮನಿಸಿದ ಸ್ಥಳೀಯರು ಸಂತ್ರಸ್ತೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಪೋಷಕರು ಸ್ಥಳೀಯರ ಜೊತೆ ಆರೋಪಿಗಳ ಮನೆಗೆ ನುಗ್ಗಿ ಬಾಲಕಿಯನ್ನು ರಕ್ಷಿಸಿ, ಆರೋಪಿಗಳಿಗೆ ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು. ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಹೆಚ್​.ಡಿ.ರೇವಣ್ಣ, ಪ್ರಜ್ವಲ್​ ರೇವಣ್ಣ ವಿರುದ್ಧ ದೂರು - Sexual Assault Allegation

ETV Bharat Logo

Copyright © 2025 Ushodaya Enterprises Pvt. Ltd., All Rights Reserved.